Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:26 - ಕನ್ನಡ ಸಮಕಾಲಿಕ ಅನುವಾದ

26 ಆ ಮೂಲೆ ಬುರುಜಿನ ಮತ್ತು ನೀರು ಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಾಲಯದ ಸೇವಕರ ನಿವಾಸ ಸ್ಥಾನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಈಗ ಮೂಲೆ ಗೋಪುರ ಮತ್ತು ನೀರು ಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಾಲಯದ ಸೇವಕರ ವಾಸಸ್ಥಾನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆ ಮೂಲೆಬುರುಜಿನ ಮತ್ತು ನೀರುಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಸ್ಥಾನ ಪರಿಚಾರಕರ ನಿವಾಸಸ್ಥಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆ ಮೂಲೆ ಬುರುಜಿನ ಮತ್ತು ನೀರುಬಾಗಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಸ್ಥಾನದಾಸರ ನಿವಾಸಸ್ಥಾನವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಓಫೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದ ಆಲಯದ ಸೇವಕರು ಮುಂದಿನ ಭಾಗವನ್ನು “ನೀರು” ಎಂಬ ಬಾಗಿಲಿನ ಪೂರ್ವದ ಕಡೆಯವರೆಗೂ ಅದರ ಬಳಿಯಿದ್ದ ಬುರುಜಿನವರೆಗೂ ರಿಪೇರಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:26
13 ತಿಳಿವುಗಳ ಹೋಲಿಕೆ  

ಆದರೆ ದೇವಾಲಯದ ಸೇವಕರು ಓಫೇಲ್ ಗುಡ್ಡದಲ್ಲಿ ವಾಸವಾಗಿದ್ದರು. ಜೀಹನೂ, ಗಿಷ್ಪನೂ ಅವರ ನಾಯಕರು.


ಜನರೆಲ್ಲರು ಏಕವಾಗಿ ನೀರು ಬಾಗಿಲಿಗೆ ಎದುರಾಗಿರುವ ಬೀದಿಯಲ್ಲಿ ಕೂಡಿಕೊಂಡು ಬಂದರು. ಯೆಹೋವ ದೇವರು ಇಸ್ರಾಯೇಲರಿಗೆ ಆಜ್ಞಾಪಿಸಿದ ಮೋಶೆಯ ನಿಯಮದ ಗ್ರಂಥವನ್ನು ತೆಗೆದುಕೊಂಡು ಬರಲು ಜನರು ನಿಯಮಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.


ತಮಗೆ ಎದುರಾದ ಬುಗ್ಗೆಯ ಬಾಗಿಲಿಗೆ ಬಂದಾಗ ಗೋಡೆಯಲ್ಲಿ ಎತ್ತರವಾದ ದಾವೀದನ ಪಟ್ಟಣದ ಮೆಟ್ಟಿಲುಗಳಿಂದ ದಾವೀದನ ಅರಮನೆಯ ಮೇಲೆ ಪೂರ್ವದ ಕಡೆಗಿರುವ ನೀರಿನ ಬಾಗಿಲಿಗೆ ಹೋದರು.


ಅನಂತರ ಎಜ್ರನು ನೀರಿನ ಬಾಗಿಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದವರೆಗೆ ಓದಿದನು. ಜನರೆಲ್ಲರು ನಿಯಮದ ಗ್ರಂಥಕ್ಕೆ ಕಿವಿಗೊಟ್ಟರು.


ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ಮೀನು ಬಾಗಿಲ ದ್ವಾರದವರೆಗಿರುವ ತಗ್ಗಿನಲ್ಲಿ ಓಫೇಲ್ ಗುಡ್ಡದ ಸುತ್ತಲೂ ಗೋಡೆಯನ್ನು ಕಟ್ಟಿಸಿ, ಅದನ್ನು ಬಹಳ ಎತ್ತರಮಾಡಿ, ಯೆಹೂದದ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.


ಅವನು ಯೆಹೋವ ದೇವರ ಆಲಯದ ಮೇಲಿನ ಬಾಗಿಲನ್ನು ಕಟ್ಟಿಸಿ, ಓಫೇಲ್ ಗೋಡೆಯನ್ನು ಎತ್ತರವಾಗಿ ಕಟ್ಟಿಸಿದನು.


ಜನರಲ್ಲಿ ಉಳಿದವರಾದ ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ದೇವಾಲಯದ ಸೇವಕರೂ, ದೇವರ ನಿಯಮದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರೆಲ್ಲರೂ, ಅವರ ಹೆಂಡತಿಯರೂ, ಅವರ ಪುತ್ರರೂ, ಅವರ ಪುತ್ರಿಯರೂ, ತಿಳುವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ,


ಹಾಗೆಯೇ ಜನರು ಹೊರಟುಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು ಅವರವರು ತಮ್ಮ ಮನೆಗಳ ಮೇಲೆಯೂ, ತಮ್ಮ ಅಂಗಳಗಳಲ್ಲಿಯೂ, ದೇವರ ಮನೆಯ ಅಂಗಳಗಳಲ್ಲಿಯೂ, ನೀರು ಬಾಗಿಲ ಬೀದಿಗಳಲ್ಲಿಯೂ, ಎಫ್ರಾಯೀಮನ ಬಾಗಿಲ ಬೀದಿಗಳಲ್ಲಿಯೂ ತಮಗೆ ಪರ್ಣಶಾಲೆಗಳನ್ನು ಹಾಕಿದರು.


ಆ ದೊಡ್ಡ ಮೂಲೆ ಬುರುಜಿನ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರ ಮಾಡಿದರು.


ತಮ್ಮ ಸ್ವಾಸ್ತ್ಯಗಳಲ್ಲಿ, ತಮ್ಮ ಪಟ್ಟಣಗಳಲ್ಲಿ ಮೊದಲು ವಾಸವಾಗಿದ್ದವರಲ್ಲಿ ಕೆಲವರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ ಮತ್ತು ದೇವಾಲಯದ ಸೇವಕರೂ ಆಗಿದ್ದರು.


ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು