Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:28 - ಕನ್ನಡ ಸಮಕಾಲಿಕ ಅನುವಾದ

28 ಜನರಲ್ಲಿ ಉಳಿದವರಾದ ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ದೇವಾಲಯದ ಸೇವಕರೂ, ದೇವರ ನಿಯಮದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರೆಲ್ಲರೂ, ಅವರ ಹೆಂಡತಿಯರೂ, ಅವರ ಪುತ್ರರೂ, ಅವರ ಪುತ್ರಿಯರೂ, ತಿಳುವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಉಳಿದ ಜನರು ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತವಾಗಿ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು ತಮ್ಮ ತಮ್ಮ ಹೆಂಡತಿಯರು, ಗ್ರಹಿಸಿಕೊಳ್ಳಲು ಶಕ್ತರಾದ ಗಂಡು ಹೆಣ್ಣು ಮಕ್ಕಳು ಇವರೊಡನೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಸ್ಥಾನ ಪರಿಚಾರಕರು, ಉಳಿದ ಜನರು, ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು, ತಮ್ಮ ತಮ್ಮ ಹೆಂಡತಿಯರು, ಗ್ರಹಿಸಲು ಶಕ್ತರಾದ ಗಂಡುಹೆಣ್ಣು ಮಕ್ಕಳು ಇವರೊಡನೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಸ್ಥಾನದಾಸರು, ಉಳಿದ ಜನರು ಇವರಲ್ಲಿ ದೇವರ ಧರ್ಮೋಪದೇಶದ ನಿವಿುತ್ತವಾಗಿ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು ತಮ್ಮ ತಮ್ಮ ಹೆಂಡತಿಯರು, ಗ್ರಹಿಸಶಕ್ತರಾದ ಗಂಡು ಹೆಣ್ಣು ಮಕ್ಕಳು ಇವರೊಡನೆ ಬಂದು ಮುಖಂಡರಾದ ತಮ್ಮ ಸಹೋದರರನ್ನು ಕೂಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28-29 ಹೀಗೆ ಇವರೆಲ್ಲಾ ಯೆಹೋವನಿಗೆ ಒಂದು ವಿಶೇಷವಾದ ವಾಗ್ದಾನವನ್ನು ಮಾಡಿದರು. ತಾವು ವಾಗ್ದಾನವನ್ನು ನೆರವೇರಿಸದೆ ಹೋದಲ್ಲಿ ಸಂಕಟಬಾಧೆಗಳು ಪ್ರಾಪ್ತವಾಗುವಂತೆ ಯೆಹೋವನನ್ನು ಕೇಳಿಕೊಂಡರು. ಇವರೆಲ್ಲಾ ದೇವರ ನೀತಿನಿಯಮಗಳನ್ನು ಅನುಸರಿಸುತ್ತೇವೆಂದು ಮಾತುಕೊಟ್ಟರು. ಆ ನೀತಿನಿಯಮಗಳನ್ನು ಯೆಹೋವನು ತನ್ನ ಸೇವಕನಾದ ಮೋಶೆಯ ಮೂಲಕ ನಮಗೆ ಕೊಟ್ಟನು. ಮೇಲೆ ಕಾಣಿಸಿದ ಹೆಸರುಗಳಲ್ಲದೆ ಉಳಿದ ಜನರು, ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಾಲಯದ ಸೇವಕರು ಮತ್ತು ಇಸ್ರೇಲಿನ ಜನರು ತಮ್ಮ ಸುತ್ತಲು ವಾಸಿಸುವ ಜನರಿಂದ ಪ್ರತ್ಯೇಕಿಸಲ್ಪಟ್ಟರು. ದೇವರ ವಿಧಿನಿಯಮಗಳನ್ನು ಅನುಸರಿಸುವುದಕ್ಕಾಗಿ ತಮ್ಮ ಹೆಂಡತಿ ಮಕ್ಕಳೊಂದಿಗೆ ಪ್ರತ್ಯೇಕಿಸಿಕೊಂಡರು. ದೇವರಿಗೆ ಮಾಡಿದ ಒಡಂಬಡಿಕೆಯನ್ನು ನಡೆಸಿಕೊಡಲು ಒಪ್ಪಿದರು ಮತ್ತು ಹಾಗೆ ಮಾಡದಿದ್ದಲ್ಲಿ ದೇವರಿಂದ ಸಂಕಟ ವ್ಯಾಧಿಗಳನ್ನು ಸ್ವೀಕರಿಸಲೂ ಒಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:28
16 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು, ತಮ್ಮ ಪಾಪಗಳನ್ನೂ, ತಮ್ಮ ಪಿತೃಗಳ ಪಾಪಗಳನ್ನೂ ಅರಿಕೆಮಾಡಿದರು.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನಾಗುವುದಕ್ಕೆ ಕರೆಹೊಂದಿದವನೂ ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಗೊಂಡವನೂ ಆಗಿರುವ ಪೌಲನು ಬರೆಯುವ ಪತ್ರ.


ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡುವೆ. ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯ ಬಯಸುವರು. ನನ್ನಲ್ಲಿಯೇ ಹೆಮ್ಮೆಪಡುವರು.”


ನೀನು ದುಡುಕಿ ಮಾತನಾಡಬೇಡ, ದೇವರ ಮುಂದೆ ಮಾತನಾಡಲು ನಿನ್ನ ಹೃದಯವು ಆತುರಪಡದೇ ಇರಲಿ. ದೇವರು ಪರಲೋಕದಲ್ಲಿದ್ದಾರೆ. ನೀನಾದರೋ ಭೂಮಿಯ ಮೇಲೆ ಇರುವೆ, ಆದಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.


ಏಕೆಂದರೆ, ದೇವರು ಭೂಮಿಗೆಲ್ಲಾ ಮಹಾರಾಜರು. ದೇವರನ್ನು ಸ್ತೋತ್ರದ ಕೀರ್ತನೆಯಿಂದ ಕೀರ್ತಿಸಿರಿ.


ಆಗ ಜನರು ದೇವರ ನಿಯಮವನ್ನು ಕೇಳಿದಾಗ, ಇಸ್ರಾಯೇಲರೊಳಗಿಂದ ವಿದೇಶಿ ಜನರನ್ನು ಪ್ರತ್ಯೇಕಿಸಿದರು.


ಹೀಗೆಯೇ ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ ಯಾಜಕನಾದ ಎಜ್ರನು ದೇವರ ನಿಯಮವನ್ನು ತೆಗೆದುಕೊಂಡು ಬಂದನು.


ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ದೇವಾಲಯದ ಸೇವಕರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಉಳಿದ ಇಸ್ರಾಯೇಲರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.


ಆದರೆ, “ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ.” ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಸೆರೆಯಿಂದ ತಿರುಗಿ ಬಂದ ಇಸ್ರಾಯೇಲರು ತಮ್ಮ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರನ್ನು ಹುಡುಕಲು ದೇಶದ ಜನಾಂಗಗಳ ಅಶುದ್ಧತೆಯಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡು, ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು,


ಮಲ್ಲೂಕ್, ಹಾರಿಮ್, ಬಾಣನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು