ನೆಹೆಮೀಯ 10:36 - ಕನ್ನಡ ಸಮಕಾಲಿಕ ಅನುವಾದ36 ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ನಮ್ಮ ಪುತ್ರರಲ್ಲಿಯೂ, ನಮ್ಮ ಪಶುಗಳಲ್ಲಿಯೂ ಚೊಚ್ಚಲಾದವುಗಳನ್ನು; ನಮ್ಮ ದನಗಳಲ್ಲಿಯೂ, ಮಂದೆಗಳಲ್ಲಿಯೂ ಚೊಚ್ಚಲಾದವುಗಳನ್ನು, ನಮ್ಮ ದೇವರ ಆಲಯಕ್ಕೆ ತಂದು, ನಮ್ಮ ದೇವರ ಆಲಯದಲ್ಲಿ ಸೇವಿಸುವ ಯಾಜಕರಿಗೆ ಕೊಡುತ್ತೇವೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ, ನಮ್ಮ ಪಶುಗಳ ಹಿಂಡುಗಳಲ್ಲಿ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಡೆದುಕೊಳ್ಳುವೆವು. ನಮ್ಮ ಚೊಚ್ಚಲ ಕರುಗಳನ್ನೂ, ಚೊಚ್ಚಲ ಆಡು, ಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡೆಸುತ್ತಿರುವ ಯಾಜಕರಿಗೆ ಕೊಡುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ ನಮ್ಮ ಪ್ರಾಣಿಪಶುಗಳ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರ ವಿಧಿಗನುಸಾರವಾಗಿ ನಡೆಯುತ್ತೇವೆ; ನಮ್ಮ ಚೊಚ್ಚಲ ಕರುಗಳನ್ನೂ ಚೊಚ್ಚಲ ಆಡುಕುರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಸೇವೆಯಲ್ಲಿ ಇರುವ ಯಾಜಕರಿಗೆ ಕೊಡುತ್ತೇವೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ ನಮ್ಮ ಪಶುಗಳ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರ ವಿಧಿಗನುಸಾರವಾಗಿ ನಡೆಯುವೆವು; ನಮ್ಮ ಚೊಚ್ಚಲ ಕರುಗಳನ್ನೂ ಚೊಚ್ಚಲ ಆಡುಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡಿಸುತ್ತಿರುವ ಯಾಜಕರಿಗೆ ಕೊಡುವೆವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 “ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ನಾವು ನಮ್ಮ ಚೊಚ್ಚಲು ಮಕ್ಕಳನ್ನು, ಚೊಚ್ಚಲು ದನ, ಕುರಿ, ಆಡುಗಳನ್ನು ದೇವಾಲಯದಲ್ಲಿ ಸೇವೆಮಾಡುತ್ತಿರುವ ಯಾಜಕರಿಗೆ ಒಪ್ಪಿಸುವೆವು. ಅಧ್ಯಾಯವನ್ನು ನೋಡಿ |
ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ, ಲೇವಿಯರಿಗೋಸ್ಕರವೂ ಮೋಶೆಯ ನಿಯಮದಲ್ಲಿ ನೇಮಕವಾದ ಪ್ರಕಾರ, ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ, ಬೊಕ್ಕಸಗಳನ್ನೂ, ಕಾಣಿಕೆಗಳನ್ನೂ, ಪ್ರಥಮ ಫಲಗಳನ್ನೂ, ಹತ್ತನೆಯ ಪಾಲುಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. ಏಕೆಂದರೆ ಸೇವೆಮಾಡುತ್ತಿದ್ದ ಯಾಜಕರನ್ನೂ, ಲೇವಿಯರನ್ನೂ ಕುರಿತು ಯೆಹೂದದವರು ಬಹು ಸಂತೋಷಪಟ್ಟರು.