ನೆಹೆಮೀಯ 2:19 - ಕನ್ನಡ ಸಮಕಾಲಿಕ ಅನುವಾದ19 ಆದರೆ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ಯ ದಾಸನಾದ ಟೋಬೀಯನೂ, ಅರಬಿಯನಾದ ಗೆಷೆಮನೂ ಇದನ್ನು ಕೇಳಿದಾಗ, ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ, “ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರುಗಿಬೀಳುವಿರೋ?” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ, ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ, “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರುದ್ಧವಾಗಿ ತಿರುಗಿ ಬೀಳಬೇಕೆಂದಿದ್ದೀರೋ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಯೂ ಅರೇಬಿಯನಾದ ಗೆಷೆಮನೂ ಈ ಸಮಾಚಾರವನ್ನೂ ಕೇಳಿದಾಗ ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿದರು. “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರೋಧವಾಗಿ ದಂಗೆ ಏಳಬೇಕೆಂದಿದ್ದೀರೋ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ - ನೀವು ಇಲ್ಲಿ ಮಾಡುವದೇನು? ಅರಸನಿಗೆ ವಿರೋಧವಾಗಿ ತಿರುಗಿಬೀಳಬೇಕೆಂದಿರುತ್ತೀರೋ ಎಂದು ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ಹೋರೋಬಿನ ಸನ್ಬಲ್ಲಟನು, ಅಮ್ಮೋನಿಯ ಅಧಿಕಾರಿಯಾದ ಟೋಬೀಯ ಮತ್ತು ಅರಬಿಯವನಾದ ಗೆಷೆಮ್ ಇವರುಗಳು ನಾವು ಪೌಳಿ ಗೋಡೆಯನ್ನು ಕಟ್ಟುತ್ತೇವೆಂಬ ಸುದ್ಧಿಯನ್ನು ಕೇಳಿ ಅಸಹ್ಯವಾಗಿ ಗೇಲಿಮಾಡಿ, “ನೀವು ಮಾಡುತ್ತಿರುವುದೇನು? ರಾಜನಿಗೆ ವಿರುದ್ಧವಾಗಿ ದಂಗೆ ಏಳುತ್ತಿರುವಿರೋ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿ |