ನೆಹೆಮೀಯ 2:18 - ಕನ್ನಡ ಸಮಕಾಲಿಕ ಅನುವಾದ18 ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ, ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ. ಆಗ ಅವರು, “ಬನ್ನಿ, ಪುನಃ ಕಟ್ಟೋಣ,” ಎಂದು ಹೇಳಿ, ಆ ಒಳ್ಳೆಯ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇದಲ್ಲದೆ, ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ, ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು, “ಬನ್ನಿರಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಪರಸ್ಪರ ಧೈರ್ಯ ನೀಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ. ಆಗ ಅವರು, “ಬನ್ನಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇದಲ್ಲದೆ ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು - ಬನ್ನಿರಿ, ಕಟ್ಟೋಣ ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಾನು ಅವರಿಗೆ ದೇವರು ನನಗೆ ಕರುಣೆಯನ್ನು ತೋರಿಸಿದ್ದನ್ನು ಮತ್ತು ರಾಜನು ಹೇಳಿದ ವಿಷಯಗಳನ್ನು ತಿಳಿಸಿದೆನು. ಆಗ ಅವರು, “ನಾವು ಈಗಲೇ ಕೆಲಸ ಪ್ರಾರಂಭಿಸೋಣ” ಎಂದು ಹೇಳಿದರು. ಹೀಗೆ ನಾವು ಈ ಒಳ್ಳೆಯ ಕಾರ್ಯವನ್ನು ಪ್ರಾರಂಭಿಸಿದೆವು. ಅಧ್ಯಾಯವನ್ನು ನೋಡಿ |
ರಾಜವನಪಾಲಕನಾದ ಆಸಾಫನು, ದೇವಾಲಯದ ಕೋಟೆಯ ಬಾಗಿಲುಗಳನ್ನೂ, ಪಟ್ಟಣದ ಪೌಳಿಗೋಡೆಯನ್ನೂ, ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನೂ ಕೊಡಬೇಕಾಗುತ್ತದೆ. ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆನು. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ, ರಾಜನು ಅವುಗಳನ್ನು ನನಗೆ ಕೊಟ್ಟನು.