Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:34 - ಕನ್ನಡ ಸಮಕಾಲಿಕ ಅನುವಾದ

34 ಮೋಶೆಯ ನಿಯಮದಲ್ಲಿ ಬರೆದ ಹಾಗೆ ನಮ್ಮ ದೇವರಾಗಿರುವ ಯೆಹೋವ ದೇವರ ಬಲಿಪೀಠದ ಮೇಲೆ ಅರ್ಪಿಸುವುದಕ್ಕೆ ನೇಮಿತವಾದ ಕಾಲಗಳಲ್ಲಿ, ವರ್ಷ ವರ್ಷಕ್ಕೆ ನಮ್ಮ ಪಿತೃಗಳ ಗೋತ್ರಗಳ ಪ್ರಕಾರ ನಮ್ಮ ದೇವಾಲಯದೊಳಗೆ ತೆಗೆದುಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ, ಲೇವಿಯರಿಗೂ, ಜನರಿಗೂ ಚೀಟಿಗಳನ್ನು ಹಾಕಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮೇಲೆ ಬೆಂಕಿ ಉರಿಸುವುದಕ್ಕಾಗಿ, ಪ್ರತಿ ವರ್ಷವೂ ನಿಯಮಿತ ಕಾಲಗಳಲ್ಲಿ ನಮ್ಮ ದೇವಾಲಯಕ್ಕೆ ಕಟ್ಟಿಗೆ ದೊರಕುವ ಹಾಗೆ, ಆಯಾ ಗೋತ್ರಾನುಸಾರ ಕಟ್ಟಿಗೆ ದಾನ ಮಾಡತಕ್ಕವರು ಇಂಥವರೇ ಎಂಬುದನ್ನು ಯಾಜಕರೂ, ಲೇವಿಯರೂ, ಸಾಧಾರಣ ಜನರೂ ಆಗಿರುವ ನಮ್ಮಲ್ಲಿ ಚೀಟು ಹಾಕಿ ಗೊತ್ತುಮಾಡಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಧರ್ಮಶಾಸ್ತ್ರವಿಧಿಗನುಸಾರ, ನಮ್ಮ ದೇವರಾದ ಸರ್ವೇಶ್ವರನ ಬಲಿಪೀಠದ ಮೇಲೆ ಬೆಂಕಿಯುರಿಸುವುದಕ್ಕಾಗಿ ವರ್ಷವರ್ಷವೂ ನೇಮಿತವಾದ ಕಾಲಗಳಲ್ಲಿ, ನಮ್ಮ ದೇವಾಲಯಕ್ಕೆ ಸೌದೆ ದೊರಕುವ ಹಾಗೆ ಆಯಾ ಗೋತ್ರಾನುಸಾರ ಕಟ್ಟಿಗೆ ದಾನಮಾಡತಕ್ಕವರು ಇಂತಿಂಥವರು ಎಂಬುದನ್ನು ಯಾಜಕರೂ ಲೇವಿಯರೂ ಜನಸಾಮಾನ್ಯರೂ ಸೇರಿ, ನಮ್ಮಲ್ಲೇ ಚೀಟುಹಾಕಿ ಗೊತ್ತುಮಾಡುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಧರ್ಮಶಾಸ್ತ್ರವಿಧಿಗನುಸಾರವಾಗಿ ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮೇಲೆ ಬೆಂಕಿಯುರಿಸುವದಕ್ಕಾಗಿ ವರುಷ ವರುಷ ನೇವಿುತವಾದ ಕಾಲಗಳಲ್ಲಿ ನಮ್ಮ ದೇವಾಲಯಕ್ಕೆ ಕಟ್ಟಿಗೆ ದೊರಕುವ ಹಾಗೆ ಆಯಾಗೋತ್ರಾನುಸಾರ ಕಾಷ್ಠದಾನ ಮಾಡತಕ್ಕವರು ಇಂಥವರು ಎಂಬದನ್ನು ಯಾಜಕರೂ ಲೇವಿಯರೂ ಸಾಧಾರಣ ಜನರೂ ಆಗಿರುವ ನಮ್ಮಲ್ಲಿ ಚೀಟುಹಾಕಿ ಗೊತ್ತುಮಾಡುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ನಾವು ಅಂದರೆ ಯಾಜಕರು, ಲೇವಿಯರು ಮತ್ತು ಇತರ ಜನರು ಒಟ್ಟಾಗಿ ಸೇರಿ ದೇವಾಲಯದಲ್ಲಿ ಯಜ್ಞ ಹೋಮಗಳನ್ನರ್ಪಿಸುವುದಕ್ಕೆ ಬೇಕಾದ ಕಟ್ಟಿಗೆಯನ್ನು ಪ್ರತಿಯೊಂದು ಕುಟುಂಬವು ವರ್ಷಕ್ಕೊಮ್ಮೆ ತಮಗೆ ನಿಗದಿತವಾದ ಸಮಯದಲ್ಲಿ ತಂದು ಒದಗಿಸುವುದಕ್ಕೆ ಚೀಟು ಹಾಕಿದೆವು. ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ನಾವು ಮಾಡಬೇಕಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:34
16 ತಿಳಿವುಗಳ ಹೋಲಿಕೆ  

ನೇಮಿತ ಕಾಲದಲ್ಲಿ ಸಲ್ಲತಕ್ಕ ಅರ್ಪಣೆಯ ಕಟ್ಟಿಗೆಗಳನ್ನೂ, ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ಇದನ್ನು ಸಹ ನನ್ನ ಮೇಲಿನ ನಿಮ್ಮ ದಯೆಯೊಂದಿಗೆ ನನ್ನನ್ನು ನೆನಪುಮಾಡಿಕೊಳ್ಳಿರಿ.


ಲೆಬನೋನು ಯಜ್ಞವೇದಿಯ ಬೆಂಕಿಗೆ ಸಾಲದು: ಅದರ ಪ್ರಾಣಿಗಳು ದಹನಬಲಿಗಳಿಗೆ ಸಾಧನವು.


ಚೀಟು ಹಾಕುವುದರಿಂದ ವ್ಯಾಜ್ಯಶಮನ; ಬಲಿಷ್ಠ ಪ್ರತಿವಾದಿಗಳ ವಿವಾದಗಳನ್ನು ಸಹ ಬಗೆಹರಿಸುತ್ತದೆ.


ಈಗ ಜನರ ನಾಯಕರು ಯೆರೂಸಲೇಮಿನಲ್ಲಿ ನೆಲೆಸಿದರು. ಉಳಿದ ಜನರೊಳಗೆ ಹತ್ತು ಮಂದಿಯಲ್ಲಿ ಒಂಬತ್ತು ಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಹತ್ತರಲ್ಲೊಬ್ಬರು ಪವಿತ್ರ ನಗರವಾದ ಯೆರೂಸಲೇಮಿನಲ್ಲಿ ಬಂದು ವಾಸಿಸಲು ಚೀಟುಹಾಕಿದರು.


ಮೊದಲನೆಯ ಚೀಟು ಯೆಹೋಯಾರೀಬನಿಗೆ ಬಿದ್ದಿತು; ಎರಡನೆಯದು ಯೆದಾಯನಿಗೆ,


ಇವರು ಸಹ ಚೀಟುಹಾಕುವ ಮೂಲಕ ನಿಷ್ಪಕ್ಷಪಾತವಾಗಿ ವಿಭಾಗವಾಗಿದ್ದರು. ಏಕೆಂದರೆ ಪರಿಶುದ್ಧ ಸ್ಥಾನದ ಪ್ರಧಾನರೂ, ದೇವರ ಪ್ರಧಾನರೂ ಎಲಿಯಾಜರನ ಪುತ್ರರೂ, ಈತಾಮಾರನ ಪುತ್ರರೂ ಇದ್ದರು.


ಯೆಹೋಶುವನು ಆ ದಿನ ಇರುವ ಹಾಗೆ ಗಿಬ್ಯೋನಿನವರ ಸಮೂಹಕ್ಕೂ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿರುವ ಅವರ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸ ಮಾಡುತ್ತಾರೆ.


ಅನಂತರ ಅವರು ಚೀಟು ಹಾಕಲು, ಅದು ಮತ್ತೀಯನ ಪಾಲಿಗೆ ಬಂದಿತು; ಆದ್ದರಿಂದ ಅವನು ಹನ್ನೊಂದು ಜನ ಅಪೊಸ್ತಲರೊಂದಿಗೆ ಸೇರಿದನು.


“ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಓಮರನಷ್ಟು ಇರಬೇಕು.


ಅವುಗಳನ್ನು ಚೊಕ್ಕ ಬಂಗಾರದ ಮೇಜಿನ ಮೇಲೆ ಯೆಹೋವ ದೇವರ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ, ಎರಡು ಸಾಲುಗಳನ್ನಾಗಿ ಇಡಬೇಕು.


“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುವಾಸನೆಗೋಸ್ಕರ ಅರ್ಪಿಸುವ ಅಂದರೆ, ದಹನಬಲಿಗಾಗಿ ಆಹಾರವನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವಂತೆ ನೀವು ನೋಡಿಕೊಳ್ಳಿರಿ.’


ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ, “ನೀನು ನನ್ನ ತಂದೆ ದಾವೀದನಿಗೆ ವಾಸವಾಗಿರುವ ಅರಮನೆಯನ್ನು ಕಟ್ಟಿಸಲು, ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ, ಹಾಗೆಯೇ ನನಗೂ ಮಾಡು.


ಅದರ ತರುವಾಯ ಅವರು ನಿತ್ಯ ದಹನಬಲಿ, ಅಮಾವಾಸ್ಯೆ ಬಲಿ, ಯೆಹೋವ ದೇವರ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಜನರು ಅರ್ಪಿಸುವ ಸ್ವಂತ ಇಚ್ಛೆಯಿಂದ ತಂದ ಬಲಿದಾನಗಳ ಬಲಿಯನ್ನೂ ಸಮರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು