Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:43 - ಕನ್ನಡ ಸಮಕಾಲಿಕ ಅನುವಾದ

43 ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ, ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಅವರು ತಮ್ಮ ಮಡದಿಮಕ್ಕಳೂಡನೆ ಮಹೋತ್ಸವ ಮಾಡಿದರು. ಆದ್ದರಿಂದ ಯೆರೂಸಲೇಮಿನ ಸಂತೋಷ ಧ್ವನಿಯು ಬಹು ದೂರಕ್ಕೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ದೇವರು ತಮಗೆ ವಿಶೇಷ ಆನಂದವನ್ನು ಉಂಟುಮಾಡಿದ್ದರಿಂದ, ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವಮಾಡಿದರು. ಯೆರೂಸಲೇಮಿನ ಉತ್ಸವದ ಹರ್ಷಧ್ವನಿಯು ಬಹಳ ದೂರದವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ದೇವರು ತಮಗೆ ವಿಶೇಷಾನಂದವನ್ನುಂಟು ಮಾಡಿದ್ದರಿಂದ ಜನರು ಆ ದಿನ ಅನೇಕ ಬಲಿದಾನಗಳನ್ನು ಸಮರ್ಪಿಸಿ ತಮ್ಮ ಮಡದಿಮಕ್ಕಳೊಡನೆ ಮಹೋತ್ಸವ ಮಾಡಿದರು. ಜೆರುಸಲೇಮಿನ ಉತ್ಸವದ ಹರ್ಷಧ್ವನಿ ಬಹುದೂರದವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ದೇವರು ತಮಗೆ ವಿಶೇಷಾನಂದವನ್ನುಂಟುಮಾಡಿದ್ದರಿಂದ ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವ ಮಾಡಿದರು. ಯೆರೂಸಲೇವಿುನ ಉತ್ಸವದ ಹರ್ಷಧ್ವನಿಯು ಬಹುದೂರದವರೆಗೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆ ವಿಶೇಷ ದಿನದಲ್ಲಿ ಯಾಜಕರು ಹೆಚ್ಚಿನ ಸಂಖ್ಯೆಯಲ್ಲಿ ಯಜ್ಞವನ್ನರ್ಪಿಸಿದರು. ಜನರೆಲ್ಲಾ ಸಂತೋಷಪಟ್ಟರು. ದೇವರು ಅವರಿಗೆಲ್ಲಾ ಅತ್ಯಾನಂದವನ್ನು ಉಂಟುಮಾಡಿದನು; ಹೆಂಗಸರೂ ಮಕ್ಕಳೂ ಉತ್ಸಾಹದಿಂದ ಆನಂದಿಸಿದರು; ಜೆರುಸಲೇಮಿನಿಂದ ಹೊರಟ ಅವರ ಹರ್ಷಧ್ವನಿಯು ಬಹುದೂರದವರೆಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:43
29 ತಿಳಿವುಗಳ ಹೋಲಿಕೆ  

ಜನರು ಹೀಗೆ ಮಹಾಧ್ವನಿಯಿಂದ ಆರ್ಭಟಿಸುತ್ತಾ ಇದ್ದುದರಿಂದ, ಹರ್ಷಧ್ವನಿ ಯಾವುದು, ಅಳುವವರ ಧ್ವನಿ ಯಾವುದು ಎಂದು ಗುರುತಿಸಲಾಗಲಿಲ್ಲ. ಗದ್ದಲವು ಬಹು ದೂರದವರೆಗೂ ಕೇಳಿಸುತ್ತಿತ್ತು.


ಯೆಹೋವ ದೇವರೇ, ನಿಮ್ಮ ಕ್ರಿಯೆಯಿಂದ ನನ್ನನ್ನು ಸಂತೋಷಪಡಿಸಿದ್ದೀರಿ. ನಿಮ್ಮ ಕೈಕೆಲಸಗಳಲ್ಲಿ ಜಯಧ್ವನಿಗೈಯುತ್ತೇನೆ.


ಆಗ ಕನ್ನಿಕೆಯರೂ, ಪ್ರಾಯದವರೂ, ವೃದ್ಧರ ಸಹಿತವಾಗಿ ನಾಟ್ಯವಾಡುತ್ತಾ ಹರ್ಷಿಸುವರು. ಏಕೆಂದರೆ ನಾನು ಅವರ ದುಃಖವನ್ನು ಆನಂದಕ್ಕೆ ಬದಲಾಯಿಸುವೆನು. ನಾನು ಅವರನ್ನು ಆಧರಿಸಿ, ಅವರ ದುಃಖದಿಂದ ಬಿಡಿಸಿ, ಅವರಿಗೆ ಸಂತೋಷವನ್ನುಂಟು ಮಾಡುವೆನು.


ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷ ಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.


ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮನಿಂದಾದ ಹಾಡುಗಳಿಂದಲೂ ಪರಸ್ಪರ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಾಂತರಾಳದಿಂದ ಕರ್ತನಿಗೆ ಹಾಡಿ ಹರಸಿರಿ.


ಈಗ ನಿಮಗೆ ನಿಜವಾಗಿಯೂ ದುಃಖವಿದೆ. ಆದರೆ ನಾನು ನಿಮ್ಮನ್ನು ತಿರುಗಿ ಕಾಣುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವುದು. ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವುದಿಲ್ಲ.


ಯೇಸು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯದಲ್ಲಿ, “ದಾವೀದನ ಪುತ್ರನಿಗೆ ಹೊಸನ್ನ,” ಎಂದು ಕೂಗುವುದನ್ನು ಮುಖ್ಯಯಾಜಕರೂ ನಿಯಮ ಬೋಧಕರೂ ಕಂಡು ಕೋಪಗೊಂಡರು.


ಯೇಸುವಿನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು, “ದಾವೀದನ ಪುತ್ರನಿಗೆ ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಮಹೋನ್ನತದಲ್ಲಿ ಜಯ!” ಎಂದು ಘೋಷಿಸಿದರು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.


ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ; ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು; ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು; ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು.


ಈಗ ನನ್ನ ತಲೆಯು ನನ್ನ ಸುತ್ತಲಿರುವ ನನ್ನ ಶತ್ರುಗಳ ಮೇಲೆ ಎತ್ತಲಾಗಿರುವುದು, ಆದ್ದರಿಂದ ದೇವರ ಗುಡಾರದಲ್ಲಿ ಉತ್ಸಾಹದಿಂದ ಬಲಿಗಳನ್ನು ಅರ್ಪಿಸುವೆನು; ಯೆಹೋವ ದೇವರಿಗೆ ಹಾಡಿ ಕೊಂಡಾಡುವೆನು.


ಆದರೆ ದೇವರು ಸುಮ್ಮನಿದ್ದರೆ ಅವರ ಮೇಲೆ, ತಪ್ಪುಹೊರಿಸುವವರು ಯಾರು? ದೇವರು ತಮ್ಮ ಮುಖವನ್ನು ವ್ಯಕ್ತಿಗಾಗಲಿ, ದೇಶಕ್ಕಾಗಲಿ ಮರೆಮಾಡಿದರೆ, ದೇವದರ್ಶನ ಪಡೆಯಬಲ್ಲವರು ಯಾರು?


ಯೆಹೋವ ದೇವರು ಅವರ ಶತ್ರುಗಳ ಮೇಲೆ ಅವರು ಸಂತೋಷಪಡುವಂತೆ ಮಾಡಿದ್ದರಿಂದ, ಅವರು ಹರ್ಷಗೊಂಡು ಯೆರೂಸಲೇಮಿಗೆ ತಿರುಗಿ ಹೋಗುವುದಕ್ಕೆ ಯೆಹೂದ ಮತ್ತು ಯೆರೂಸಲೇಮಿನವರ ಮುಂಭಾಗದಲ್ಲಿ ಯೆಹೋಷಾಫಾಟನೂ ಹೊರಟು,


ಹೀಗೆ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಯೆಹೋವ ದೇವರ ಮುಂದೆ ನಿಂತರು.


ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿವಸದಲ್ಲಿ ಅವನು ಜನರಿಗೆ ಅವರವರ ಡೇರೆಗಳಿಗೆ ಹೋಗುವುದಕ್ಕೆ ಅಪ್ಪಣೆಕೊಡಲು, ಆಗ ಅವರು ಯೆಹೋವ ದೇವರು ದಾವೀದನಿಗೂ, ಸೊಲೊಮೋನನಿಗೂ, ತನ್ನ ಜನರಾದ ಇಸ್ರಾಯೇಲರಿಗೂ ಮಾಡಿದ ಉಪಕಾರದ ನಿಮಿತ್ತ ಅವರು ಹೃದಯದಲ್ಲಿ ಆನಂದಭರಿತರಾಗಿ ಸಂತೋಷಪಡುತ್ತಾ ಹೋದರು.


ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ, ಇಸ್ರಾಯೇಲರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.


ನಿಮ್ಮ ಸಂತೋಷದ ದಿವಸದಲ್ಲಿಯೂ, ನಿಮ್ಮ ಹಬ್ಬಗಳಲ್ಲಿಯೂ ನಿಮ್ಮ ತಿಂಗಳಿನ ಆರಂಭದಲ್ಲಿಯೂ ತುತೂರಿಗಳನ್ನು ಊದಬೇಕು. ನಿಮ್ಮ ದಹನಬಲಿಗಳನ್ನೂ ಸಮಾಧಾನದ ಬಲಿಯನ್ನೂ ಅರ್ಪಿಸುವಾಗ ಅವುಗಳನ್ನು ಊದಬೇಕು. ಅವುಗಳ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.”


ಮಾಸೇಯನೂ, ಶೆಮಾಯನೂ, ಎಲಿಯಾಜರನೂ, ಉಜ್ಜೀಯೂ, ಯೆಹೋಹಾನಾನನೂ, ಮಲ್ಕೀಯನೂ, ಏಲಾಮನೂ, ಏಜೆರನೂ, ತಮ್ಮ ಮೇಲ್ವಿಚಾರಕನಾದ ಯೆಜ್ರಾಹ್ಯನ ಸಂಗಡ ಹಾಡುಗಾರರು ಗಟ್ಟಿಯಾಗಿ ಹಾಡಿದರು.


ನಾನು ನಿಮ್ಮಲ್ಲಿ ಆನಂದಿಸಿ ಉಲ್ಲಾಸಪಡುವೆನು; ಮಹೋನ್ನತರೇ, ನಾನು ನಿಮ್ಮ ಹೆಸರನ್ನು ಕೊಂಡಾಡಿ ಹಾಡುವೆನು.


ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ, ಹಾಡುವುದರಿಂದಲೂ, ತಾಳಗಳಿಂದಲೂ, ವೀಣೆಗಳಿಂದಲೂ, ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವುದಕ್ಕೆ ಲೇವಿಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು