Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:1 - ಕನ್ನಡ ಸಮಕಾಲಿಕ ಅನುವಾದ

1 ಈಗ ಜನರ ನಾಯಕರು ಯೆರೂಸಲೇಮಿನಲ್ಲಿ ನೆಲೆಸಿದರು. ಉಳಿದ ಜನರೊಳಗೆ ಹತ್ತು ಮಂದಿಯಲ್ಲಿ ಒಂಬತ್ತು ಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಹತ್ತರಲ್ಲೊಬ್ಬರು ಪವಿತ್ರ ನಗರವಾದ ಯೆರೂಸಲೇಮಿನಲ್ಲಿ ಬಂದು ವಾಸಿಸಲು ಚೀಟುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರ ಪ್ರಮುಖರು ಮಾತ್ರ ಜೆರುಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತುಹತ್ತು ಮಂದಿಯಲ್ಲಿ ಒಂಬತ್ತುಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಒಬ್ಬನು ಪವಿತ್ರ ನಗರವಾದ ಜೆರುಸಲೇಮಿನಲ್ಲಿ ವಾಸಿಸುವುದಕ್ಕಾಗಿ, ಅಲ್ಲಿಗೆ ಬರುವಂತೆ ಚೀಟುಹಾಕಿ ಗೊತ್ತುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರ ಪ್ರಭುಗಳು ಮಾತ್ರ ಯೆರೂಸಲೇವಿುನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತತ್ತು ಮಂದಿಯಲ್ಲಿ ಒಂಭತ್ತು ಮಂದಿ ತಮ್ಮ ತಮ್ಮ ಊರುಗಳಲ್ಲಿದ್ದುಕೊಂಡು ಒಬ್ಬನು ಪವಿತ್ರನಗರವಾಗಿರುವ ಯೆರೂಸಲೇವಿುನಲ್ಲಿ ವಾಸಿಸುವದಕ್ಕಾಗಿ ಅಲ್ಲಿಗೆ ಬರುವಂತೆ ಚೀಟುಹಾಕಿ ಗೊತ್ತು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲರ ನಾಯಕರುಗಳು ಜೆರುಸಲೇಮ್ ನಗರದೊಳಗೆ ಬಂದು ನೆಲೆಸಿದ್ದರು. ಬೇರೆ ಯಾರು ಪಟ್ಟಣದೊಳಗೆ ನೆಲೆಸಬಹುದೆಂಬುದನ್ನು ಉಳಿದ ಇಸ್ರೇಲರು ತೀರ್ಮಾನ ಮಾಡಬೇಕಿತ್ತು. ಆದ್ದರಿಂದ ಚೀಟು ಹಾಕಿದರು. ಹತ್ತು ಮಂದಿಯಲ್ಲಿ ಒಬ್ಬನು ಪರಿಶುದ್ಧ ನಗರವಾದ ಜೆರುಸಲೇಮಿನಲ್ಲಿ ವಾಸಿಸಬೇಕೆಂದೂ ಉಳಿದ ಒಂಭತ್ತು ಮಂದಿ ತಮ್ಮ ಸ್ವಂತ ಊರುಗಳಲ್ಲಿ ವಾಸಿಸಬಹುದೆಂದೂ ಇದರಿಂದ ತಿಳಿದುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:1
21 ತಿಳಿವುಗಳ ಹೋಲಿಕೆ  

ಏಕೆಂದರೆ ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು.


ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ವೈಭವದ ಉಡುಪುಗಳನ್ನು ಹಾಕಿಕೋ ಏಕೆಂದರೆ ಇಂದಿನಿಂದ ಸುನ್ನತಿ ಇಲ್ಲದವರೂ, ಅಶುದ್ಧರೂ ನಿನ್ನೊಳಗೆ ಬರುವುದಿಲ್ಲ.


ಪರಿಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ 284 ಮಂದಿಯಾಗಿದ್ದರು.


ಮೋಶೆಯ ನಿಯಮದಲ್ಲಿ ಬರೆದ ಹಾಗೆ ನಮ್ಮ ದೇವರಾಗಿರುವ ಯೆಹೋವ ದೇವರ ಬಲಿಪೀಠದ ಮೇಲೆ ಅರ್ಪಿಸುವುದಕ್ಕೆ ನೇಮಿತವಾದ ಕಾಲಗಳಲ್ಲಿ, ವರ್ಷ ವರ್ಷಕ್ಕೆ ನಮ್ಮ ಪಿತೃಗಳ ಗೋತ್ರಗಳ ಪ್ರಕಾರ ನಮ್ಮ ದೇವಾಲಯದೊಳಗೆ ತೆಗೆದುಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ, ಲೇವಿಯರಿಗೂ, ಜನರಿಗೂ ಚೀಟಿಗಳನ್ನು ಹಾಕಿದೆವು.


ಆಮೇಲೆ ಸೈತಾನನು ಯೇಸುವನ್ನು ಪವಿತ್ರ ನಗರಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಅತಿ ಎತ್ತರವಾದ ಶಿಖರದ ಮೇಲೆ ನಿಲ್ಲಿಸಿ,


ಆಮೇಲೆ ಅವರು, “ಕರ್ತ ಯೇಸುವೇ, ಪ್ರತಿಯೊಬ್ಬರ ಹೃದಯವನ್ನು ನೀವು ತಿಳಿದವರು. ಈ ಸೇವೆಯಿಂದ ಯೂದನು ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ,


ಯೇಸು ಪುನರುತ್ಥಾನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪವಿತ್ರ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.


ಉಡಿಯಲ್ಲಿ ಚೀಟು ಹಾಕಬಹುದು, ಆದರೆ ಪ್ರತಿ ತೀರ್ಪು ಯೆಹೋವ ದೇವರದ್ದೇ.


ಏಕೆಂದರೆ ಅಲ್ಲಿ ನ್ಯಾಯ ನಿರ್ಣಯಕ್ಕೆ ಸಿಂಹಾಸನಗಳೂ, ಅಂದರೆ, ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ.


ಅವರು ಕಿರಿಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಿಲಿಂದ ಬಾಗಿಲಿಗೂ ಚೀಟುಗಳನ್ನು ಹಾಕಿದರು.


ಆಗ ಯೆಹೋಶುವನು ಅವರಿಗೆ ಶೀಲೋವಿನಲ್ಲಿ ಯೆಹೋವ ದೇವರ ಮುಂದೆ ಚೀಟುಗಳನ್ನು ಹಾಕಿದನು. ಅಲ್ಲಿ ಯೆಹೋಶುವನು ಇಸ್ರಾಯೇಲರಿಗೆ ನಾಡನ್ನು ಅವರ ಗೋತ್ರಗಳ ಪ್ರಕಾರ ಪಾಲುಗಳನ್ನು ಹಂಚಿಕೊಟ್ಟನು.


ಅನಂತರ ಅವರು ಚೀಟು ಹಾಕಲು, ಅದು ಮತ್ತೀಯನ ಪಾಲಿಗೆ ಬಂದಿತು; ಆದ್ದರಿಂದ ಅವನು ಹನ್ನೊಂದು ಜನ ಅಪೊಸ್ತಲರೊಂದಿಗೆ ಸೇರಿದನು.


ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಹೂದನ ಮಕ್ಕಳೂ, ಬೆನ್ಯಾಮೀನನ ಮಕ್ಕಳೂ, ಎಫ್ರಾಯೀಮ್, ಮನಸ್ಸೆ ಎಂಬವರ ಮಕ್ಕಳು ಯಾರೆಂದರೆ:


ಇವರೇ ಕುಟುಂಬಗಳಲ್ಲಿ ಯಜಮಾನರಾಗಿದ್ದು, ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು.


ಇಸ್ರಾಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದ್ರೋಹಿಗಳಾದದರಿಂದ ಬಾಬೆಲಿಗೆ ಸೆರೆಯವರಾಗಿ ಹೋಗಬೇಕಾಯಿತು.


ತಮ್ಮ ಸ್ವಾಸ್ತ್ಯಗಳಲ್ಲಿ, ತಮ್ಮ ಪಟ್ಟಣಗಳಲ್ಲಿ ಮೊದಲು ವಾಸವಾಗಿದ್ದವರಲ್ಲಿ ಕೆಲವರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ ಮತ್ತು ದೇವಾಲಯದ ಸೇವಕರೂ ಆಗಿದ್ದರು.


ಇದಲ್ಲದೆ ನಾನು ಆ ಸಮಯದಲ್ಲಿ ಜನರಿಗೆ, “ನಿಮ್ಮ ಆಳುಗಳು ರಾತ್ರಿಯಲ್ಲಿ ನಮಗೆ ಕಾವಲಾಗಿರುವಂತೆಯೂ, ಹಗಲಿನಲ್ಲಿ ಕೆಲಸ ನಡೆಸುವಂತೆಯೂ ನೀವು ನಿಮ್ಮ ನಿಮ್ಮ ಆಳುಗಳೊಡನೆ ಯೆರೂಸಲೇಮಿನಲ್ಲೇ ವಾಸಮಾಡಬೇಕು,” ಎಂದು ಅಪ್ಪಣೆ ಮಾಡಿದೆನು.


ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥನೆಮಾಡಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಅಭಿವೃದ್ಧಿಯಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು