Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:13 - ಕನ್ನಡ ಸಮಕಾಲಿಕ ಅನುವಾದ

13 ಆಗ ನಾನು ಯಾಜಕನಾದ ಶೆಲೆಮ್ಯನನ್ನೂ, ಲೇಖಕನಾದ ಚಾದೋಕನನ್ನೂ, ಲೇವಿಯರಲ್ಲಿರುವ ಪೆದಾಯನನ್ನೂ ಅವರಿಗೆ ಸಹಾಯವಾಗಿ ಮತ್ತನ್ಯನ ಮಗನಾದ ಜಕ್ಕೂರನ ಮಗ ಹಾನಾನನನ್ನೂ ಬೊಕ್ಕಸಗಳ ಮೇಲೆ ನೇಮಿಸಿದೆನು. ಅವರು ನಂಬಿಗಸ್ತರೆಂದು ಹೆಸರುಗೊಂಡವರು. ತಮ್ಮ ಸಹೋದರರಿಗೆ ಹಂಚಿ ಕೊಡುವುದು ಅವರ ಕೆಲಸವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಂತರ ಉಗ್ರಾಣಗಳ ಮೇಲ್ವಿಚಾರಣೆಗಾಗಿ ನೋಡುವುದಕ್ಕೋಸ್ಕರ ಯಾಜಕನಾದ ಶೆಲೆಮ್ಯ, ಲೇಖಕನಾದ ಚಾದೋಕ್, ಲೇವಿಯ ಕುಲದವನಾದ ಪೆದಾಯ ಇವರನ್ನೂ, ಇವರ ಸಹಾಯಕ್ಕಾಗಿ ಜಕ್ಕೂರನ ಮಗನೂ, ಮತ್ತನ್ಯನ ಮೊಮ್ಮಗನೂ ಆದ ಹಾನಾನನನ್ನೂ ನೇಮಿಸಿದೆನು. ಇವರೆಲ್ಲರೂ ನಂಬಿಗಸ್ತರೆಂದು ಹೆಸರುಗೊಂಡವರಾಗಿದ್ದರು. ತಮ್ಮ ಸಹೋದರರಿಗೆ ಸಿಕ್ಕತಕ್ಕದ್ದನ್ನು ಹಂಚಿಕೊಡುವುದು ಇವರ ಕರ್ತವ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಮೇಲೆ ಉಗ್ರಾಣಗಳನ್ನು ನೋಡಿಕೊಳ್ಳುವುದಕ್ಕೆ ಯಾಜಕನಾದ ಶೆಲೆಮ್ಯ, ಲೇಖಕನಾದ ಚಾದೋಕ್, ಲೇವಿಕುಲದವನಾದ ಪೆದಾಯ ಇವರನ್ನೂ ಇವರ ಸಹಾಯಕ್ಕಾಗಿ ಜಕ್ಕೂರನ ಮಗನೂ ಮತ್ತನ್ಯನ ಮೊಮ್ಮಗನೂ ಆದ ಹಾನಾನನನ್ನೂ ನೇಮಿಸಿದೆ. ಇವರೆಲ್ಲರೂ ನಂಬಿಕಸ್ತರೆಂದು ಹೆಸರುಗೊಂಡವರು. ತಮ್ಮ ಸಹೋದರರಿಗೆ ತಕ್ಕದ್ದನ್ನು ಹಂಚಿಕೊಡುವುದು ಇವರ ಕರ್ತವ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಮೇಲೆ ಉಗ್ರಾಣಗಳನ್ನು ನೋಡುವದಕ್ಕೋಸ್ಕರ ಯಾಜಕನಾದ ಶೆಲೆಮ್ಯ, ಲೇಖಕನಾದ ಚಾದೋಕ್, ಲೇವಿಕುಲದವನಾದ ಪೆದಾಯ ಇವರನ್ನೂ ಇವರ ಸಹಾಯಕ್ಕಾಗಿ ಜಕ್ಕೂರನ ಮಗನೂ ಮತ್ತನ್ಯನ ಮೊಮ್ಮಗನೂ ಆದ ಹಾನಾನನನ್ನೂ ನೇವಿುಸಿದೆನು; ಇವರೆಲ್ಲರೂ ನಂಬಿಗಸ್ತರೆಂದು ಹೆಸರುಗೊಂಡವರು. ತಮ್ಮ ಸಹೋದರರಿಗೆ ಸಿಕ್ಕತಕ್ಕದ್ದನ್ನು ಹಂಚಿಕೊಡುವದು ಇವರ ಕರ್ತವ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯಾಜಕನಾದ ಶೆಲೆಮ್ಯನನ್ನೂ ಬೋಧಕನಾದ ಚಾದೋಕನನ್ನೂ ಪೆದಾಯ ಎಂಬ ಲೇವಿಯನನ್ನೂ ಉಗ್ರಾಣಗಳಿಗೆ ಮುಖ್ಯಸ್ತರನ್ನಾಗಿ ಮಾಡಿದೆನು. ಮತ್ತನ್ಯನ ಮೊಮ್ಮಗನೂ ಜಕ್ಕೂರನ ಮಗನೂ ಆಗಿರುವ ಹಾನಾನನನ್ನು ಅವರಿಗೆ ಸಹಾಯಕನನ್ನಾಗಿ ನೇಮಿಸಿದೆನು. ಇವರು ನಂಬಿಗಸ್ತರಾಗಿದ್ದರು. ತಮ್ಮ ಜನರಿಗೆ ಬೇಕಾದ ದವಸವನ್ನು, ಆಹಾರಸಾಮಾಗ್ರಿಗಳನ್ನು ಒದಗಿಸುವ ಕಾರ್ಯಕ್ಕೆ ಅವರು ಜವಾಬ್ದಾರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:13
20 ತಿಳಿವುಗಳ ಹೋಲಿಕೆ  

ಆಮೇಲೆ ನಾನು ನನ್ನ ಸಹೋದರನಾದ ಹನಾನೀ ಮತ್ತು ಅರಮನೆಯ ಅಧಿಪತಿಯಾದ ಹನನ್ಯ ಇವರಿಗೆ ಯೆರೂಸಲೇಮಿನ ಜವಾಬ್ದಾರಿಕೆಯನ್ನು ಒಪ್ಪಿಸಿದೆನು. ಏಕೆಂದರೆ ಇವನು ಸತ್ಯವಂತನಾಗಿಯೂ, ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.


ಆದರೆ ಅವರು ನಂಬಿಗಸ್ತರಾಗಿ ಕೆಲಸ ಮಾಡಿದ್ದರಿಂದ, ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳುವ ಅವಶ್ಯಕತೆ ಇಲ್ಲ, ಎಂದು ಹೇಳು,” ಎಂದನು.


ಹೀಗಿರುವುದರಿಂದ ನಂಬಿಗಸ್ತರಾಗಿರುವುದು ನಿರ್ವಾಹಕರಲ್ಲಿ ಅವಶ್ಯವಾಗಿ ಕಾಣತಕ್ಕ ಸದ್ಗುಣವಾಗಿದೆ.


ಸಹೋದರರೇ, ನಿಮ್ಮಲ್ಲಿ ಪವಿತ್ರಾತ್ಮಭರಿತರೂ ಜ್ಞಾನವಂತರೂ ಎಂದು ಸಾಕ್ಷಿ ಹೊಂದಿರುವ ಏಳು ಜನರನ್ನು ಆಯ್ಕೆ ಮಾಡಿರಿ. ನಾವು ಅವರನ್ನು ಈ ಕಾರ್ಯಕ್ಕಾಗಿ ನೇಮಿಸುವೆವು.


ಆ ದಿನಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಅವರಲ್ಲಿ ಗ್ರೀಕ್ ಮಾತನಾಡುವ ಯೆಹೂದ್ಯರು, ಹೀಬ್ರೂ ಭಾಷೆ ಮಾತನಾಡುವ ಯೆಹೂದ್ಯರ ವಿರೋಧವಾಗಿ ಗೊಣಗುಟ್ಟುತ್ತಿದ್ದರು. ಏಕೆಂದರೆ, “ಅನುದಿನದ ಉಪಚಾರದಲ್ಲಿ ಅವರು ತಮ್ಮ ವಿಧವೆಯರನ್ನು ಅಲಕ್ಷ್ಯಮಾಡುತ್ತಿದ್ದಾರೆ,” ಎಂದರು.


ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ, ಲೇವಿಯರಿಗೋಸ್ಕರವೂ ಮೋಶೆಯ ನಿಯಮದಲ್ಲಿ ನೇಮಕವಾದ ಪ್ರಕಾರ, ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ, ಬೊಕ್ಕಸಗಳನ್ನೂ, ಕಾಣಿಕೆಗಳನ್ನೂ, ಪ್ರಥಮ ಫಲಗಳನ್ನೂ, ಹತ್ತನೆಯ ಪಾಲುಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. ಏಕೆಂದರೆ ಸೇವೆಮಾಡುತ್ತಿದ್ದ ಯಾಜಕರನ್ನೂ, ಲೇವಿಯರನ್ನೂ ಕುರಿತು ಯೆಹೂದದವರು ಬಹು ಸಂತೋಷಪಟ್ಟರು.


ಇದಲ್ಲದೆ ಅವರು ಕೆಲಸಮಾಡುವವರಿಗೆ ಹಣ ಕೊಡುವುದಕ್ಕೆ ಯಾರ ಕೈಯಲ್ಲಿ ಒಪ್ಪಿಸಿದ್ದರೋ, ಅವರಿಂದ ಹಣದ ಲೆಕ್ಕವನ್ನು ತೆಗೆದುಕೊಳ್ಳಲಿಲ್ಲ, ಏಕೆಂದರೆ ಅವರು ನಂಬಿಗಸ್ತರಾಗಿದ್ದರು.


ಇದಲ್ಲದೆ ಇವರು ಸಹ ಮೊದಲು ಪರೀಕ್ಷೆಗೊಳಪಡಬೇಕು. ಅವರು ನಿಂದಾರಹಿತರಾಗಿ ಕಂಡು ಬಂದರೆ ಸಭಾ ಹಿರಿಯರಾಗಿ ಸೇವೆಮಾಡಲಿ.


ನನ್ನನ್ನು ಬಲಪಡಿಸುವ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವು ನನ್ನನ್ನು ನಂಬಿಗಸ್ತನೆಂದು ಎಣಿಸಿ ಸೇವೆಗೆ ನೇಮಿಸಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು. ಅಪೊಸ್ತಲರು ಅದನ್ನು ಅಗತ್ಯವಿದ್ದವರಿಗೆ ತಕ್ಕಂತೆ ಹಂಚುತ್ತಿದ್ದರು.


ಕರ್ತದೇವರು ಹೇಳಿದ್ದೇನೆಂದರೆ, “ತಕ್ಕ ಕಾಲದಲ್ಲಿ ತನ್ನ ಸೇವಕರಿಗೆ ಅವರ ಪಾಲಿನ ಆಹಾರವನ್ನು ಕೊಡುವುದಕ್ಕಾಗಿ, ಅವರ ಯಜಮಾನನು ತನ್ನ ಮನೆಯ ಮೇಲೆ ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಆಡಳಿತಗಾರನು ಯಾರು?


ತುತೂರಿಗಳನ್ನು ಹಿಡಿಯುವ ಯಾಜಕರ ಮಕ್ಕಳಲ್ಲಿ ಆಸಾಫನ ಮಗ ಜಕ್ಕೂರನ ಮಗ, ಮೀಕಾಯನ ಮಗ, ಮತ್ತನ್ಯನ ಮಗ, ಶೆಮಾಯನ ಮಗ, ಯೋನಾತಾನನ ಮಗ ಜೆಕರ್ಯನೂ,


ಮೀಕನ ಮಗ, ಮತ್ತನ್ಯನ ಮಗ, ಹಷಬ್ಯನ ಮಗ, ಬಾನೀಯ ಮಗ ಉಜ್ಜೀಯು ಯೆರೂಸಲೇಮಿನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು. ಆಸಾಫನ ವಂಶದಲ್ಲಿರುವ ಹಾಡುಗಾರನಾದ ಉಜ್ಜೀಯನು ದೇವರ ಆಲಯ ಕಾರ್ಯದ ಮೇಲೆ ಅಧಿಕಾರಿಯಾಗಿದ್ದನು.


ಜಕ್ಕೂರ್, ಶೇರೇಬ್ಯ, ಶೆಬನ್ಯ,


ಆಗ ನಿಯಮಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡಲಾಗಿದ್ದ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನ ಬಲಗಡೆಯಲ್ಲಿ ಮತ್ತಿತ್ಯ. ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ, ಅವನಿಗೆ ಎಡಗಡೆಯಲ್ಲಿ ಪೆದಾಯ್, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ನಿಂತಿದ್ದರು.


ಇವನ ಆಚೆ ಶೆಲೆಮ್ಯನ ಮಗನಾದ ಹನನ್ಯ, ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಚಾಲಾಫನ ಆರನೆಯ ಮಗನಾದ ಹಾನೂನ್, ಇವನ ಆಚೆ, ಅಂದರೆ ತನ್ನ ಸ್ವಂತ ಕೊಠಡಿಯ ಮುಂದೆ ಬೆರೆಕ್ಯನ ಮಗನಾದ ಮೆಷುಲ್ಲಾಮ್.


ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತನೆಯ ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಟ್ಟಡಿಗಳ ಬಳಿಯಿರುವ ಬೊಕ್ಕಸದ ಮನೆಗೆ ತರಬೇಕು.


ಆದರೆ ಪ್ರಾಯಶ್ಚಿತ್ತ ಬಲಿಯ ಹಣವನ್ನು, ಪಾಪ ಪರಿಹಾರದ ಬಲಿಯ ಹಣವನ್ನು ಯೆಹೋವ ದೇವರ ಆಲಯಕ್ಕೆ ತೆಗೆದುಕೊಂಡು ಬರಲಿಲ್ಲ, ಅದು ಯಾಜಕರದಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು