Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:15 - ಕನ್ನಡ ಸಮಕಾಲಿಕ ಅನುವಾದ

15 ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಯನ್ನು ಪರೀಕ್ಷಿಸಿದೆನು. ಆಮೇಲೆ ಪುನಃ ಕಣಿವೆಯ ಬಾಗಿಲಿನಿಂದ ಮನೆಗೆ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದಕಾರಣ ನಾನು ರಾತ್ರಿಯಲ್ಲಿ ಹಳ್ಳದ ಬದಿಯ ಮಾರ್ಗವಾಗಿ ಹೋಗಿ ಗೋಡೆಯನ್ನು ಪರೀಕ್ಷಿಸಿದೆನು. ಆ ಮೇಲೆ ಪುನಃ ತಗ್ಗಿನ ಬಾಗಿಲಿನಿಂದ ಹಿಂತಿರುಗಿ ಮನೆಗೆ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿಲ್ಲದ್ದರಿಂದ ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಯನ್ನು ಪರೀಕ್ಷಿಸಿದೆ. ಆಮೇಲೆ ಪುನಃ ಕಣಿವೆಯ ಬಾಗಿಲಿನಿಂದ ಮನೆಗೆ ಬಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವದಕ್ಕೆ ಮಾರ್ಗವಿಲ್ಲದ್ದರಿಂದ ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಯನ್ನು ಪರೀಕ್ಷಿಸಿದೆನು. ಆಮೇಲೆ ಪುನಃ ತಗ್ಗಿನ ಬಾಗಲಿನಿಂದ ಮನೆಗೆ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದ್ದರಿಂದ ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಗಳನ್ನು ಪರೀಕ್ಷಿಸಿ ಕೊನೆಗೆ ಹಿಂದಿರುಗಿ ಕಣಿವೆ ಬಾಗಿಲ ಮೂಲಕ ಮನೆ ಸೇರಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:15
6 ತಿಳಿವುಗಳ ಹೋಲಿಕೆ  

ಜನರೆಲ್ಲಾ ದಾಟಿಹೋಗುವಾಗ, ದೇಶದವರೆಲ್ಲಾ ಮಹಾಧ್ವನಿಯಿಂದ ಅತ್ತರು. ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು. ಹಾಗೆಯೇ ಅವನ ಜನರೆಲ್ಲರೂ ದಾಟಿ ಮರುಭೂಮಿಯ ಮಾರ್ಗವಾಗಿ ನಡೆದುಹೋದರು.


ಯೇಸು ಪ್ರಾರ್ಥನೆಯನ್ನು ಮುಗಿಸಿದ ಮೇಲೆ ತಮ್ಮ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದರು. ಮತ್ತೊಂದು ಕಡೆ ಇರುವ ತೋಟದೊಳಗೆ ಯೇಸು ಮತ್ತು ಅವರ ಶಿಷ್ಯರು ಪ್ರವೇಶಿಸಿದರು.


ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಿಲ ಬಳಿಯಲ್ಲಿಯೂ, ತಗ್ಗಿನ ಬಾಗಿಲ ಬಳಿಯಲ್ಲಿಯೂ, ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು.


ನಾನು ಎಲ್ಲಿ ಹೋದೆನೆಂದೂ, ಏನು ಮಾಡಿದೆನೆಂದೂ ಅಧಿಕಾರಿಗಳು ತಿಳಿಯದೆ ಇದ್ದರು. ಅಲ್ಲಿಯವರೆಗೆ ನಾನು ಯೆಹೂದ್ಯರಿಗಾದರೂ, ಯಾಜಕರಿಗಾದರೂ, ಶ್ರೀಮಂತರಿಗಾದರೂ, ಅಧಿಕಾರಿಗಳಿಗಾದರೂ, ಕೆಲಸ ಮಾಡುವ ಇತರ ಜನರಿಗಾದರೂ ಗೊತ್ತಿರಲಿಲ್ಲ.


ತಗ್ಗಿನ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಹಾನೂನನೂ, ಜಾನೋಹ ಊರಿನವರೂ. ಇವರು ಅದರ ಗೋಡೆಯನ್ನು ಕಟ್ಟಿ, ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿ, ಅಲ್ಲಿಂದ ತಿಪ್ಪೆ ಬಾಗಿಲಿನವರೆಗೂ 450 ಮೀಟರ್ ಗೋಡೆಯನ್ನು ಕಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು