ನೆಹೆಮೀಯ 13:21 - ಕನ್ನಡ ಸಮಕಾಲಿಕ ಅನುವಾದ21 ಆಗ ನಾನು ಅವರನ್ನು ಗದರಿಸಿ ಅವರಿಗೆ, “ನೀವು ಕೋಟೆಯ ಗೋಡೆಯ ಹೊರಗೆ ಏಕೆ ಇಳುಕೊಂಡಿದ್ದೀರಿ? ನೀವು ಇನ್ನು ಮೇಲೆ ಹಾಗೆ ಮಾಡಿದರೆ ನಿಮ್ಮನ್ನು ಸೆರೆಗೆ ಹಾಕುವೆನು,” ಎಂದೆನು. ಆ ದಿನದಿಂದ ಅವರು ಸಬ್ಬತ್ ದಿನದಲ್ಲಿ ಬರಲೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಕೊನೆಗೆ ನಾನು ಅವರಿಗೆ, “ನೀವು ಗೋಡೆಯ ಹೊರಗೇಕೆ ಇಳಿದುಕೊಂಡಿದ್ದೀರಿ? ನೀವು ಪುನಃ ಹೀಗೆ ಮಾಡಿದರೆ ನಿಮ್ಮನ್ನು ಸೆರೆಹಿಡಿಸುವೆನು” ಎಂದು ಗದರಿಸಲು, ಅವರು ಅಂದಿನಿಂದ ಸಬ್ಬತ್ ದಿನದಲ್ಲಿ ಪುನಃ ಬರಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಕಡೆಗೆ ನಾನು ಅವರನ್ನು, “ನೀವು ಗೋಡೆಯ ಹೊರಗೇಕೆ ಇಳಿದುಕೊಂಡಿದ್ದೀರಿ? ನೀವು ಮತ್ತೆ ಹೀಗೆ ಮಾಡಿದರೆ ನಿಮ್ಮನ್ನು ಸೆರೆಹಿಡಿಸುವೆನು,” ಎಂದು ಗದರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಕಡೆಯಲ್ಲಿ ನಾನು ಅವರನ್ನು - ನೀವು ಗೋಡೆಯ ಹೊರಗೇಕೆ ಇಳುಕೊಂಡಿದ್ದೀರಿ? ನೀವು ತಿರಿಗಿ ಹೀಗೆ ಮಾಡಿದರೆ ನಿಮ್ಮನ್ನು ಹಿಡಿಸುವೆನು ಎಂದು ಗದರಿಸಲು ಅವರು ಅಂದಿನಿಂದ ಸಬ್ಬತ್‍ದಿನದಲ್ಲಿ ತಿರಿಗಿ ಬರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಾನು ಆ ವ್ಯಾಪಾರಸ್ತರಿಗೆ, “ನೀವು ಬಾಗಿಲಿಗೆದುರಾಗಿ ನಗರದ ಹೊರಗೆ ರಾತ್ರಿ ಉಳಿದುಕೊಳ್ಳಬಾರದು. ಹಾಗೆ ಮಾಡಿದ್ದಲ್ಲಿ ನಿಮ್ಮನ್ನು ದಸ್ತಗಿರಿ ಮಾಡಬೇಕಾಗುವದು” ಎಂದು ಎಚ್ಚರಿಸಿದೆನು. ಅಂದಿನಿಂದ ಅವರು ಸಬ್ಬತ್ ದಿನದಲ್ಲಿ ನಗರಕ್ಕೆ ವ್ಯಾಪಾರಕ್ಕಾಗಿ ಬರುವುದನ್ನು ನಿಲ್ಲಿಸಿದರು. ಅಧ್ಯಾಯವನ್ನು ನೋಡಿ |
ಆ ದಿನಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ ದಿನಗಳಲ್ಲಿ ಕೆಲವರು ದ್ರಾಕ್ಷಿಯ ಆಲೆಗಳಲ್ಲಿ ಕೆಲಸಮಾಡುವುದನ್ನೂ, ಸಿವುಡುಗಳನ್ನು ತರುವುದನ್ನೂ, ಕತ್ತೆಗಳ ಮೇಲೆ ಹೇರಿಕೊಂಡು ಬರುವುದನ್ನೂ ಮತ್ತು ಸಬ್ಬತ್ ದಿನಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ, ದ್ರಾಕ್ಷಿಹಣ್ಣುಗಳನ್ನೂ, ಅಂಜೂರದ ಹಣ್ಣುಗಳನ್ನೂ, ಎಲ್ಲಾ ಹೊರೆಗಳನ್ನೂ ತರುವುದನ್ನು ನಾನು ಕಂಡೆನು. ಆದ್ದರಿಂದ, ವಿಶ್ರಾಂತಿಯ ದಿನದಲ್ಲಿ ಮಾರುವುದರ ವಿರೋಧವಾಗಿ ನಾನು ಎಚ್ಚರಿಸಿದೆನು.