Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ ಎಣ್ಣೆ ಇವುಗಳಲ್ಲಿ ಹತ್ತರಲ್ಲೊಂದು ಪಾಲನ್ನು ಕೊಠಡಿಗಳಲ್ಲಿ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ ದ್ರಾಕ್ಷಾರಸ ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಯೆಹೂದ ಪ್ರಾಂತ್ಯದ ಪ್ರತಿಯೊಬ್ಬರೂ ತಮ್ಮ ದಶಮಾಂಶ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಮುಂತಾದವುಗಳನ್ನು ತಂದುಕೊಟ್ಟರು. ಅವುಗಳನ್ನು ಉಗ್ರಾಣಗಳಲ್ಲಿ ಶೇಖರಿಸಿಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:12
9 ತಿಳಿವುಗಳ ಹೋಲಿಕೆ  

ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ, ಲೇವಿಯರಿಗೋಸ್ಕರವೂ ಮೋಶೆಯ ನಿಯಮದಲ್ಲಿ ನೇಮಕವಾದ ಪ್ರಕಾರ, ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ, ಬೊಕ್ಕಸಗಳನ್ನೂ, ಕಾಣಿಕೆಗಳನ್ನೂ, ಪ್ರಥಮ ಫಲಗಳನ್ನೂ, ಹತ್ತನೆಯ ಪಾಲುಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. ಏಕೆಂದರೆ ಸೇವೆಮಾಡುತ್ತಿದ್ದ ಯಾಜಕರನ್ನೂ, ಲೇವಿಯರನ್ನೂ ಕುರಿತು ಯೆಹೂದದವರು ಬಹು ಸಂತೋಷಪಟ್ಟರು.


ನೀವು ಬಿತ್ತುವ ಹೊಲದಲ್ಲಿ ವರ್ಷ ವರ್ಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು.


“ ‘ಭೂಮಿಯ ಬೀಜದಲ್ಲಾಗಲಿ, ಮರದ ಫಲದಲ್ಲಾಗಲಿ ಹತ್ತನೆಯ ಒಂದು ಪಾಲೆಲ್ಲಾ ಯೆಹೋವ ದೇವರದೇ. ಅದು ಯೆಹೋವ ದೇವರಿಗೆ ಪರಿಶುದ್ಧವಾದದ್ದು.


ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ, ಇವುಗಳ ಮೊದಲನೆಯ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳವಾಗಿ ತಂದರು.


“ಮನುಷ್ಯನು ದೇವರಿಂದ ಕದ್ದುಕೊಳ್ಳಲು ಸಾಧ್ಯವೇ? ಆದರೂ ನೀವು ನನ್ನಿಂದ ಕಳ್ಳತನ ಮಾಡಿದ್ದೀರಿ. “ಆದರೆ ನೀವು, ‘ಯಾವುದರಲ್ಲಿ ನಿನ್ನದನ್ನು ಕಳ್ಳತನ ಮಾಡಿದ್ದೇವೆ?’ ಎಂದು ಕೇಳುತ್ತೀರಿ. “ದಶಮಭಾಗ ಮತ್ತು ಅರ್ಪಣೆಗಳಲ್ಲಿಯೇ!


ಯಾಜಕರೂ ಲೇವಿಯರೂ ಯೆಹೋವ ದೇವರ ನಿಯಮದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ತಕ್ಕ ಭಾಗವನ್ನು ಕೊಡಬೇಕೆಂದು ಯೆರೂಸಲೇಮಿನಲ್ಲಿ ಜನರಿಗೆ ಅವನು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು