Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:10 - ಕನ್ನಡ ಸಮಕಾಲಿಕ ಅನುವಾದ

10 ಲೇವಿಯರ ಪಾಲನ್ನು ಅವರಿಗೆ ಕೊಡಲಿಲ್ಲವೆಂದು ನನಗೆ ತಿಳಿಯಿತು. ಸೇವೆಯನ್ನು ಮಾಡುವ ಲೇವಿಯರೂ, ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಭಾಗಗಳು ಅವರಿಗೆ ಸಿಕ್ಕಲಿಲ್ಲವೆಂದೂ, ಆರಾಧನೆ ನಡೆಸತಕ್ಕ ಲೇವಿಯರೂ, ಗಾಯಕರೂ ತಮ್ಮ ತಮ್ಮ ಭೂಸ್ವಾಸ್ಥ್ಯಗಳಿಗೆ ಹಿಂತಿರುಗಿ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಪಾಲುಗಳು ಅವರಿಗೆ ಸಿಕ್ಕಲಿಲ್ಲವೆಂದೂ ಆರಾಧನೆ ನಡೆಸತಕ್ಕ ಲೇವಿಯರೂ ಗಾಯಕರೂ ತಮ್ಮ ತಮ್ಮ ಆಸ್ತಿಯಿದ್ದಲ್ಲಿಗೆ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಲೇವಿಯರಿಗೆ ಸಲ್ಲತಕ್ಕ ಭಾಗಗಳು ಅವರಿಗೆ ಸಿಕ್ಕಲಿಲ್ಲವೆಂದೂ ಆರಾಧನೆ ನಡಿಸತಕ್ಕ ಲೇವಿಯರೂ ಗಾಯಕರೂ ತಮ್ಮ ತಮ್ಮ ಭೂಸ್ವಾಸ್ತ್ಯಗಳಿಗೆ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಲೇವಿಯರಿಗೆ ಸಲ್ಲತಕ್ಕ ಪಾಲನ್ನು ಜನರು ಕೊಡಲಿಲ್ಲವೆಂಬ ಕಾರಣದಿಂದಾಗಿ ಲೇವಿಯರೂ ಗಾಯಕರೂ ಹೊಲದಲ್ಲಿ ಕೆಲಸ ಮಾಡಲು ತಮ್ಮ ಊರುಗಳಿಗೆ ಹೊರಟುಹೋದರೆಂಬ ವಿಷಯ ನನಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:10
11 ತಿಳಿವುಗಳ ಹೋಲಿಕೆ  

ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನು ನಮ್ಮ ಕಾಣಿಕೆಗಳನ್ನೂ, ಸಕಲ ಮರಗಳ ಫಲವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ಲೇವಿಯರು ಒಕ್ಕಲುತನವಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವುದಕ್ಕೂ ಪ್ರಮಾಣ ಮಾಡಿದೆವು.


“ಮನುಷ್ಯನು ದೇವರಿಂದ ಕದ್ದುಕೊಳ್ಳಲು ಸಾಧ್ಯವೇ? ಆದರೂ ನೀವು ನನ್ನಿಂದ ಕಳ್ಳತನ ಮಾಡಿದ್ದೀರಿ. “ಆದರೆ ನೀವು, ‘ಯಾವುದರಲ್ಲಿ ನಿನ್ನದನ್ನು ಕಳ್ಳತನ ಮಾಡಿದ್ದೇವೆ?’ ಎಂದು ಕೇಳುತ್ತೀರಿ. “ದಶಮಭಾಗ ಮತ್ತು ಅರ್ಪಣೆಗಳಲ್ಲಿಯೇ!


ಆದ್ದರಿಂದ ಜೆರುಬ್ಬಾಬೆಲನ ದಿವಸಗಳಲ್ಲಿಯೂ, ನೆಹೆಮೀಯನ ದಿವಸಗಳಲ್ಲಿಯೂ ಇಸ್ರಾಯೇಲರೆಲ್ಲರು ಹಾಡುಗಾರರಿಗೂ, ದ್ವಾರಪಾಲಕರಿಗೂ, ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಇತರ ಲೇವಿಯರಿಗೆ ಭಾಗವನ್ನು ಪ್ರತ್ಯೇಕವಾಗಿಟ್ಟರು ಮತ್ತು ಲೇವಿಯರು ಆರೋನನ ವಂಶಸ್ಥರಿಗೆ ಭಾಗವನ್ನು ಪ್ರತ್ಯೇಕವಾಗಿಟ್ಟರು.


ನೀವು ಭೂಮಿಯ ಮೇಲೆ ಜೀವಿಸುವವರೆಗೆ ಲೇವಿಯರನ್ನು ಬಿಟ್ಟು ಬಿಡದ ಹಾಗೆ ನೋಡಿಕೊಳ್ಳಿರಿ.


“ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿಯರಿಗೆ ವಾಸಮಾಡುವುದಕ್ಕೆ ಕೆಲವು ಪಟ್ಟಣಗಳನ್ನು ಕೊಡಬೇಕು. ಪಟ್ಟಣಗಳ ಸುತ್ತಮುತ್ತಲಿರುವ ಹುಲ್ಲುಗಾವಲು ಪ್ರದೇಶಗಳನ್ನು ನೀವು ಲೇವಿಯರಿಗೆ ಕೊಡಬೇಕು.


ಏಕೆಂದರೆ ಪರಿಶುದ್ಧ ಸ್ಥಾನದ ಸಲಕರಣೆಗಳೂ, ಸೇವೆ ಮಾಡುವ ಯಾಜಕರೂ, ದ್ವಾರಪಾಲಕರೂ, ಹಾಡುಗಾರರೂ ಇರುವ ಕೊಟ್ಟಡಿಗಳಿಗೆ ಇಸ್ರಾಯೇಲರೂ, ಲೇವಿಯರ ಮಕ್ಕಳೂ, ಕಾಣಿಕೆಯಾದ ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ತರಬೇಕು. “ನಾವು ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯಮಾಡುವುದಿಲ್ಲ,” ಎಂದು ಬರೆದುಕೊಟ್ಟರು.


ಯಾಜಕರೂ ಲೇವಿಯರೂ ಯೆಹೋವ ದೇವರ ನಿಯಮದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ತಕ್ಕ ಭಾಗವನ್ನು ಕೊಡಬೇಕೆಂದು ಯೆರೂಸಲೇಮಿನಲ್ಲಿ ಜನರಿಗೆ ಅವನು ಆಜ್ಞಾಪಿಸಿದನು.


ನಿನ್ನ ದಹನಬಲಿಯ ಎಳೆಯ ಕುರಿಗಳನ್ನು ನನಗೆ ತರಲಿಲ್ಲ. ನಿನ್ನ ಯಜ್ಞಗಳಿಂದ ನನ್ನನ್ನು ಸನ್ಮಾನಿಸಲಿಲ್ಲ. ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು