Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:35 - ಕನ್ನಡ ಸಮಕಾಲಿಕ ಅನುವಾದ

35 ತುತೂರಿಗಳನ್ನು ಹಿಡಿಯುವ ಯಾಜಕರ ಮಕ್ಕಳಲ್ಲಿ ಆಸಾಫನ ಮಗ ಜಕ್ಕೂರನ ಮಗ, ಮೀಕಾಯನ ಮಗ, ಮತ್ತನ್ಯನ ಮಗ, ಶೆಮಾಯನ ಮಗ, ಯೋನಾತಾನನ ಮಗ ಜೆಕರ್ಯನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆಸಾಫ್ ಸಂತಾನದ ಜಕ್ಕೂರನಿಗೆ ಹುಟ್ಟಿದ ಮೀಕಾಯನ ವಂಶದವನೂ, ಮತ್ತನ್ಯನ ಮರಿಮಗನೂ ಶೆಮಾಯನ ಮೊಮ್ಮಗನೂ ಯೋನಾತಾನನ ಮಗನೂ, ಆದ ಜೆಕರ್ಯನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಅವರೊಂದಿಗೆ ಆಸಾಫ್ ಸಂತಾನದ ಜಕ್ಕೂರನಿಗೆ ಹುಟ್ಟಿದ ಮೀಕಾಯನ ವಂಶದವನೂ ಮತ್ತನ್ಯನ ಮರಿಮಗನೂ ಶೆಮಾಯನ ಮೊಮ್ಮಗನೂ ಯೋನಾತಾನನ ಮಗನೂ ಆದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆಸಾಫ್ ಸಂತಾನದ ಜಕ್ಕೂರನಿಗೆ ಹುಟ್ಟಿದ ಮೀಕಾಯನ ವಂಶದವನೂ ಮತ್ತನ್ಯನ ಮರಿಮಗನೂ ಶೆಮಾಯನ ಮೊಮ್ಮಗನೂ ಯೋನಾತಾನನ ಮಗನೂ ಆದ ಜೆಕರ್ಯನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ತುತ್ತೂರಿಗಳನ್ನು ಹಿಡಿದುಕೊಂಡಿದ್ದ ಕೆಲವು ಯಾಜಕರೂ ಅವರನ್ನು ಹಿಂಬಾಲಿಸುತ್ತಾ ಗೋಡೆಯ ತನಕ ಬಂದರು. ಜೆಕರ್ಯನೂ ಅವರನ್ನು ಹಿಂಬಾಲಿಸಿದನು. (ಜೆಕರ್ಯನು ಯೋನಾತಾನನ ಮಗ; ಯೋನಾತನನು ಶೆಮಾಯನ ಮಗ; ಶೆಮಾಯನು ಮತ್ತನ್ಯನ ಮಗ; ಮತ್ತನ್ಯನು ಮೀಕಾಯನ ಮಗ; ಮೀಕಾಯನು ಜಕ್ಕೂರನ ಮಗ; ಜಕ್ಕೂರನು ಆಸಾಫನ ಮಗ.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:35
10 ತಿಳಿವುಗಳ ಹೋಲಿಕೆ  

ಏಳುಮಂದಿ ಯಾಜಕರು ಹೊತ್ತುಕೊಂಡಿದ್ದ ಮಂಜೂಷದ ಮುಂದೆ ಟಗರುಗಳ ಏಳು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡು ಹೋಗಬೇಕು. ಆದರೆ ಅವರು ಏಳನೆಯ ದಿವಸ ಪಟ್ಟಣವನ್ನು ಏಳು ಸಾರಿ ಸುತ್ತಿ ಬರಬೇಕು. ಯಾಜಕರು ತುತೂರಿಗಳನ್ನು ಊದಬೇಕು.


ಇದಲ್ಲದೆ ಆಸಾಫನ ಮಗ ಜಬ್ದೀಯ ಮಗ, ಮೀಕನ ಮಗ ಮತ್ತನ್ಯನು ಪ್ರಾರ್ಥನೆಯನ್ನು ಮತ್ತು ಕೃತಜ್ಞತಾಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಂಗಡಿಗರಲ್ಲಿ ಎರಡನೆಯವನು ಬಕ್ಬುಕ್ಯನು, ಅವನ ಸಂಗಡ ಯೆದುತೂನನ ಮಗ, ಗಲಾಲನ ಮಗ, ಶಮ್ಮೂವನ ಮಗ ಅಬ್ದನು.


ದೇವರು ತಾವೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾರೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡಿದುಕೊಂಡ ಅವರ ಯಾಜಕರು ನಮಗಿದ್ದಾರೆ. ಇಸ್ರಾಯೇಲರೇ, ನೀವು ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಯುದ್ಧಮಾಡಬೇಡಿರಿ. ನೀವು ಜಯಹೊಂದುವುದಿಲ್ಲ,” ಎಂದನು.


ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದ ಯಾಜಕರು ಪರಿಶುದ್ಧ ಸ್ಥಳದಿಂದ ಹೊರಟಾಗ, ನಯವಾದ ನಾರು ಬಟ್ಟೆಗಳನ್ನು ಧರಿಸಿಕೊಂಡಿದ್ದ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನ್ ಹಾಗೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಬಲಿಪೀಠದ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.


ಅವರು ಯಾರೆಂದರೆ: ಆಸಾಫನ ಪುತ್ರರಲ್ಲಿ ಜಕ್ಕೂರ್, ಯೋಸೇಫ, ನೆತನ್ಯ, ಅಶರೇಲ; ಇವರು ಆಸಾಫನ ಕೈಕೆಳಗೆ ಪ್ರವಾದಿಸಿದರು. ಇವರು ಅರಸನ ಮೇಲ್ವಿಚಾರಣೆಯಲ್ಲಿದ್ದರು.


ಯೆಹೂದನೂ, ಬೆನ್ಯಾಮೀನನೂ, ಶೆಮಾಯನೂ, ಯೆರೆಮೀಯನೂ;


ದೇವರ ಮನುಷ್ಯನಾದ ದಾವೀದನ ಗೀತವಾದ್ಯಗಳನ್ನು ಹಿಡಿಯುವ ಜೆಕರೀಯನ ಸಹೋದರರಾದ ಶೆಮಾಯ, ಅಜರಯೇಲ್, ಮಿಲಲೈ, ಗಿಲಲೈ, ಮಾಯೈ, ನೆತನೆಯೇಲ್, ಯೆಹೂದ, ಹನಾನೀ ಎಂಬವರು ನಡೆದರು; ನಿಯಮಶಾಸ್ತ್ರಿಯಾದ ಎಜ್ರನು ಇವರ ಮುಂದೆ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು