33 ಆ ಹಣವು ದೇವರ ಸನ್ನಿಧಿಯಲ್ಲಿ ಇಡತಕ್ಕ ರೊಟ್ಟಿ, ನಿತ್ಯಧಾನ್ಯ, ನೈವೇದ್ಯ ಇವುಗಳಿಗಾಗಿಯೂ, ನಿತ್ಯ ಸರ್ವಾಂಗಹೋಮ, ಸಬ್ಬತ್ ದಿನ, ಅಮಾವಾಸ್ಯೆ ಮತ್ತು ಜಾತ್ರೆ ಉತ್ಸವ ಇವುಗಳಲ್ಲಿ ಮಾಡಬೇಕಾಗಿರುವ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲರ ದೋಷಪರಿಹಾರಕ ಯಜ್ಞ ಇವುಗಳಿಗಾಗಿಯೂ ನಮ್ಮ ದೇವರ ದೇವಾಲಯಕ್ಕೆ ಸಂಬಂಧವಾದ ಬೇರೆ ಎಲ್ಲಾ ಕೆಲಸಕಾರ್ಯಗಳಿಗಾಗಿಯೂ ವೆಚ್ಚವಾಗಬೇಕು.
33 ಈ ನಾಣ್ಯ, ದೇವರ ಸನ್ನಿಧಿಯಲ್ಲಿಡತಕ್ಕ ರೊಟ್ಟಿ, ನಿತ್ಯ ಧಾನ್ಯ, ನೈವೇದ್ಯ ಇವುಗಳಿಗಾಗಿ; ಹಾಗು ನಿತ್ಯ ದಹನಬಲಿ ಮತ್ತು ಸಬ್ಬತ್‍ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಮಾಡತಕ್ಕ ದಹನಬಲಿ, ಶಾಂತಿಸಮಾಧಾನ ಬಲಿ, ಇಸ್ರಯೇಲರ ದೋಷಪರಿಹಾರಾರ್ಥವಾದ ಬಲಿ, ಇವುಗಳಿಗಾಗಿ ಹಾಗು ನಮ್ಮ ದೇವಾಲಯ ಸಂಬಂಧವಾದ ಬೇರೆ ಎಲ್ಲ ಕೆಲಸಕಾರ್ಯಗಳಿಗಾಗಿ ವೆಚ್ಚವಾಗಬೇಕು;
33 ಆ ಹಣವು ದೇವರ ಸನ್ನಿಧಿಯಲ್ಲಿಡತಕ್ಕ ರೊಟ್ಟಿ, ನಿತ್ಯಧಾನ್ಯ ನೈವೇದ್ಯ ಇವುಗಳಿಗೋಸ್ಕರವೂ ನಿತ್ಯಸರ್ವಾಂಗಹೋಮ ಮತ್ತು ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಮಾಡತಕ್ಕ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲ್ಯರ ದೋಷಪರಿಹಾರಾರ್ಥವಾದ ಯಜ್ಞ ಇವುಗಳಿಗೋಸ್ಕರವೂ ನಮ್ಮ ದೇವಾಲಯ ಸಂಬಂಧವಾದ ಬೇರೆ ಎಲ್ಲಾ ಕೆಲಸಕ್ಕೋಸ್ಕರವೂ ವೆಚ್ಚವಾಗಬೇಕು;
33 ಪ್ರತಿದಿನ ದೇವಾಲಯದೊಳಗೆ ಮೇಜಿನ ಮೇಲೆ ಇಡುವ ರೊಟ್ಟಿಗಳಿಗಾಗಿಯೂ ದಿನನಿತ್ಯದ ಸರ್ವಾಂಗಹೋಮಗಳಿಗೂ ಧಾನ್ಯಸರ್ಮರ್ಪಣೆಗೂ ಈ ಹಣವನ್ನು ಉಪಯೋಗಿಸಿರಿ. ಅಮಾವಾಸ್ಯೆ, ಸಬ್ಬತ್ ಮತ್ತು ಇತರ ವಿಶೇಷ ಸಭಾಕೂಟಗಳಲ್ಲಿ ಮಾಡುವ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ಇಸ್ರೇಲರನ್ನು ಶುದ್ಧರನ್ನಾಗಿ ಮಾಡುವ ಪವಿತ್ರ ಯಜ್ಞಗಳಿಗಾಗಿ ಮತ್ತು ಪಾಪಪರಿಹಾರಕ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ನಮ್ಮ ದೇವರ ಆಲಯದ ಯಾವ ಕಾರ್ಯಗಳಿಗೆ ಬೇಕಾದರೂ ಈ ಹಣವನ್ನು ಉಪಯೋಗಿಸಿರಿ.
ನನ್ನ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವುದಕ್ಕೂ, ದೇವಸನ್ನಿಧಿಗೆ ಪರಿಮಳ ಧೂಪವನ್ನು ಅರ್ಪಿಸುವ ನಿತ್ಯ ಸಮ್ಮುಖದ ರೊಟ್ಟಿಗೋಸ್ಕರವೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಇಸ್ರಾಯೇಲರಿಗೆ ನಿರಂತರವಾಗಿರಲು ನೇಮಿಸಿದ ನಮ್ಮ ದೇವರಾದ ಯೆಹೋವ ದೇವರ ಹಬ್ಬಗಳಲ್ಲಿಯೂ, ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ನಮ್ಮ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.
ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ದೇವದರ್ಶನದ ಗುಡಾರದ ಕೆಲಸಕ್ಕಾಗಿ ಪ್ರತ್ಯೇಕಿಸಬೇಕು. ಇದೇ ಯೆಹೋವ ದೇವರ ಮುಂದೆ ಇಸ್ರಾಯೇಲರಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಯಶ್ಚಿತ್ತಕ್ಕಾಗಿಯೂ ಇರುವುದು,” ಎಂದರು.