Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:26 - ಕನ್ನಡ ಸಮಕಾಲಿಕ ಅನುವಾದ

26 ಯೋಚಾದಾಕನ ಮಗ ಯೇಷೂವನ ಮಗ ಯೋಯಾಕೀಮನ ದಿವಸಗಳಲ್ಲಿಯೂ; ರಾಜ್ಯಪಾಲನಾದ ನೆಹೆಮೀಯನ ದಿವಸಗಳಲ್ಲಿಯೂ; ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನ ದಿವಸಗಳಲ್ಲಿಯೂ ಇವರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇವರಲ್ಲದೆ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತ್ತಿದ್ದ ದ್ವಾರಪಾಲಕರು: ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಇವರಲ್ಲದೆ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತಕ್ಕ ದ್ವಾರಪಾಲಕರಾದ ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇವರಲ್ಲದೆ ಬಾಗಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತಕ್ಕ ದ್ವಾರಪಾಲಕರಾದ ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಈ ದ್ವಾರಪಾಲಕರು ಯೋಯಾಕೀಮನ ಕಾಲದಲ್ಲಿ ಸೇವೆ ಮಾಡಿದರು. ಯೋಯಾಕೀಮನು ಯೇಷೂವನ ಮಗ. ಯೇಷೂವನು ಯೋಚಾದಾಕನ ಮಗ. ನೆಹೆಮೀಯನು ರಾಜ್ಯಪಾಲನಾಗಿದ್ದ ದಿನಗಳಲ್ಲಿ ಮತ್ತು ಎಜ್ರನು ಯಾಜಕನೂ ಉಪದೇಶಕನೂ ಆಗಿದ್ದ ದಿನಗಳಲ್ಲಿ ಸಹ ಈ ದ್ವಾರಪಾಲಕರು ಸೇವೆ ಸಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:26
5 ತಿಳಿವುಗಳ ಹೋಲಿಕೆ  

ರಾಜಪಾಲನಾದ ನೆಹೆಮೀಯನೂ, ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನೂ, ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಜನರೆಲ್ಲರಿಗೆ: “ಈ ದಿನವು ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಪರಿಶುದ್ಧವಾದುದರಿಂದ ದುಃಖಿಸದೆ, ಅಳದೆ ಇರಿ,” ಎಂದರು. ಏಕೆಂದರೆ ಜನರೆಲ್ಲರು ದೇವರ ನಿಯಮದ ಮಾತುಗಳನ್ನು ಕೇಳಿದಾಗ ಅತ್ತರು.


ಯಾಜಕನು, ನಿಯಮಶಾಸ್ತ್ರಿಯು ಹಾಗೂ ಇಸ್ರಾಯೇಲರಿಗೆ ಕೊಡಲಾದ ಯೆಹೋವ ದೇವರ ಆಜ್ಞಾಸೂತ್ರಗಳಲ್ಲಿ ವಿದ್ವಾಂಸನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ನಕಲು ಇದು:


ಈ ಎಜ್ರನು ಬಾಬಿಲೋನಿನಿಂದ ಬಂದನು, ಅವನು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರು ಕೊಟ್ಟ ಮೋಶೆಯ ನಿಯಮದಲ್ಲಿ ಪಾಂಡಿತ್ಯ ಪಡೆದ ನಿಯಮಶಾಸ್ತ್ರಿ ಆಗಿದ್ದನು. ಅವನ ಮೇಲೆ ಅವನ ದೇವರಾಗಿರುವ ಯೆಹೋವ ದೇವರ ಕೈ ಇದ್ದುದರಿಂದ, ಅವನು ಕೇಳಿದ್ದನ್ನೆಲ್ಲಾ ಅರಸನು ಕೊಟ್ಟನು.


ಅವನು ಯೂಫ್ರೇಟೀಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಈಜಿಪ್ಟಿನ ಮೇರೆಯವರೆಗೆ ಇರುವ ಸಮಸ್ತ ಅರಸರ ಮೇಲೆ ಆಳುತ್ತಾ ಇದ್ದನು.


ಜನರೆಲ್ಲರು ಏಕವಾಗಿ ನೀರು ಬಾಗಿಲಿಗೆ ಎದುರಾಗಿರುವ ಬೀದಿಯಲ್ಲಿ ಕೂಡಿಕೊಂಡು ಬಂದರು. ಯೆಹೋವ ದೇವರು ಇಸ್ರಾಯೇಲರಿಗೆ ಆಜ್ಞಾಪಿಸಿದ ಮೋಶೆಯ ನಿಯಮದ ಗ್ರಂಥವನ್ನು ತೆಗೆದುಕೊಂಡು ಬರಲು ಜನರು ನಿಯಮಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು