ನೆಹೆಮೀಯ 13:19 - ಕನ್ನಡ ಸಮಕಾಲಿಕ ಅನುವಾದ19 ಸಬ್ಬತ್ ದಿನಕ್ಕೆ ಮುಂಚೆ ಯೆರೂಸಲೇಮಿನ ಬಾಗಿಲುಗಳಲ್ಲಿ ಕತ್ತಲಾಗಲಾರಂಭಿಸಿದಾಗ ಬಾಗಿಲುಗಳನ್ನು ಹಾಕುವ ಹಾಗೆಯೂ, ಸಬ್ಬತ್ ದಿನವು ತೀರುವವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಸಬ್ಬತ್ ದಿನದಲ್ಲಿ ಹೊರೆ ಏನಾದರೂ ಒಳಗೆ ತರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಇಟ್ಟೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇದಲ್ಲದೆ, ಸಬ್ಬತ್ ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ಕತ್ತಲಾಗುವುದಕ್ಕೆ ಮೊದಲೇ ಮುಚ್ಚಿಸಿ, ಸಬ್ಬತ್ ದಿನವು ಮುಗಿಯುವವರೆಗೂ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ, ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇದಲ್ಲದೆ, “ಸಬ್ಬತ್‍ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಜೆರುಸಲೇಮಿನ ಬಾಗಿಲುಗಳಲ್ಲಿ ಕತ್ತಲಾಗುವಾಗಲೇ ಕದಗಳನ್ನು ಮುಚ್ಚಿಸಬೇಕು; ಸಬ್ಬತ್‍ದಿನ ಗತಿಸುವುದಕ್ಕಿಂತ ಮುಂಚೆ ಅವುಗಳನ್ನು ತೆರೆಯಬಾರದು,” ಎಂದು ಆಜ್ಞಾಪಿಸಿದೆ. ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇದಲ್ಲದೆ ಸಬ್ಬತ್‍ದಿನ ಪ್ರಾರಂಭವಾಗುವದಕ್ಕಿಂತ ಮೊದಲು ಯೆರೂಸಲೇವಿುನ ಬಾಗಲುಗಳಲ್ಲಿ ಕತ್ತಲಾಗಿರುವಾಗಲೇ ಕದಗಳನ್ನು ಮುಚ್ಚಿಸಿ ಸಬ್ಬತ್ ದಿನವು ಗತಿಸುವದಕ್ಕಿಂತ ಮುಂಚೆ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಕಾವಲಿರಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅಲ್ಲದೆ ಶುಕ್ರವಾರ ಸೂರ್ಯಸ್ತಮಾನಕ್ಕಿಂತ ಮುಂಚೆ ಜೆರುಸಲೇಮಿನ ಬಾಗಿಲ ಕದಗಳನ್ನು ಮುಚ್ಚಲು ಆಜ್ಞೆಯಿತ್ತೆನು. ಸಬ್ಬತ್‌ದಿನ ಮುಗಿದ ಬಳಿಕವೇ ಅವುಗಳನ್ನು ತೆರೆಯಲು ಅಪ್ಪಣೆಕೊಟ್ಟೆನು. ದ್ವಾರಗಳ ಬಳಿ ನನ್ನ ಕೆಲವು ಜನರನ್ನು ನಿಲ್ಲಿಸಿ, ಸಬ್ಬತ್ ದಿನದಲ್ಲಿ ಯಾವ ಮೂಟೆಯನ್ನೂ ನಗರದೊಳಗೆ ತರಲು ಬಿಡಬಾರದು ಎಂದು ಅವರಿಗೆ ಆಜ್ಞಾಪಿಸಿದೆನು. ಅಧ್ಯಾಯವನ್ನು ನೋಡಿ |