Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:10 - ಕನ್ನಡ ಸಮಕಾಲಿಕ ಅನುವಾದ

10 ಇಸ್ರಾಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬಾ ವಿಚಲಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇಸ್ರಾಯೇಲರ ಹಿತಚಿಂತಕನೊಬ್ಬನು ಬಂದಿದ್ದಾನೆಂಬ ವರ್ತಮಾನವು ಹೋರೋನ್ ಪಟ್ಟಣದವನಾದ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನಿಗೂ ತಲುಪಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇಸ್ರಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್ ದೇಶದವನಾದ ತೊಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬ ಹೊಟ್ಟೆಕಿಚ್ಚುಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇಸ್ರಾಯೇಲ್ಯರ ಹಿತಚಿಂತಕನೊಬ್ಬನು ಬಂದನೆಂಬ ವರ್ತಮಾನವು ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್‍ದೇಶದವನಾದ ಟೋಬೀಯ ಎಂಬ ದಾಸನಿಗೂ ಮುಟ್ಟಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಏನು ಮಾಡುತ್ತಿದ್ದೇನೆಂದು ಸನ್ಬಲ್ಲಟ್ ಮತ್ತು ಟೋಬೀಯ ಎಂಬವರಿಬ್ಬರು ಕೇಳಿಸಿಕೊಂಡರು. ಇಸ್ರೇಲ್ ಜನರಿಗೆ ಸಹಾಯ ಮಾಡಲು ಬರುತ್ತಿದ್ದಾರೆಂಬ ವಿಷಯವು ಅವರನ್ನು ತಳಮಳಗೊಳಿಸಿತು ಮತ್ತು ಅವರಿಗೆ ಸಿಟ್ಟೂ ಬಂದಿತು. ಸನ್ಬಲ್ಲಟನು ಹೋರೋನಿನವನು ಮತ್ತು ಟೋಬೀಯನು ಅಮ್ಮೋನಿಯ ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:10
26 ತಿಳಿವುಗಳ ಹೋಲಿಕೆ  

ಯೆರೂಸಲೇಮಿನ ಗೋಡೆಯ ದುರಸ್ತಿಕಾರ್ಯ ಮುಂದುವರಿದಿದೆ ಹಾಗು ಅದರ ಸಂದುಗಳು ಮತ್ತೆ ಮುಚ್ಚಿಕೊಳ್ಳುತ್ತಿವೆ ಎಂದು ಸನ್ಬಲ್ಲಟನೂ ಟೋಬೀಯನೂ ಅರಬಿಯರೂ ಅಮ್ಮೋನ್ಯರೂ ಅಷ್ಡೋದ್ಯರೂ ಕೇಳಿದಾಗ ಬಹು ಕೋಪಗೊಂಡರು.


ಆದರೆ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ಯ ದಾಸನಾದ ಟೋಬೀಯನೂ, ಅರಬಿಯನಾದ ಗೆಷೆಮನೂ ಇದನ್ನು ಕೇಳಿದಾಗ, ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ, “ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರುಗಿಬೀಳುವಿರೋ?” ಎಂದರು.


ಕ್ರೋಧವು ಕ್ರೂರ, ಕೋಪವು ಪ್ರವಾಹ; ಆದರೆ ಅಸೂಯೆದ ಮುಂದೆ ಯಾವನು ನಿಂತಾನು?


ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ವಿಚಾರಕನಾಗಿದ್ದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಮೀಪ ಬಂಧುವಾಗಿದ್ದನು.


ನಾನು ಹೆಬ್ಬಾಗಿಲುಗಳಲ್ಲಿ ಬಾಗಿಲುಗಳನ್ನು ಇಡುವುದಕ್ಕಿಂತ ಮುಂಚೆ ನಾನು ಗೋಡೆಯಲ್ಲಿ ಒಂದು ಸಂದನ್ನೂ ಬಿಡದೆ ಪುನಃ ಕಟ್ಟಿದೆನೆಂದು ಸನ್ಬಲ್ಲಟನೂ, ಟೋಬೀಯನೂ, ಅರಬಿಯನಾದ ಗೆಷೆಮನೂ, ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ,


ಈ ವರದಿಯನ್ನು ಕೇಳಿದಾಗ, ದೇವಾಲಯದ ಕಾವಲುಗಾರರ ದಳಪತಿಯೂ ಮುಖ್ಯಯಾಜಕರೂ ಇದರಿಂದ ಏನಾಗುವುದೋ ಎಂದು ಕಳವಳಪಟ್ಟರು.


ಯೇಸುವಿನಲ್ಲಿ ಸತ್ತವರಿಗೆ ಪುನರುತ್ಥಾನ ಉಂಟು ಎಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿದ್ದರಿಂದ ಅವರು ಬಹಳ ಬೇಸರಗೊಂಡರು.


“ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಲೆಯವರೆಗೂ, ಯಹಚಿನವರೆಗೂ, ಚೋಗರ್ ಮೊದಲ್ಗೊಂಡು ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಮೂರು ವರ್ಷದ ಕಡಸಿನಂತೆ ತಮ್ಮ ಶಬ್ದವನ್ನೆತ್ತಿದ್ದರು; ಏಕೆಂದರೆ ನಿಮ್ರೀಮ್‌ನ ನೀರು ಸಹ ಹಾಳಾದವು.


ಲೂಹೀತ್ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶದ ಶಬ್ದವನ್ನು ಕೇಳಿದ್ದಾರೆ.


ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗುತ್ತದೆ. ಅಲ್ಲಿಂದ ಪಲಾಯನವಾದವರು ಚೋಗರ್ ಕಡೆಗೂ ಎಗ್ಲತ್ ಶೆಲಿಶೀಯ ಕಡೆಗೂ ಓಡಿಹೋಗುವರು. ಲೂಹೀತ್ ದಿಣ್ಣೆಯನ್ನು ಅಳುತ್ತಾ ಹತ್ತುವರು. ಏಕೆಂದರೆ ಹೊರೊನಯಿಮ್ ಊರಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ದನಿಗೈಯುವರು.


ಕುದುರೆಗಳ ಮೇಲೆ ಸವಾರಿ ಮಾಡುವ ಸೇವಕರನ್ನೂ ಅಧಿಕಾರಿಗಳು ಸೇವಕರ ಹಾಗೆ ನಡೆದುಕೊಂಡು ಹೋಗುವುದನ್ನೂ ನಾನು ನೋಡಿದ್ದೇನೆ.


ಅರಸನಾಗುವ ದಾಸನು, ತಿನ್ನಲು ಸಾಕಷ್ಟು ಪಡೆಯುವ ಮೂರ್ಖನು,


ದುಷ್ಟರು ಇದನ್ನು ಕಂಡು ವ್ಯಥೆ ಪಡುವರು; ಅವರು ತಮ್ಮ ಹಲ್ಲು ಕಡಿದು ಮರೆಯಾಗಿ ಹೋಗುವರು; ದುಷ್ಟರ ಆಶೆಯು ನಾಶವಾಗುವುದು.


ಅದೇ ದಿವಸದಲ್ಲಿ ಜನರು ಕೇಳುವಂತೆ ಮೋಶೆಯ ನಿಯಮ ಗ್ರಂಥವನ್ನು ಗಟ್ಟಿಯಾಗಿ ಓದುವಾಗ, “ಅಮ್ಮೋನಿಯರೂ, ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದು,” ಎಂದು ಅದರಲ್ಲಿ ಬರೆದದ್ದು ಸಿಕ್ಕಿತು.


ಈ ಸುದ್ದಿ ಸುತ್ತಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.


ಮಹಾಯಾಜಕನಾದ ಎಲ್ಯಾಷೀಬನ ಮಗ ಯೋಯಾದನ ಮಕ್ಕಳಲ್ಲಿ ಒಬ್ಬನು ಹೋರೋನಿನವನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.


ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಸಹೋದರರ ಸಮೂಹದಲ್ಲಿ ಹೆಚ್ಚಿನ ಗೌರವ ಪಾತ್ರನೂ ತನ್ನ ಜನರ ಹಿತಚಿಂತಕನೂ ತನ್ನ ಸಂತಾನದವರಿಗೆ ಕ್ಷೇಮಾಭಿವೃದ್ಧಿಯನ್ನು ಮಾತನಾಡುವವನೂ ಆಗಿದ್ದನು.


ಇಷ್ಮಾಯೇಲನು ಮಿಚ್ಪದಲ್ಲಿದ್ದ ಜನರ ಉಳಿದವರನ್ನೆಲ್ಲಾ ಅರಸನ ಪುತ್ರಿಯರನ್ನೂ, ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟು, ಉಳಿದ ಜನರೆಲ್ಲರನ್ನು ಸೆರೆಯಾಗಿ ಒಯ್ದನು. ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು, ಅಮ್ಮೋನ್ಯರ ಬಳಿಗೆ ದಾಟಿಹೋಗುವುದಕ್ಕೆ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು