Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:31 - ಕನ್ನಡ ಸಮಕಾಲಿಕ ಅನುವಾದ

31 ಬೇರೆ ದೇಶದ ಜನರು ಸಬ್ಬತ್ ದಿನದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲು ತೆಗೆದುಕೊಂಡು ಬಂದರೆ, ನಾವು ಅವುಗಳನ್ನು ಸಬ್ಬತ್ ದಿನದಲ್ಲಾದರೂ, ಪರಿಶುದ್ಧ ದಿನದಲ್ಲಾದರೂ ಅವರಿಂದ ಕೊಂಡುಕೊಳ್ಳುವುದಿಲ್ಲ. ಮತ್ತು ನಾವು ಏಳನೆಯ ವರ್ಷದಲ್ಲಿ ಭೂಮಿ ಕೆಲಸ ಮಾಡುವುದನ್ನು ಬಿಡುತ್ತೇವೆ ಮತ್ತು ಎಲ್ಲಾ ಸಾಲಗಳನ್ನು ರದ್ದುಗೊಳಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ದೇಶನಿವಾಸಿಗಳು ಮಾರುವುದಕ್ಕೋಸ್ಕರ ತರುವ ಯಾವ ಸರಕುಗಳನ್ನೂ, ಧಾನ್ಯವನ್ನೂ, ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಅವುಗಳನ್ನು ನಾವು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷದ ಭೂಮಿಯ ಸಾಗುವಳಿಯನ್ನೂ ಇತರರು ಕೊಡಬೇಕಾದ ಸಾಲವನ್ನೂ ಮನ್ನಾ ಮಾಡಿಬಿಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ದೇಶನಿವಾಸಿಗಳು ಮಾರುವುದಕ್ಕೆ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್‍ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವುದಿಲ್ಲ; ಪ್ರತಿಯೊಂದು ಏಳನೆಯ ವರ್ಷ ಭೂಮಿಯ ಸಾಗುವಳಿಯನ್ನೂ, ಇತರರು ಕೊಡಬೇಕಾದ ಸಾಲವನ್ನೂ ಬಿಟ್ಟುಬಿಡುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ದೇಶನಿವಾಸಿಗಳು ಮಾರುವದಕ್ಕೋಸ್ಕರ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವದಿಲ್ಲ; ಪ್ರತಿಯೊಂದು ಏಳನೆಯ ವರುಷ [ಭೂವಿುಯ ಸಾಗುವಳಿಯನ್ನೂ ] ಹೆರರು ಕೊಡಬೇಕಾದ ಸಾಲವನ್ನೂ ಬಿಟ್ಟು ಬಿಡುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಸಬ್ಬತ್ ದಿನದಲ್ಲಿ ಯಾವ ಕೆಲಸವನ್ನೂ ಮಾಡುವುದಿಲ್ಲವೆಂದು ಪ್ರಮಾಣಮಾಡುತ್ತೇವೆ. ನಮ್ಮ ಸುತ್ತಮುತ್ತಲಿನ ಜನರು ಸಬ್ಬತ್ ದಿನದಲ್ಲಿ ಮಾರಲು ದವಸಧಾನ್ಯವನ್ನಾಗಲಿ ಬೇರೆ ವಸ್ತುಗಳನ್ನಾಗಲಿ ತಂದರೆ ನಾವು ಸಬ್ಬತ್ ದಿನದಲ್ಲಿ ಮತ್ತು ಇತರ ಯಾವುದೇ ಹಬ್ಬದ ದಿನದಲ್ಲಿ ಅವುಗಳನ್ನು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷ ನಾವು ನೆಡುವುದೂ ಇಲ್ಲ. ಹೊಲದಲ್ಲಿ ಕೆಲಸ ಮಾಡುವುದೂ ಇಲ್ಲ. ನಮಗೆ ಬೇರೆಯವರು ಕೊಡಬೇಕಾಗಿರುವ ಸಾಲವನ್ನು ಏಳನೆಯ ವರ್ಷದಲ್ಲಿ ವಜಾ ಮಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:31
24 ತಿಳಿವುಗಳ ಹೋಲಿಕೆ  

“ ‘ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಸಬ್ಬತ್ ದಿನ. ಆ ದಿನವು ಪರಿಶುದ್ಧ ದಿನವಾಗಿರುವುದು. ನೀವು ಆ ದಿನದಲ್ಲಿ ಕೆಲಸಮಾಡಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿಯೂ ಅದು ಯೆಹೋವ ದೇವರ ಸಬ್ಬತ್ ದಿನವಾಗಿರುವುದು.


ಆದರೆ ಏಳನೆಯ ದಿನ ನಿನ್ನ ದೇವರಾದ ಯೆಹೋವ ದೇವರ ಸಬ್ಬತ್ ದಿನವಾಗಿದೆ. ಅದರಲ್ಲಿ ನೀನಾಗಲೀ, ನಿನ್ನ ಮಗನಾಗಲೀ, ನಿನ್ನ ಮಗಳಾಗಲೀ, ನಿನ್ನ ದಾಸನಾಗಲೀ, ನಿನ್ನ ದಾಸಿಯಾಗಲೀ, ನಿನ್ನ ಪಶುಗಳಾಗಲೀ ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಸಹ ಯಾವ ಕೆಲಸವನ್ನೂ ಮಾಡಬಾರದು.


“ನಾನು ಆಯ್ದುಕೊಳ್ಳುವ ಉಪವಾಸವು ಅನ್ಯಾಯದ ಸರಪಣಿಯನ್ನು ಬಿಚ್ಚುವುದೂ, ಭಾರವಾದ ಹೊರೆಯನ್ನು ಬಿಚ್ಚುವುದೂ, ದಬ್ಬಾಳಿಕೆಯಾದವರನ್ನು ಬಿಡಿಸುವುದೂ, ನೊಗಗಳನ್ನೆಲ್ಲಾ ಮುರಿದುಹಾಕುವುದೂ, ಇವೇ ಅಲ್ಲವೋ?


ಹೀಗೆ ಯೆರೆಮೀಯನ ಮುಖಾಂತರವಾಗಿ ಹೇಳಿಸಿದ ಯೆಹೋವ ದೇವರ ವಾಕ್ಯವು ನೆರವೇರಿತು. ದೇಶವು ಅದರ ಸಬ್ಬತ್ ದಿನಗಳನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು, ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಾ ಇತ್ತು.


ಅದೇ ದಿನದಲ್ಲಿ ಪವಿತ್ರ ಸಭೆ ಕೂಡುವುದೆಂದು ಪ್ರಕಟಿಸಬೇಕು ಮತ್ತು ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ, ನೀವು ಎಲ್ಲೇ ಇದ್ದರೂ ಪಾಲಿಸಬೇಕಾದ ಶಾಶ್ವತ ನಿಯಮ.


“ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ, ನಿಮ್ಮೊಡನೆ ವಾಸಿಸುತ್ತಿರುವ ಪರಕೀಯರೂ, ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಎಲ್ಲಾ ಕೆಲಸಗಳನ್ನು ಬಿಟ್ಟು, ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು.


ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು, ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಬೇಕು. ಊಟಕ್ಕೆ ಬೇಕಾದದ್ದನ್ನು ಮಾಡುವುದನ್ನು ಬಿಟ್ಟು, ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡಬಾರದು.


ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.


ಹೀಗಿರಲಾಗಿ, ಅನ್ನಪಾನಗಳ ವಿಷಯದಲ್ಲಿಯೂ ಹಬ್ಬ ಅಮಾವಾಸ್ಯೆ ಸಬ್ಬತ್ ದಿನ ಮುಂತಾದವುಗಳ ವಿಷಯದಲ್ಲಿಯೂ ಯಾರೂ ನಿಮ್ಮನ್ನು ತೀರ್ಪು ಮಾಡದಿರಲಿ.


ನಮಗೆ ಸಾಲಮಾಡಿದವರನ್ನು ನಾವು ಕ್ಷಮಿಸಿದಂತೆ, ನಮ್ಮ ಸಾಲಗಳನ್ನು ಕ್ಷಮಿಸಿರಿ.


ಇದಲ್ಲದೆ ಅವರ ಪುತ್ರಿಯರನ್ನು ನಿನ್ನ ಪುತ್ರರಿಗೋಸ್ಕರ ತೆಗೆದುಕೊಳ್ಳಬೇಕಾಗಬಹುದು. ತೆಗೆದುಕೊಂಡರೆ ಅವರ ಪುತ್ರಿಯರು ತಮ್ಮ ದೇವರುಗಳನ್ನು ಆರಾಧಿಸಿ, ನಿಮ್ಮ ಪುತ್ರರನ್ನೂ ಅನ್ಯದೇವರುಗಳ ಆರಾಧನೆಯೆಂಬ ವ್ಯಭಿಚಾರಕ್ಕೆ ಎಳೆಯಬಹುದು.


ಆ ದಿನಗಳಲ್ಲಿ ಅಮ್ಮೋನ್, ಮೋವಾಬ್, ಅಷ್ಡೋದ್ ಎಂಬ ದೇಶಗಳ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕಂಡೆನು.


ನೀವು ವಿದೇಶಿ ಸ್ತ್ರೀಯರನ್ನು ಮದುವೆಮಾಡಿಕೊಂಡು, ನಮ್ಮ ದೇವರಿಗೆ ಅಪರಾಧಮಾಡಿ, ಅದೇ ಘೋರವಾದ ದುಷ್ಕೃತ್ಯವನ್ನು ಮಾಡಲು ನಾವು ಒಪ್ಪಿಕೊಳ್ಳುವುದಿಲ್ಲ ನಿಮ್ಮ ಮಾತು ಕೇಳಬಹುದೋ?” ಎಂದು ಗದರಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು