ನೆಹೆಮೀಯ 13:29 - ಕನ್ನಡ ಸಮಕಾಲಿಕ ಅನುವಾದ29 ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಒಡಂಬಡಿಕೆಯನ್ನೂ, ಅಶುದ್ಧ ಮಾಡಿದ್ದಾರೆ; ಇದನ್ನು ನೆನಪುಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ. ಅವರ ಕೃತ್ಯಗಳನ್ನೂ ನೆನಪುಮಾಡಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರೆ; ಇದನ್ನು ನೆನಪುಮಾಡಿಕೊಳ್ಳಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ; ಇದನ್ನು ನೆನಪು ಮಾಡಿಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ನನ್ನ ದೇವರೇ, ಆ ಮನುಷ್ಯರನ್ನು ಶಿಕ್ಷಿಸು. ಅವರು ಯಾಜಕತ್ವವನ್ನು ಹೊಲಸು ಮಾಡಿದ್ದಾರೆ. ಅದನ್ನು ಅವರು ಸಾಮಾನ್ಯವೆಂದೆಣಿಸಿದ್ದಾರೆ. ಯಾಜಕರೊಂದಿಗೆ ಮತ್ತು ಲೇವಿಯರೊಂದಿಗೆ ನೀನು ಮಾಡಿದ ಒಡಂಬಡಿಕೆಯನ್ನು ಅವರು ತಿರಸ್ಕರಿಸಿದ್ದಾರೆ. ಅಧ್ಯಾಯವನ್ನು ನೋಡಿ |
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.