Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:20 - ಕನ್ನಡ ಸಮಕಾಲಿಕ ಅನುವಾದ

20 ಆಗ ನಾನು ಅವರಿಗೆ, “ಪರಲೋಕದ ದೇವರು ನಮಗೆ ಸಫಲತೆ ಅನುಗ್ರಹಿಸುವರು. ಅವರ ಸೇವಕರಾದ ನಾವು ಪುನಃ ಕಟ್ಟುವ ಕಾರ್ಯ ಪ್ರಾರಂಭಿಸುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಯಾವುದೇ ಪಾಲಾದರೂ ಹಕ್ಕಾದರೂ ಐತಿಹಾಸಿಕ ಬಾಧ್ಯತೆಯಾದರೂ ಇರುವುದಿಲ್ಲ,” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಅವರಿಗೆ, “ಪರಲೋಕದ ದೇವರು ನಮಗೆ ಕಾರ್ಯವನ್ನು ಸಾಧಿಸಿಕೊಡುವನು. ಆದುದರಿಂದ ಆತನ ಸೇವಕರಾದ ನಾವು ಕಟ್ಟುವುದಕ್ಕೆ ಮನಸ್ಸುಮಾಡಿದ್ದೇವೆ. ನಿಮಗಾದರೋ ಯೆರೂಸಲೇಮಿನಲ್ಲಿ ಯಾವ ಪಾಲೂ, ಹಕ್ಕೂ, ಹೆಸರೂ, ಸ್ಮಾರಕವೂ ಇರುವುದಿಲ್ಲ” ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ಅವರಿಗೆ, “ಪರಲೋಕದೇವರು ನಮಗೆ ಸಫಲತೆಯನ್ನು ಅನುಗ್ರಹಿಸುವರು. ಆದುದರಿಂದ ಅವರ ದಾಸರಾದ ನಾವು ಕೋಟೆಯ ಗೋಡೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದೇವೆ. ನಿಮಗಾದರೋ ಜೆರುಸಲೇಮಿನಲ್ಲಿ ಪಾಲಾಗಲಿ, ಹಕ್ಕಾಗಲಿ, ಸ್ಮಾರಕವಾಗಲಿ ಇರುವುದಿಲ್ಲ,” ಎಂದು ಉತ್ತರಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ಅವರಿಗೆ - ಪರಲೋಕದೇವರು ನಮಗೆ ಸಾಫಲ್ಯವನ್ನನುಗ್ರಹಿಸುವನು. ಆದದರಿಂದ ಆತನ ಸೇವಕರಾದ ನಾವು ಕಟ್ಟುವದಕ್ಕೆ ಮನಸ್ಸು ಮಾಡಿದ್ದೇವೆ. ನಿಮಗಾದರೋ ಯೆರೂಸಲೇವಿುನಲ್ಲಿ ಪಾಲೂ ಹಕ್ಕೂ ಹೆಸರೂ ಇರುವದಿಲ್ಲ ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಅವರಿಗೆ, “ಪರಲೋಕದ ದೇವರು ನಮ್ಮ ಕಾರ್ಯವನ್ನು ಸಫಲಪಡಿಸುವನು. ನಾವು ಆತನ ಸೇವಕರು ಮತ್ತು ನಾವು ಈ ಪಟ್ಟಣವನ್ನು ತಿರಿಗಿ ಕಟ್ಟುತ್ತೇವೆ. ನೀವು ನಮ್ಮ ಸಹಾಯಕ್ಕಾಗಿ ಬರುವುದು ಬೇಡ. ನಿಮ್ಮಲ್ಲಿ ಯಾರ ಕುಟುಂಬಗಳವರೂ ಈ ಜೆರುಸಲೇಮಿನಲ್ಲಿ ವಾಸಿಸಲಿಲ್ಲ ಮತ್ತು ಈ ಪ್ರಾಂತ್ಯದಲ್ಲಿ ನಿಮಗೆ ಸ್ವಂತ ಭೂಮಿಯೂ ಇಲ್ಲ. ಆದ್ದರಿಂದ ನಿಮಗೆ ಈ ಪ್ರಾಂತ್ಯದಲ್ಲಿ ಯಾವ ಹಕ್ಕೂ ಇಲ್ಲ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:20
21 ತಿಳಿವುಗಳ ಹೋಲಿಕೆ  

ನಿನ್ನ ಹೃದಯವು ದೇವರ ದೃಷ್ಟಿಯಲ್ಲಿ ಸರಿಯಾಗಿಲ್ಲವಾದ್ದರಿಂದ ಈ ಸೇವೆಯಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ.


ಆದರೆ ಜೆರುಬ್ಬಾಬೆಲನೂ, ಯೇಷೂವನೂ, ಮಿಕ್ಕಾದ ಇಸ್ರಾಯೇಲಿನ ಕುಟುಂಬಗಳ ಮುಖ್ಯಸ್ಥರೂ ಅವರಿಗೆ, “ನಮ್ಮ ದೇವರಿಗೆ ಆಲಯವನ್ನು ಕಟ್ಟುವುದರಲ್ಲಿ ನಿಮಗೆ ಭಾಗವಿಲ್ಲ. ಪಾರಸಿಯ ಅರಸನಾದ ಕೋರೆಷನು ನಮಗೆ ಆಜ್ಞಾಪಿಸಿದ ಹಾಗೆ, ನಾವು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರಿಗೆ ಅದನ್ನು ಕಟ್ಟುವೆವು,” ಎಂದರು.


ಅದಕ್ಕೆ ಅರಸನು ನನಗೆ, “ನಿನಗೆ ಬೇಕಾಗಿರುವುದೇನು?” ಎಂದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ


ಅವನು ನನಗೆ, ‘ಕೊರ್ನೇಲ್ಯನೇ, ದೇವರು ನಿನ್ನ ಪ್ರಾರ್ಥನೆ ಕೇಳಿದ್ದಾರೆ. ಬಡವರಿಗೆ ಕೊಟ್ಟ ನಿನ್ನ ದಾನಗಳನ್ನು ಜ್ಞಾಪಿಸಿಕೊಂಡಿದ್ದಾರೆ.


ನನ್ನ ನೀತಿಯಲ್ಲಿ ಸಂತೋಷಪಡುವವರು ಉತ್ಸಾಹಧ್ವನಿ ಮಾಡಿ, ಆನಂದಪಡಲಿ; “ಹೌದು, ತಮ್ಮ ಸೇವಕನ ಅಭಿವೃದ್ಧಿಯಲ್ಲಿ ಸಂತೋಷಪಡುವ ಯೆಹೋವ ದೇವರು ಮಹಿಮೆಪಡಲಿ,” ಎಂದು ಅವರು ಯಾವಾಗಲೂ ಹೇಳಲಿ.


ನನ್ನ ಆಲಯದಲ್ಲಿಯೂ ಗೋಡೆಗಳ ಬಳಿಗೂ ಪುತ್ರ ಪುತ್ರಿಯರಿಗಿಂತ ಉತ್ತಮವಾದ ಸ್ಥಳವನ್ನೂ, ಹೆಸರನ್ನೂ ನಾನು ಕೊಡುತ್ತೇನೆ. ನಾನು ಅವರಿಗೆ ಎಂದಿಗೂ ಅಳಿಯದ ಶಾಶ್ವತವಾದ ಹೆಸರನ್ನು ಕೊಡುವೆನು.


ನೀನು ಇವುಗಳನ್ನು ಗ್ರಹಿಸಿಕೊಳ್ಳುವುದು ಒಳ್ಳೆಯದು. ಹೌದು, ಇವುಗಳನ್ನು ಮರೆಯಬೇಡ. ಏಕೆಂದರೆ ದೇವರಿಗೆ ಭಯಪಡುವವನು ಇವೆಲ್ಲವುಗಳಿಂದ ಪಾರಾಗುವನು.


ನಿಮ್ಮ ಮೆಚ್ಚುಗೆಯಿಂದ ಚೀಯೋನಿಗೆ ಸಮೃದ್ಧಿಯನ್ನು ನೀಡಿರಿ, ಯೆರೂಸಲೇಮಿನ ಗೋಡೆಗಳನ್ನು ಕಟ್ಟಿರಿ.


ನಾವು ದೇವರ ಜಯದಲ್ಲಿ ಆನಂದ ಘೋಷಮಾಡಿ, ನಮ್ಮ ದೇವರ ಹೆಸರಿನಲ್ಲಿಯೇ ನಾವು ನಮ್ಮ ಧ್ವಜಗಳನ್ನು ಎತ್ತುವೆವು. ಯೆಹೋವ ದೇವರು ನಿಮ್ಮ ಬಿನ್ನಹಗಳನ್ನೆಲ್ಲಾ ಪೂರೈಸಲಿ.


ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.


ಆ ಕಿರೀಟಗಳು ಹೇಲೆಮ್, ತೋಬೀಯ, ಯೆದಾಯ ಮತ್ತು ಜೆಫನ್ಯನ ಮಗ ಹೇನ್ ಇವರ ಜ್ಞಾಪಕಾರ್ಥವಾಗಿ ಯೆಹೋವ ದೇವರ ಆಲಯದಲ್ಲಿ ಇರುವುವು.


ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥನೆಮಾಡಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಅಭಿವೃದ್ಧಿಯಾಗಲಿ.


“ಅರಸನು ಹೇಳಿಕಳುಹಿಸದೆ ಅರಸನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವ ಗಂಡಸರಿಗಾಗಲಿ, ಹೆಂಗಸರಿಗಾಗಲಿ ಮರಣದಂಡನೆಯಾಗುವುದು. ಒಂದು ವೇಳೆ ಒಳಗೆ ಬಂದ ವ್ಯಕ್ತಿಯ ಕಡೆಗೆ ಅರಸನು ತನ್ನ ಸ್ವರ್ಣದಂಡವನ್ನು ಚಾಚಿದರೆ ಅವನಿಗೆ ಮಾತ್ರ ಮರಣದಂಡನೆಯಾಗದೆ ಜೀವದಿಂದ ಉಳಿಯುವರು. ಈ ರಾಜಾಜ್ಞೆಯನ್ನು ಅರಸನ ಸಮಸ್ತ ಸೇವಕರೂ ಅರಸನ ಪ್ರಾಂತಗಳ ಜನರೂ ತಿಳಿದಿದ್ದಾರೆ. ಆದರೆ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ನನಗೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.


ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾದ ಜೆಕರ್ಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಯೆಹೋವ ದೇವರನ್ನು ಹುಡುಕುವ ದಿವಸಗಳ ಮಟ್ಟಿಗೂ, ದೇವರು ಅವನನ್ನು ಅಭಿವೃದ್ಧಿ ಪಡಿಸಿದರು.


ನಿಮ್ಮ ಸಂತೋಷದ ದಿವಸದಲ್ಲಿಯೂ, ನಿಮ್ಮ ಹಬ್ಬಗಳಲ್ಲಿಯೂ ನಿಮ್ಮ ತಿಂಗಳಿನ ಆರಂಭದಲ್ಲಿಯೂ ತುತೂರಿಗಳನ್ನು ಊದಬೇಕು. ನಿಮ್ಮ ದಹನಬಲಿಗಳನ್ನೂ ಸಮಾಧಾನದ ಬಲಿಯನ್ನೂ ಅರ್ಪಿಸುವಾಗ ಅವುಗಳನ್ನು ಊದಬೇಕು. ಅವುಗಳ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.”


“ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲರ ಹೆಸರುಗಳನ್ನು ಯಾವಾಗಲೂ ಯೆಹೋವ ದೇವರ ಮುಂದೆ ಜ್ಞಾಪಕ ಮಾಡುವುದಕ್ಕಾಗಿ ನ್ಯಾಯದ ಎದೆಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.


ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾಗಿ ಇರುವಂತೆಯೂ, ಬೆಂಕಿಯ ಮೂಲಕ ಯೆಹೋವ ದೇವರಿಗೆ ಸಮರ್ಪಣೆಯಾಗುವಂತೆಯೂ, ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.


ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಅವನು ಹಿಟ್ಟಿನಲ್ಲಿಯೂ, ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜಕನು ಅದನ್ನು ಜ್ಞಾಪಕಾರ್ಥವಾಗಿ ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.


ನಾನು ಈ ಸಮಾಚಾರವನ್ನು ಕೇಳಿದಾಗ, ನೆಲದ ಮೇಲೆ ಕೂತುಕೊಂಡು ಅತ್ತೆನು. ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ.


ಅವರು ದಿಕ್ಕಿಲ್ಲದವರ ಪ್ರಾರ್ಥನೆಗೆ ಕಿವಿಗೊಡುತ್ತಾರೆ; ದೇವರು ಅವರ ಪ್ರಾರ್ಥನೆಯನ್ನು ತಿರಸ್ಕರಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು