ನೆಹೆಮೀಯ 13:1 - ಕನ್ನಡ ಸಮಕಾಲಿಕ ಅನುವಾದ1 ಅದೇ ದಿವಸದಲ್ಲಿ ಜನರು ಕೇಳುವಂತೆ ಮೋಶೆಯ ನಿಯಮ ಗ್ರಂಥವನ್ನು ಗಟ್ಟಿಯಾಗಿ ಓದುವಾಗ, “ಅಮ್ಮೋನಿಯರೂ, ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದು,” ಎಂದು ಅದರಲ್ಲಿ ಬರೆದದ್ದು ಸಿಕ್ಕಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಂದು ಜನರ ಮುಂದೆ ಮೋಶೆಯ ಧರ್ಮನಿಯಮಗಳ ಪಾರಾಯಣವು ನಡೆಯುತ್ತಿರಲಾಗಿ, ಅದರಲ್ಲಿ ಅಮ್ಮೋನಿಯರಾಗಲಿ ಹಾಗು ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಪ್ರವೇಶಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆ ಕಾಲದಲ್ಲಿ ಜನರ ಮುಂದೆ ಮೋಶೆಯ ಧರ್ಮಶಾಸ್ತ್ರ ಪಾರಾಯಣವು ನಡೆಯುತ್ತಿತ್ತು. ಅದರಲ್ಲಿ - ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಸೇರಬಾರದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆ ಕಾಲದಲ್ಲಿ ಜನರ ಮುಂದೆ ಮೋಶೆಯ ಧರ್ಮಶಾಸ್ತ್ರಪಾರಾಯಣವು ನಡೆಯುತ್ತಿರಲಾಗಿ ಅದರಲ್ಲಿ - ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಸೇರಬಾರದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆ ದಿವಸ ಎಲ್ಲಾ ಜನರಿಗೆ ಕೇಳಿಸುವಂತೆ ಮೋಶೆಯ ಗ್ರಂಥಗಳನ್ನು ಓದಲಾಯಿತು. ಅದರಲ್ಲಿ ಈ ಆಜ್ಞೆಯು ಬರೆಯಲ್ಪಟ್ಟಿದ್ದನ್ನು ಕಂಡುಕೊಂಡರು. ಅದೇನೆಂದರೆ: ದೇವರ ಸಭೆಯಲ್ಲಿ ಯಾವ ಅಮ್ಮೋನ್ಯನಾಗಲಿ ಮೋವಾಬ್ಯನಾಗಲಿ ಇರಕೂಡದು. ಅಧ್ಯಾಯವನ್ನು ನೋಡಿ |