4-5 ಆದರೆ ಅದಕ್ಕಿಂತ ಮೊದಲು ಎಲ್ಯಾಷೀಬನು ದೇವಾಲಯದ ಒಂದು ಕೋಣೆಯನ್ನು ಟೋಬೀಯನಿಗೆ ಕೊಟ್ಟಿದ್ದನು. ಎಲ್ಯಾಷೀಬನು ದೇವಾಲಯದ ಉಗ್ರಾಣದ ಮುಖ್ಯಸ್ಥನಾಗಿದ್ದನು ಮತ್ತು ಟೋಬೀಯನ ಪ್ರಾಣಸ್ನೇಹಿತನಾಗಿದ್ದನು. ಆ ಕೋಣೆಯಲ್ಲಿ ಧಾನ್ಯಸಮರ್ಪಣೆಯ ಉಳಿದ ಭಾಗ, ಧೂಪ, ದೇವಾಲಯದ ಪಾತ್ರೆಗಳು, ದಶಮಾಂಶ, ದವಸಧಾನ್ಯಗಳು, ಹೊಸ ದ್ರಾಕ್ಷಾರಸ, ಎಣ್ಣೆ ಇವುಗಳನ್ನೆಲ್ಲಾ ಗಾಯಕರಿಗೂ ಲೇವಿಯರಿಗೂ ಮತ್ತು ದ್ವಾರಪಾಲಕರಿಗೂ ಕೊಡುವುದಕ್ಕಾಗಿ ಅಲ್ಲಿಟ್ಟಿದ್ದರು. ಅಲ್ಲಿ ಯಾಜಕರಿಗೆ ಉಡುಗೊರೆಗಳನ್ನು ಸಹ ಇಟ್ಟಿದ್ದರು. ಅದೇ ಕೋಣೆಯನ್ನು ಎಲ್ಯಾಷೀಬನು ಟೋಬೀಯನಿಗೆ ಕೊಟ್ಟಿದ್ದನು.
ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ, ಲೇವಿಯರಿಗೋಸ್ಕರವೂ ಮೋಶೆಯ ನಿಯಮದಲ್ಲಿ ನೇಮಕವಾದ ಪ್ರಕಾರ, ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ, ಬೊಕ್ಕಸಗಳನ್ನೂ, ಕಾಣಿಕೆಗಳನ್ನೂ, ಪ್ರಥಮ ಫಲಗಳನ್ನೂ, ಹತ್ತನೆಯ ಪಾಲುಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. ಏಕೆಂದರೆ ಸೇವೆಮಾಡುತ್ತಿದ್ದ ಯಾಜಕರನ್ನೂ, ಲೇವಿಯರನ್ನೂ ಕುರಿತು ಯೆಹೂದದವರು ಬಹು ಸಂತೋಷಪಟ್ಟರು.
ನಾನು ಹೆಬ್ಬಾಗಿಲುಗಳಲ್ಲಿ ಬಾಗಿಲುಗಳನ್ನು ಇಡುವುದಕ್ಕಿಂತ ಮುಂಚೆ ನಾನು ಗೋಡೆಯಲ್ಲಿ ಒಂದು ಸಂದನ್ನೂ ಬಿಡದೆ ಪುನಃ ಕಟ್ಟಿದೆನೆಂದು ಸನ್ಬಲ್ಲಟನೂ, ಟೋಬೀಯನೂ, ಅರಬಿಯನಾದ ಗೆಷೆಮನೂ, ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ,
ಆಗ ಮಹಾಯಾಜಕನಾದ ಎಲ್ಯಾಷೀಬನೂ, ಅವನ ಕುಟುಂಬದ ಯಾಜಕರೂ ಕುರಿ ಬಾಗಿಲನ್ನು ಕಟ್ಟಿ, ಅದನ್ನು ಪ್ರತಿಷ್ಠಿಸಿ, ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಶತ ಗೋಪುರದವರೆಗೆ ಗೋಡೆ ಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು.