ನೆಹೆಮೀಯ 2:3 - ಕನ್ನಡ ಸಮಕಾಲಿಕ ಅನುವಾದ3 “ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿರುವಾಗ ನನ್ನ ಮುಖವು ದುಃಖವಿಲ್ಲದೆ ಇರಲು ಸಾಧ್ಯವೇ?” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನು ಅರಸನಿಗೆ, “ಅರಸನು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವುದು ಹೇಗೆ?” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಾನು ರಾಜನಿಗೆ, “ರಾಜಾಧಿರಾಜರು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಹೀಗಿರುವಲ್ಲಿ, ನನ್ನ ಮುಖ ಕಳೆಗುಂದದೆ ಇರಲು ಸಾಧ್ಯವೆ?,” ಎಂದು ಹೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾನು ಅರಸನಿಗೆ - ಅರಸನು ಚಿರಂಜೀವಿಯಾಗಿರಲಿ. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಲುಗಳು ಬೆಂಕಿಯಿಂದ ಸುಟ್ಟು ಹೋಗಿವೆ; ಹೀಗಿರುವಲ್ಲಿ ನನ್ನ ಮುಖವು ಕಳೆಗುಂದದೆ ಇರುವದು ಹೇಗೆ ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ಭಯದಿಂದಲೇ, “ಅರಸನೇ ಚಿರಂಜೀವಿಯಾಗಿರು. ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳುದಿಬ್ಬವಾಗಿರುವುದರಿಂದ ನಾನು ದುಃಖಿತನಾಗಿದ್ದೇನೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ” ಅಂದೆನು. ಅಧ್ಯಾಯವನ್ನು ನೋಡಿ |