Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:47 - ಕನ್ನಡ ಸಮಕಾಲಿಕ ಅನುವಾದ

47 ಆದ್ದರಿಂದ ಜೆರುಬ್ಬಾಬೆಲನ ದಿವಸಗಳಲ್ಲಿಯೂ, ನೆಹೆಮೀಯನ ದಿವಸಗಳಲ್ಲಿಯೂ ಇಸ್ರಾಯೇಲರೆಲ್ಲರು ಹಾಡುಗಾರರಿಗೂ, ದ್ವಾರಪಾಲಕರಿಗೂ, ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಇತರ ಲೇವಿಯರಿಗೆ ಭಾಗವನ್ನು ಪ್ರತ್ಯೇಕವಾಗಿಟ್ಟರು ಮತ್ತು ಲೇವಿಯರು ಆರೋನನ ವಂಶಸ್ಥರಿಗೆ ಭಾಗವನ್ನು ಪ್ರತ್ಯೇಕವಾಗಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಜೆರುಬ್ಬಾಬೆಲ್ ಮತ್ತು ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಾಯೇಲರು ಗಾಯಕರಿಗೂ ದ್ವಾರಪಾಲಕರಿಗೂ ಪ್ರತಿದಿನ ಜೀವನಾಂಶವನ್ನು ಕೊಡುತ್ತಿದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಮತ್ತು ಲೇವಿಯರು ತಮ್ಮದರಲ್ಲಿಯ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಜೆರುಬ್ಬಾಬೆಲ್, ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಯೇಲರು ಗಾಯಕರಿಗೂ ದ್ವಾರಪಾಲಕರಿಗೂ ದಿನದಿನಕ್ಕೆ ಸಿಕ್ಕತಕ್ಕ ಪಾಲುಗಳನ್ನು ಕೊಡುತ್ತ ಇದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಲೇವಿಯರು ತಮ್ಮದರಲ್ಲಿ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಜೆರುಬ್ಬಾಬೆಲ್, ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಾಯೇಲ್ಯರು ಗಾಯಕರಿಗೂ ದ್ವಾರಪಾಲಕರಿಗೂ ದಿನದಿನಕ್ಕೆ ಸಿಕ್ಕತಕ್ಕ ಭಾಗಗಳನ್ನು ಕೊಡುತ್ತಿದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಲೇವಿಯರು ತಮ್ಮದರಲ್ಲಿ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಜೆರುಬ್ಬಾಬೆಲ್ ಮತ್ತು ನೆಹೆಮೀಯನ ಕಾಲದಲ್ಲಿ ಇಸ್ರೇಲರೆಲ್ಲರೂ ಗಾಯಕರಿಗೆ ಮತ್ತು ದ್ವಾರಪಾಲಕರಿಗೆ ಅನುದಿನ ಅಗತ್ಯವಾದವುಗಳನ್ನು ಒದಗಿಸಿಕೊಟ್ಟರು. ಇತರ ಲೇವಿಯರಿಗೋಸ್ಕರವಾಗಿಯೂ ಜನರು ಹಣವನ್ನು ಪ್ರತ್ಯೇಕವಾಗಿಟ್ಟರು. ಲೇವಿಯರೂ ಸಹ ಆರೋನನ ವಂಶದ ಯಾಜಕರಿಗಾಗಿ ಹಣವನ್ನು ಪ್ರತ್ಯೇಕವಾಗಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:47
14 ತಿಳಿವುಗಳ ಹೋಲಿಕೆ  

ವಾಕ್ಯದಲ್ಲಿ ಉಪದೇಶ ಹೊಂದುವವನು, ಉಪದೇಶ ಮಾಡುವವನೊಂದಿಗೆ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.


ಯೋಚಾದಾಕನ ಮಗ ಯೇಷೂವನ ಮಗ ಯೋಯಾಕೀಮನ ದಿವಸಗಳಲ್ಲಿಯೂ; ರಾಜ್ಯಪಾಲನಾದ ನೆಹೆಮೀಯನ ದಿವಸಗಳಲ್ಲಿಯೂ; ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನ ದಿವಸಗಳಲ್ಲಿಯೂ ಇವರು ಇದ್ದರು.


ಯೋಯಾಕೀಮನ ಕಾಲದಲ್ಲಿ ಅವನ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದ ಯಾಜಕರು ಯಾರೆಂದರೆ: ಸೆರಾಯನ ವಂಶದವನಾದ ಮೆರಾಯನು, ಯೆರೆಮೀಯನ ವಂಶದವನಾದ ಹನನ್ಯಯನು,


ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನ ಮತ್ತು ಯೇಷೂವನ ಸಂಗಡ ಹೋದ ಯಾಜಕರೂ ಲೇವಿಯರೂ ಯಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,


ಏಕೆಂದರೆ ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು.


ಹಾಗೆಯೇ ಅವರು ಬಂದು ಪಟ್ಟಣದ ಬಾಗಿಲು ಕಾಯುವವನನ್ನು ಕರೆದು ಅವನಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು, ಅಲ್ಲಿ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ,” ಎಂದರು.


ಅವನು ಬದುಕಿರುವವರೆಗೂ ಅವನಿಗೆ ಬೇಕಾಗಿದ್ದ ಎಲ್ಲಾ ಪದಾರ್ಥಗಳು ಬಾಬಿಲೋನಿನ ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು.


ಅವನು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದರಲ್ಲಿ ಹಣದ ಪಾಲನ್ನು ಸ್ವೀಕರಿಸಿದ್ದರೂ, ಮಿಕ್ಕ ಲೇವಿಯರೊಡನೆ ಸಮಾನ ಪಾಲು ಹೊಂದಬೇಕು.


ಜೆರುಬ್ಬಾಬೆಲನ ಸಂಗಡ ಹಿಂದಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಹಾಗೂ ಬಾಣ. ಇಸ್ರಾಯೇಲ್ ಜನಾಂಗದ ಪುರುಷರ ಸಂಖ್ಯೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು