Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:27 - ಕನ್ನಡ ಸಮಕಾಲಿಕ ಅನುವಾದ

27 ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ, ಹಾಡುವುದರಿಂದಲೂ, ತಾಳಗಳಿಂದಲೂ, ವೀಣೆಗಳಿಂದಲೂ, ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವುದಕ್ಕೆ ಲೇವಿಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆರೂಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು, ಕೀರ್ತನೆ ಗಾಯನಗಳಿಂದಲೂ ತಾಳ, ಸ್ವರಮಂಡಲ ಹಾಗು ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಕರೆಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಜೆರುಸಲೇಮಿನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ, ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಕರೆಯಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆರೂಸಲೇವಿುನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ ಸ್ವರಮಂಡಲ ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವದಕ್ಕಾಗಿ ಯೆರೂಸಲೇವಿುಗೆ ಕರೆಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಜನರು ಜೆರುಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸಿದರು. ಅವರು ಎಲ್ಲಾ ಲೇವಿಯರನ್ನು ನಗರಕ್ಕೆ ಕರೆತಂದು ಪ್ರತಿಷ್ಠೆ ಮಾಡಿದರು. ಅವರು ದೇವರಿಗೆ ಸ್ತುತಿಪದಗಳನ್ನು, ತಾಳ, ಸ್ವರಮಂಡಲ, ಕಿನ್ನರಿಗಳನ್ನು ಬಾರಿಸುತ್ತಾ ಹಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:27
34 ತಿಳಿವುಗಳ ಹೋಲಿಕೆ  

ಇದಲ್ಲದೆ ದಾವೀದನು ವಾದ್ಯಗಳನ್ನೂ ವಿಶೇಷವಾದ ವೀಣೆಗಳನ್ನೂ, ಕಿನ್ನರಿಗಳನ್ನೂ, ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನೂ ಎತ್ತುವ ಹಾಗೆ, ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವುದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.


ಇದಲ್ಲದೆ ಅರಸನಾದ ಹಿಜ್ಕೀಯನೂ, ಪ್ರಧಾನರೂ ದಾವೀದನ ಮಾತುಗಳಿಂದಲೂ, ಆಸಾಫನ ಕೀರ್ತನೆಗಳಿಂದಲೂ ಯೆಹೋವ ದೇವರನ್ನು ಸ್ತುತಿಸಬೇಕೆಂದು ಲೇವಿಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಮೊಣಕಾಲೂರಿಕೊಂಡು ಆರಾಧಿಸಿದರು.


ತುತೂರಿ ಊದುವವರೂ, ಸಂಗೀತಗಾರರೂ ಯೆಹೋವ ದೇವರನ್ನು ಕೊಂಡಾಡುತ್ತಾ, ಹೊಗಳುತ್ತಾ ಧ್ವನಿ ಎತ್ತಿ ಸ್ತೋತ್ರ ಮಾಡುವಂತೆ ತುತೂರಿಗಳೂ, ತಾಳಗಳೂ ಮೊದಲಾದ ಗೀತ ವಾದ್ಯಗಳಿಂದ ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು, ಅವರ ಕೃಪೆಯು ಯುಗಯುಗಕ್ಕೆ ಇರುವುದು,” ಎಂದು ಯೆಹೋವ ದೇವರನ್ನು ಹೊಗಳುತ್ತಿದ್ದ ಹಾಗೆ, ಯೆಹೋವ ದೇವರ ಆಲಯವು ಮೇಘದಿಂದ ತುಂಬಿತು.


ಹೀಗೆ ಇಸ್ರಾಯೇಲರೆಲ್ಲರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಆರ್ಭಟದಿಂದಲೂ, ಕೊಂಬಿನ ಶಬ್ದದಿಂದಲೂ, ತುತೂರಿಗಳಿಂದಲೂ, ತಾಳಗಳಿಂದಲೂ ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಾ ತೆಗೆದುಕೊಂಡು ಬಂದರು.


ಮತ್ತು ಅಧಿಕಾರಿಗಳು ಅವರಿಗೆ ಹೀಗೆ ಹೇಳಬೇಕು, “ನಿಮ್ಮಲ್ಲಿ ಯಾವನಾದರು ಹೊಸ ಮನೆಯನ್ನು ಕಟ್ಟಿ, ಗೃಹ ಪ್ರತಿಷ್ಠೆ ಇನ್ನು ಮಾಡದಿದ್ದರೆ, ಅವನು ತನ್ನ ಮನೆಗೆ ಹೋಗಲಿ. ಯುದ್ಧದಲ್ಲಿ ಸತ್ತರೆ ಬೇರೊಬ್ಬನು ಆ ಮನೆಯನ್ನು ಸೇರಿಕೊಂಡಾನು.


“ನೀವು ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ್ದರಿಂದ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮಂಜೂಷವನ್ನು ನಾನು ಅದಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ, ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.


ದಾವೀದನು ಆರೋನನ ಮಕ್ಕಳನ್ನೂ, ಲೇವಿಯರನ್ನೂ ಬರಮಾಡಿದನು.


ಸುರುಳಿಯನ್ನು ತೆಗೆದುಕೊಂಡಾಗ, ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿ ಆಗಿರುವವರ ಮುಂದೆ ಅಡ್ಡಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ದೇವರ ಹೆಸರನ್ನು ನರ್ತಿಸುತ್ತಾ ಸ್ತುತಿಸಲಿ; ದಮ್ಮಡಿಯಿಂದಲೂ ಕಿನ್ನರಿಯಿಂದಲೂ ದೇವರನ್ನು ಕೀರ್ತಿಸಲಿ.


ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವೆನು; ನೀವು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿದ್ದೀರಿ. ನನ್ನನ್ನು ಮೇಲಕ್ಕೆ ಎತ್ತಿದ್ದೀರಿ.


ಇಸ್ರಾಯೇಲರ ಮಿಕ್ಕಾದ ಯಾಜಕರೂ, ಲೇವಿಯರೂ ತಮ್ಮ ತಮ್ಮ ಸ್ವಾಧೀನವಾಗಿದ್ದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು.


ಈ ಪ್ರಕಾರ ಸೆರೆಯಿಂದ ತಿರುಗಿ ಬಂದ ಸಭೆಯವರೆಲ್ಲರು ಪರ್ಣಶಾಲೆಗಳನ್ನು ಹಾಕಿ, ಅದರಲ್ಲಿ ವಾಸವಾಗಿದ್ದರು. ನೂನನ ಮಗ ಯೆಹೋಶುವನ ದಿನವು ಮೊದಲುಗೊಂಡು ಆ ದಿವಸದವರೆಗೂ ಇಸ್ರಾಯೇಲರು ಹಾಗೆ ಮಾಡಿರಲಿಲ್ಲ. ಅಲ್ಲಿ ಅವರಿಗೆ ಬಹಳ ಸಂತೋಷವಿತ್ತು.


ಆಗ ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಸೆರೆಯಿಂದ ಬಂದ ಮಿಕ್ಕಾದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠಾಪಿಸಿದರು.


ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಂತರು. ಹಾಗೆಯೇ ಲೇವಿಯರು ಯೆಹೋವ ದೇವರ ಗೀತವಾದ್ಯಗಳನ್ನು ಹಿಡಿದುಕೊಂಡು ನಿಂತರು. ಅರಸನಾದ ದಾವೀದನು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಇವುಗಳನ್ನು ಮಾಡಿಸಿದ್ದನು. “ಯೆಹೋವ ದೇವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಲೇವಿಯರ ಮುಂದೆ ನಿಂತು ತುತೂರಿಗಳನ್ನು ಊದುತ್ತಿದ್ದರು. ಸಮಸ್ತ ಇಸ್ರಾಯೇಲರೂ ನಿಂತಿದ್ದರು.


ಹೆಬ್ರೋನಿಯರಲ್ಲಿ ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀದನ ಆಳಿಕೆಯ ನಲ್ವತ್ತನೆಯ ವರ್ಷದಲ್ಲಿ ಆಯ್ಕೆಯಾಗಿದ್ದರು. ಆಗ ಗಿಲ್ಯಾದಿನ ಯಜ್ಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು.


ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು. ನಾಲ್ಕು ಸಾವಿರ ಮಂದಿ ಸ್ತುತಿಸುವುದಕ್ಕೆ ತಾನು ಸಿದ್ಧಮಾಡಿದ ವಾದ್ಯಗಳಿಂದ ಯೆಹೋವ ದೇವರನ್ನು ಸ್ತುತಿಸಿದರು.”


ಅದರ ಸಂಗಡ ತುತೂರಿ ಊದಲು, ತಾಳ ಬಾರಿಸಲು, ದೇವರ ಗೀತವಾದ್ಯಗಳೂ ಸಹಿತವಾಗಿ ಹೇಮಾನನೂ, ಯೆದುತೂನನೂ ಮೇಲ್ವಿಚಾರಕರಾಗಿದ್ದರು. ಯೆದುತೂನನ ಪುತ್ರರು ದ್ವಾರಪಾಲಕರಾಗಿದ್ದರು.


ಅವರು ಯಾರೆಂದರೆ: ಮುಖ್ಯಸ್ಥನಾದ ಆಸಾಫನೂ, ಅವನ ತರುವಾಯ ಜೆಕರ್ಯನೂ, ಯೆಜೀಯೇಲನೂ, ಶೆಮೀರಾಮೋತನೂ, ಯೆಹೀಯೇಲನೂ, ಮತ್ತಿತ್ಯನೂ, ಎಲೀಯಾಬನೂ, ಬೆನಾಯನೂ, ಓಬೇದ್ ಏದೋಮನೂ, ಯೆಹಿಯೇಲನೂ ಇವರು ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಿದ್ದರು. ಆದರೆ ಆಸಾಫನು ತಾಳಗಳನ್ನು ಬಾರಿಸುತ್ತಿದ್ದನು.


ಆಗ ದಾವೀದನೂ, ಸಮಸ್ತ ಇಸ್ರಾಯೇಲರೂ ಸಕಲ ವಾದ್ಯಗಳಾದ ಕಿನ್ನರಿ, ವೀಣೆ, ದಮ್ಮಡಿ, ತಾಳ, ತುತೂರಿ ಇವುಗಳನ್ನು ತಮ್ಮ ಸಮಸ್ತ ಬಲದಿಂದ ಬಾರಿಸುತ್ತಾ, ಹಾಡುತ್ತಾ ದೇವರ ಮುಂದೆ ಹೋದರು.


“ದೇವರ ಮಂಜೂಷದ ನಿಮಿತ್ತ ಯೆಹೋವ ದೇವರು ಓಬೇದ್ ಏದೋಮನ ಮನೆಯನ್ನೂ, ಅವನಿಗೆ ಉಂಟಾದದ್ದೆಲ್ಲವನ್ನೂ ಆಶೀರ್ವದಿಸಿದ್ದಾರೆ,” ಎಂದು ಅರಸನಾದ ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು ಹೋಗಿ, ಓಬೇದ್ ಏದೋಮನ ಮನೆಯೊಳಗಿಂದ ದೇವರ ಮಂಜೂಷವನ್ನು ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.


ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡು ಹೆಣ್ಣುಮಕ್ಕಳು, ದಾಸದಾಸಿಯರು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಂದೆತಾಯಿ ಇಲ್ಲದವರು ಹಾಗೂ ವಿಧವೆಯರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ಸೊಲೊಮೋನನು ಯೆಹೋವ ದೇವರಿಗೆ ಸಮಾಧಾನದ ಬಲಿಗಳಾಗಿ 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ, ಇಸ್ರಾಯೇಲಿನ ಸಮಸ್ತ ಜನರೂ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು.


ಇದಲ್ಲದೆ ಅವನು ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನೂ ಹಿಡಿದ ಲೇವಿಯರನ್ನು ದಾವೀದನೂ, ಅರಸನ ದರ್ಶಿಯಾದ ಗಾದನೂ, ಪ್ರವಾದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ, ಯೆಹೋವ ದೇವರ ಆಲಯದಲ್ಲಿ ನಿಲ್ಲಿಸಿದನು. ಏಕೆಂದರೆ ಯೆಹೋವ ದೇವರ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹೀಗೆ ಇತ್ತು.


ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ, ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಅವರು ತಮ್ಮ ಮಡದಿಮಕ್ಕಳೂಡನೆ ಮಹೋತ್ಸವ ಮಾಡಿದರು. ಆದ್ದರಿಂದ ಯೆರೂಸಲೇಮಿನ ಸಂತೋಷ ಧ್ವನಿಯು ಬಹು ದೂರಕ್ಕೆ ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು