Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:29 - ಕನ್ನಡ ಸಮಕಾಲಿಕ ಅನುವಾದ

29 ತಮ್ಮ ಸಹೋದರರಾದ ತಮ್ಮ ಶ್ರೇಷ್ಠರ ಸಂಗಡ ಕೂಡಿಕೊಂಡು ದೇವರ ಸೇವಕ ಮೋಶೆಯ ಕೈಯಿಂದ ಕೊಟ್ಟ ದೇವರ ನಿಯಮದಂತೆ ನಡೆಯುತ್ತೇವೆಂದೂ, ನಮ್ಮ ಕರ್ತ ಆಗಿರುವ ಯೆಹೋವ ದೇವರ ಆಜ್ಞೆಗಳನ್ನೂ, ಅವರ ನ್ಯಾಯಗಳನ್ನೂ, ಅವರ ಕಟ್ಟಳೆಗಳನ್ನೂ, ಎಲ್ಲವನ್ನೂ ಕೈಗೊಂಡು ಮಾಡುತ್ತೇವೆಂದೂ ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮುಖಂಡರಾದ ತಮ್ಮ ಸಹೋದರರನ್ನು ಸೇರಿಕೊಂಡು, ದೇವರ ದಾಸ ಮೋಶೆಯ ಮುಖಾಂತರ ಕೊಡಲಾದ ದೇವರ ಧರ್ಮೋಪದೇಶವನ್ನು ತಾವು ಅನುಸರಿಸಿ, ತಮ್ಮ ಸರ್ವೇಶ್ವರನಾದ ದೇವರ ಎಲ್ಲ ಆಜ್ಞಾನಿಯಮವಿಧಿಗಳನ್ನು ಕೈಗೊಂಡು ನಡೆಯುವುದಾಗಿ, ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯುವದಾಗಿ ಆಣೆಯಿಟ್ಟು ಪ್ರಮಾಣಮಾಡಿದರು. ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:29
38 ತಿಳಿವುಗಳ ಹೋಲಿಕೆ  

ನನ್ನ ಆತ್ಮವನ್ನು ನಿಮ್ಮೊಳಗೆ ಇಡುವೆನು. ನೀವು ನನ್ನ ನಿಯಮಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಜಾಗರೂಕತೆಯಿಂದ ಅನುಸರಿಸಿ ನಡೆಯುವಿರಿ.


ನಿಮ್ಮ ನೀತಿಯ ನಿಯಮಗಳನ್ನು ಪಾಲಿಸುವೆನೆಂದು ನಾನು ಒಂದು ಶಪಥಮಾಡಿದ್ದೇನೆ; ಅದನ್ನು ನಾನು ದೃಢಪಡಿಸುವೆನು.


ನಾನು ನಿಮಗೆ ಆಜ್ಞಾಪಿಸಿದ್ದನ್ನು ಪಾಲಿಸಿದರೆ ನೀವು ನನ್ನ ಸ್ನೇಹಿತರು.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿ ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.


ಅರಸನು ತನ್ನ ಸ್ತಂಭದಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ದೇವರ ಸಾಕ್ಷಿಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ನೆರವೇರಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು.


ಅರಸನು ಸ್ತಂಭದ ಬಳಿಯಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ನಿಯಮಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು. ಜನರೆಲ್ಲರು ಹಾಗೆಯೇ ಒಡಂಬಡಿಕೆಗೆ ಒಪ್ಪಿದರು.


ನೀವು ಅವರ ಮಾತಿಗೆ ಒಪ್ಪಿಕೊಳ್ಳಬೇಡಿ, ಏಕೆಂದರೆ ನಾಲ್ವತ್ತಕ್ಕಿಂತಲೂ ಹೆಚ್ಚು ಜನರು ಅವನಿಗಾಗಿ ಹೊಂಚುಹಾಕಿದ್ದಾರೆ. ಅವನನ್ನು ಕೊಲ್ಲುವವರೆಗೆ ಊಟಮಾಡುವುದಿಲ್ಲ, ಪಾನ ಮಾಡುವುದಿಲ್ಲ, ಎಂದು ಅವರು ಶಪಥ ಮಾಡಿದ್ದಾರೆ. ಅವರ ಬೇಡಿಕೆಗೆ ನಿಮ್ಮ ಒಪ್ಪಿಗೆಯನ್ನೇ ಈಗ ಅವರು ಎದುರುನೋಡುತ್ತಾ ಇದ್ದಾರೆ,” ಎಂದು ಹೇಳಿದನು.


ಆದರೆ ಕೆಲವರು ಪೌಲನನ್ನು ಅಂಟಿಕೊಂಡು ದೇವರಲ್ಲಿ ವಿಶ್ವಾಸವನ್ನಿಟ್ಟರು. ಅವರಲ್ಲಿ ಅರಿಯೊಪಾಗದ ದಿಯೊನುಸ್ಯನು ಮತ್ತು ದಾಮರಿ ಎಂಬ ಹೆಸರಿನ ಒಬ್ಬ ಮಹಿಳೆ ಹಾಗೂ ಇನ್ನಿತರರೂ ಇದ್ದರು.


ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು.


ಮೋಶೆಯು ನಿಮಗೆ ನಿಯಮವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಯಾರೂ ಆ ನಿಯಮದಂತೆ ನಡೆಯುವುದಿಲ್ಲ. ನೀವು ನನ್ನನ್ನು ಕೊಲ್ಲಲು ಹುಡುಕುವುದೇಕೆ?” ಎಂದು ಕೇಳಿದರು.


ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.


“ನನ್ನ ಸೇವಕನಾದ ಮೋಶೆಯ ನಿಯಮವನ್ನು ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ವಿಧಿ ನಿಯಮಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.


ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾನೆ, ನೀವು ನನಗೆ ಕಿವಿಗೊಡದೆ, ನಾನು ನಿಮ್ಮ ಮುಂದೆ ಇಟ್ಟ ನನ್ನ ನಿಯಮದಲ್ಲಿ ನಡೆದುಕೊಳ್ಳದೆ,


ಯೆಹೋವ ದೇವರು ಯಾಕೋಬ್ಯರನ್ನು ಕರುಣಿಸುವರು. ಇಸ್ರಾಯೇಲರನ್ನು ಪುನಃ ಆಯ್ದುಕೊಳ್ಳುವರು. ಅವರನ್ನು ಅವರ ಸ್ವಂತ ದೇಶದಲ್ಲಿ ಸೇರಿಸುವರು. ಪರದೇಶದವರು ಅವರೊಂದಿಗೆ ಕೂಡಿಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ದೇವರ ಸೂತ್ರಗಳನ್ನು ಕೈಗೊಂಡು, ಅವರ ನಿಯಮಗಳನ್ನು ಇಸ್ರಾಯೇಲರು ಕಾಯಬೇಕೆಂಬ ಉದ್ದೇಶದಿಂದಲೇ ಹೀಗೆಲ್ಲಾ ಆಯಿತು. ಯೆಹೋವ ದೇವರನ್ನು ಸ್ತುತಿಸಿರಿ.


ನಮ್ಮ ಕರ್ತ ಆಗಿರುವ ಯೆಹೋವ ದೇವರೇ, ನಿಮ್ಮ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದಾಗಿದೆ!


ನಮ್ಮ ಕರ್ತ ಆಗಿರುವ ಯೆಹೋವ ದೇವರೇ, ನಿಮ್ಮ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ವೈಭವವುಳ್ಳದ್ದಾಗಿದೆ! ನೀವು ನಿಮ್ಮ ಮಹಿಮೆಯನ್ನು ಆಕಾಶಗಳಲ್ಲಿ ಸ್ಥಾಪಿಸಿದ್ದೀರಿ.


ಆಗ ನಾನು ಅವರನ್ನು ಗದರಿಸಿ, ಶಪಿಸಿ, ಅವರಲ್ಲಿ ಕೆಲವರನ್ನು ಹೊಡೆದು, ಅವರ ಕೂದಲನ್ನು ಕಿತ್ತು, “ನೀವು ನಿಮ್ಮ ಪುತ್ರಿಯರನ್ನು ಅವರ ಪುತ್ರರಿಗೂ, ಅವರ ಪುತ್ರಿಯರನ್ನು ನಿಮ್ಮ ಪುತ್ರರಿಗೂ, ಮದುವೆಮಾಡಿಕೊಡಬೇಡಿರಿ, ಎಂದು ದೇವರ ಹೆಸರಿನಲ್ಲಿ ಅವರಿಂದ ಪ್ರಮಾಣಮಾಡಿಸಿದೆನು.


“ಆದಕಾರಣ, ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ‘ನಿಮ್ಮ ಸಂತಾನದವರು, ನಿನ್ನಂತೆ ಜಾಗ್ರತೆಯಾಗಿದ್ದು, ನನ್ನ ನಿಯಮದ ಪ್ರಕಾರ ನಡೆದುಕೊಳ್ಳುವದಾದರೆ, ಅವರು ತಪ್ಪದೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊಳ್ಳುವರು,’ ಎಂದು ನೀವು ನನ್ನ ತಂದೆಯಾದ ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದನ್ನು ನೆರವೇರಿಸಿರಿ.


ಯೇಹುವು ತನ್ನ ಪೂರ್ಣಹೃದಯದಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ನಿಯಮದಲ್ಲಿ ನಡೆಯಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.


ಯಾಕೋಬನ ಸಂತತಿಯವರಾದ ನಮಗೆ, ಮೋಶೆಯು ನಿಯಮವನ್ನು ಸೊತ್ತಾಗಿ ಕೊಟ್ಟಿದ್ದಾನೆ.


ಹೀಗಿರುವುದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಅವುಗಳನ್ನು ಕೈಗೊಂಡು ನಡೆಯಬೇಕು. ಎಡಕ್ಕಾದರೂ, ಬಲಕ್ಕಾದರೂ ತಿರುಗಬೇಡಿರಿ.


ಮೋಶೆಯು ಇಸ್ರಾಯೇಲರನ್ನೆಲ್ಲಾ ಕರೆದು ಅವರಿಗೆ ಹೀಗೆ ಹೇಳಿದನು: ಇಸ್ರಾಯೇಲರೇ, ನಾನು ಈ ಹೊತ್ತು ನೀವು ಕೇಳುವಂತೆ ಹೇಳುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿರಿ. ಇವುಗಳನ್ನು ಕಲಿತು ಕೈಗೊಂಡು ನಡೆಯಬೇಕು.


ಯೆಹೋವ ದೇವರು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವನು. ನಿನ್ನ ಜನರು ನಿನ್ನನ್ನು ಶಪಿಸುವರು, ತಿರಸ್ಕರಿಸುವರು.


“ಇದೆಲ್ಲದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ. ನಮ್ಮ ಪ್ರಧಾನರೂ, ಲೇವಿಯರೂ, ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ,” ಎಂದು ಪ್ರಾರ್ಥಿಸಿದರು.


ನೀವೋ ಕೂಡಲೆ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ಬಿಡುಗಡೆಯನ್ನು ಪ್ರಕಟಿಸಿ, ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದಿರಿ. ನನ್ನ ಹೆಸರಿನಿಂದ ಖ್ಯಾತಗೊಂಡಿರುವ ದೇವಾಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಪ್ಪಂದ ಮಾಡಿಕೊಂಡಿರಿ.


ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ ಯೆಹೋವ ದೇವರಾದ ನಾನು ಪರಿಶುದ್ಧನಾಗಿರುವುದರಿಂದ, ನೀವು ನನಗೆ ಪರಿಶುದ್ಧರಾಗಿರಬೇಕು.


ತಮ್ಮ ಸ್ವಾಸ್ತ್ಯಗಳಲ್ಲಿ, ತಮ್ಮ ಪಟ್ಟಣಗಳಲ್ಲಿ ಮೊದಲು ವಾಸವಾಗಿದ್ದವರಲ್ಲಿ ಕೆಲವರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ ಮತ್ತು ದೇವಾಲಯದ ಸೇವಕರೂ ಆಗಿದ್ದರು.


ದೇವಾಲಯದ ಸೇವಕರು: ಜೀಹ, ಹಸೂಫ, ಟಬ್ಬಾವೋತ್,


ಹೀಗೆಯೇ ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ ಯಾಜಕನಾದ ಎಜ್ರನು ದೇವರ ನಿಯಮವನ್ನು ತೆಗೆದುಕೊಂಡು ಬಂದನು.


ಅನಂತರ ಎಜ್ರನು ನೀರಿನ ಬಾಗಿಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದವರೆಗೆ ಓದಿದನು. ಜನರೆಲ್ಲರು ನಿಯಮದ ಗ್ರಂಥಕ್ಕೆ ಕಿವಿಗೊಟ್ಟರು.


ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು, ತಮ್ಮ ಪಾಪಗಳನ್ನೂ, ತಮ್ಮ ಪಿತೃಗಳ ಪಾಪಗಳನ್ನೂ ಅರಿಕೆಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು