ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ, ಲೇವಿಯರಿಗೋಸ್ಕರವೂ ಮೋಶೆಯ ನಿಯಮದಲ್ಲಿ ನೇಮಕವಾದ ಪ್ರಕಾರ, ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ, ಬೊಕ್ಕಸಗಳನ್ನೂ, ಕಾಣಿಕೆಗಳನ್ನೂ, ಪ್ರಥಮ ಫಲಗಳನ್ನೂ, ಹತ್ತನೆಯ ಪಾಲುಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. ಏಕೆಂದರೆ ಸೇವೆಮಾಡುತ್ತಿದ್ದ ಯಾಜಕರನ್ನೂ, ಲೇವಿಯರನ್ನೂ ಕುರಿತು ಯೆಹೂದದವರು ಬಹು ಸಂತೋಷಪಟ್ಟರು.
ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತನೆಯ ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಟ್ಟಡಿಗಳ ಬಳಿಯಿರುವ ಬೊಕ್ಕಸದ ಮನೆಗೆ ತರಬೇಕು.
ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನು ನಮ್ಮ ಕಾಣಿಕೆಗಳನ್ನೂ, ಸಕಲ ಮರಗಳ ಫಲವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ಲೇವಿಯರು ಒಕ್ಕಲುತನವಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವುದಕ್ಕೂ ಪ್ರಮಾಣ ಮಾಡಿದೆವು.
ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ನಮ್ಮ ಪುತ್ರರಲ್ಲಿಯೂ, ನಮ್ಮ ಪಶುಗಳಲ್ಲಿಯೂ ಚೊಚ್ಚಲಾದವುಗಳನ್ನು; ನಮ್ಮ ದನಗಳಲ್ಲಿಯೂ, ಮಂದೆಗಳಲ್ಲಿಯೂ ಚೊಚ್ಚಲಾದವುಗಳನ್ನು, ನಮ್ಮ ದೇವರ ಆಲಯಕ್ಕೆ ತಂದು, ನಮ್ಮ ದೇವರ ಆಲಯದಲ್ಲಿ ಸೇವಿಸುವ ಯಾಜಕರಿಗೆ ಕೊಡುತ್ತೇವೆ;