Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:8 - ಕನ್ನಡ ಸಮಕಾಲಿಕ ಅನುವಾದ

8 ಲೇವಿಯರು ಯಾರೆಂದರೆ: ಯೇಷೂವ, ಬಿನ್ನೂಯ್, ಕದ್ಮಿಯೇಲ್, ಶೇರೇಬ್ಯ, ಯೆಹೂದ, ಕೃತಜ್ಞತೆಯ ಹಾಡುಗಳ ಜವಾಬ್ದಾರನಾಗಿದ್ದ ಮತ್ತನ್ಯನೂ, ಅವನ ಸಂಗಡಿಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಲೇವಿಯರಲ್ಲಿ: ಯೇಷೂವ, ಬಿನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ ಮತ್ತು ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಸ್ತುತಿಯ ನಾಯಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಲೇವಿಯರು - ಯೇಷೂವ, ಬೆನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ್ಯ, ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಭಜನ ನಾಯಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಲೇವಿಯರು - ಯೇಷೂವ, ಬಿನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ, ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಭಜನ ನಾಯಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಲೇವಿಯವರು ಯಾರೆಂದರೆ: ಯೇಷೂವ, ಬಿನ್ನೂಯ, ಕದ್ಮೀಯೇಲ್, ಶೆರೇಬ್ಯ, ಯೆಹೂದ ಮತ್ತು ಮತ್ತನ್ಯ. ಇವರು ಮತ್ತನ್ಯನಿಗೆ ಸಂಬಂಧಿಕರೂ ಗಾಯಕರಿಗೆ ಮುಖ್ಯಸ್ತರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:8
12 ತಿಳಿವುಗಳ ಹೋಲಿಕೆ  

ಇದಲ್ಲದೆ ಆಸಾಫನ ಮಗ ಜಬ್ದೀಯ ಮಗ, ಮೀಕನ ಮಗ ಮತ್ತನ್ಯನು ಪ್ರಾರ್ಥನೆಯನ್ನು ಮತ್ತು ಕೃತಜ್ಞತಾಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಂಗಡಿಗರಲ್ಲಿ ಎರಡನೆಯವನು ಬಕ್ಬುಕ್ಯನು, ಅವನ ಸಂಗಡ ಯೆದುತೂನನ ಮಗ, ಗಲಾಲನ ಮಗ, ಶಮ್ಮೂವನ ಮಗ ಅಬ್ದನು.


ಲೇವಿಯರ ಮುಖ್ಯಸ್ಥರಾದ ಹಷಬ್ಯನೂ, ಶೇರೇಬ್ಯನೂ; ಕದ್ಮಿಯೇಲನ ಮಗನಾದ ಯೇಷೂವನೂ, ಅವರಿಗೆ ಎದುರಾದ ತಂಡವಾಗಿ ನಿಂತ ಅವರ ಸಹೋದರರೂ, ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಕೃತಜ್ಞತಾಸ್ತುತಿ ಮಾಡುವುದಕ್ಕೆ ವರ್ಗ ವರ್ಗಗಳಾಗಿದ್ದರು.


ಮೀಕನ ಮಗ, ಮತ್ತನ್ಯನ ಮಗ, ಹಷಬ್ಯನ ಮಗ, ಬಾನೀಯ ಮಗ ಉಜ್ಜೀಯು ಯೆರೂಸಲೇಮಿನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು. ಆಸಾಫನ ವಂಶದಲ್ಲಿರುವ ಹಾಡುಗಾರನಾದ ಉಜ್ಜೀಯನು ದೇವರ ಆಲಯ ಕಾರ್ಯದ ಮೇಲೆ ಅಧಿಕಾರಿಯಾಗಿದ್ದನು.


ಆಗ ಮೆಟ್ಟಿಲುಗಳ ಮೇಲೆ ಲೇವಿಯರಲ್ಲಿ ಯೇಷೂವ, ಬಾನೀ, ಕದ್ಮಿಯೇಲ್, ಶೆಬನ್ಯ, ಬುನ್ನಿ, ಶೇರೇಬ್ಯ, ಬಾನೀ, ಕೆನಾನಿ ಎಂಬವರು ನಿಂತು ಮಹಾಶಬ್ದದಿಂದ ತಮ್ಮ ದೇವರಾಗಿರುವ ಯೆಹೋವ ದೇವರಿಗೆ ಮೊರೆಯಿಟ್ಟರು.


ಇದಲ್ಲದೆ ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು, ಸ್ವತಂತ್ರವಾದ ಕೊಠಡಿಗಳಲ್ಲಿ ವಾಸವಾಗಿದ್ದರು. ಏಕೆಂದರೆ ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.


ಆಗ ಯೋಚಾದಾಕನ ಮಗನಾದ ಯೇಷೂವನೂ, ಅವನ ಜೊತೆ ಯಾಜಕರೂ, ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಅವನ ಸಹಾಯಕರು ಎದ್ದು ದೇವರ ಮನುಷ್ಯನಾದ ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವುದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.


ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ. ಇವರು ಯೇಷೂವನ ದಿವಸಗಳಲ್ಲಿ ಯಾಜಕರಲ್ಲಿಯೂ, ಅವರ ಸಂಗಡಿಗರಲ್ಲಿಯೂ ಮುಖ್ಯಸ್ಥರಾಗಿದ್ದರು.


ಇದಲ್ಲದೆ ಅವರ ಸಹೋದರರಾದ ಬಕ್ಬುಕ್ಯ, ಉನ್ನೀ ವರ್ಗಗಳಲ್ಲಿ ಅವರಿಗೆ ಎದುರುಗಡೆ ನಿಂತು ಹಾಡುತ್ತಿದ್ದರು.


ಲೇವಿಯರು: ಹೋದವ್ಯನ ಸಂತತಿಯಾದ ಯೇಷೂವನ, ಕದ್ಮಿಯೇಲನ ವಂಶಜರು 74.


ಲೇವಿಯರು: ಹೋದವ್ಯನ ಸಂತತಿಯಾದ ಯೇಷೂವನ, ಕದ್ಮಿಯೇಲನ ವಂಶಜರು 74.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು