Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:2 - ಕನ್ನಡ ಸಮಕಾಲಿಕ ಅನುವಾದ

2 ಆದಕಾರಣ ಅರಸನು ನನಗೆ, “ನಿನಗೆ ಕಾಯಿಲೆ ಇಲ್ಲದೆ ಇರುವಾಗ, ನಿನ್ನ ಮುಖವು ದುಃಖದಿಂದಿರುವುದೇನು? ನಿನಗೆ ರೋಗ ಏನೂ ಇಲ್ಲವಲ್ಲ? ಇದು ಮನೋವೇದನೆಯೇ ಹೊರತು ಬೇರೇನೂ ಅಲ್ಲ,” ಎಂದನು. ಆಗ ನಾನು ಬಹು ಭಯಪಟ್ಟು ಅರಸನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅರಸನು ನನಗೆ, “ನಿನ್ನ ಮುಖ ಕಳೆಗುಂದಿರುವುದೇಕೆ? ನೀನು ಅಸ್ವಸ್ಥನಂತೆ ಕಾಣುವುದಿಲ್ಲ; ಇದು ಮನೋವೇದನೆಯಿಂದಾಗಿದೆಯೇ ಹೊರತು ಬೇರೇನೂ ಕಾರಣ ಇರಲಾರದು” ಎಂದು ಹೇಳಲು ನನಗೆ ಮಹಾ ಭೀತಿಯುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ರಾಜ ನನಗೆ, “ನೀನು ಕಳೆಗುಂದಿದವನಾಗಿರುವೆ, ಏಕೆ? ನಿನ್ನ ದೇಹಾರೋಗ್ಯ ಚೆನ್ನಾಗಿದೆಯಲ್ಲವೆ? ಇದಕ್ಕೆ ಮನೋವೇದನೆಯೇ ಹೊರತು ಬೇರೇನೂ ಕಾರಣ ಇರಲಾರದು,” ಎಂದು ಹೇಳಿದ. ನನಗೆ ಮಹಾಭೀತಿಯುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅರಸನು ನನಗೆ - ನೀನು ಕಳೆಗುಂದಿದವನಾಗಿ ಕಾಣುವದೇಕೆ? ನಿನಗೆ ದೇಹಾಲಸ್ಯವಿಲ್ಲವಲ್ಲಾ; ಇದಕ್ಕೆ ಮನೋವೇದನೆಯೇ ಹೊರತು ಬೇರೇನೂ ಕಾರಣವಲ್ಲ ಎಂದು ಹೇಳಲು ನನಗೆ ಮಹಾಭೀತಿಯುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನೀನು ಕ್ಷೇಮವೋ?” ಎಂದು ಅರಸನು ವಿಚಾರಿಸಿದನು, “ನೀನು ದುಃಖಿತನಾಗಿರುವುದೇಕೆ? ನಿನ್ನ ಹೃದಯವು ವೇದನೆಯಿಂದ ತುಂಬಿರುವ ಹಾಗಿದೆಯಲ್ಲ?” ಅರಸನ ಈ ಪ್ರಶ್ನೆಗೆ ನಾನು ಭಯಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:2
3 ತಿಳಿವುಗಳ ಹೋಲಿಕೆ  

ಸಂತೋಷದ ಹೃದಯವು ಹರ್ಷವುಳ್ಳ ಮುಖಭಾವ ತೋರುವುದು. ಆದರೆ ನೊಂದ ಹೃದಯವು ಆತ್ಮಚೈತನ್ಯವನ್ನು ಕುಂದಿಸುತ್ತದೆ.


ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು, “ನಿಮ್ಮ ಮುಖಗಳು ಇಂದು ಚಿಂತೆಗೊಂಡಿರುವುದು ಏಕೆ?” ಎಂದು ಕೇಳಿದನು.


ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ; ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು