Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:32 - ಕನ್ನಡ ಸಮಕಾಲಿಕ ಅನುವಾದ

32 ಈ ಮೂಲೆಯುಪ್ಪರಿಗೆಗೂ, ಕುರಿ ಬಾಗಿಲಿಗೂ ಮಧ್ಯದಲ್ಲಿದ್ದ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಅಕ್ಕಸಾಲಿಗರು, ವರ್ತಕರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಈ ಮೂಲೆಯುಪ್ಪರಿಗೆಗೂ ಕುರಿಬಾಗಿಲಿಗೂ ಮಧ್ಯದಲ್ಲಿದ್ದ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಅಕ್ಕಸಾಲಿಗರು ಮತ್ತು ವರ್ತಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಈ ಮೂಲೆಯುಪ್ಪರಿಗೆಗೂ ಕುರಿಬಾಗಿಲಿಗೂ ನಡುವೆಯಿದ್ದ ಗೋಡೆಯನ್ನು ಸರಿಮಾಡಿದವರು ಅಕ್ಕಸಾಲಿಗರು ಹಾಗು ವರ್ತಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಈ ಮೂಲೆಯುಪ್ಪರಿಗೆಗೂ ಕುರಿಬಾಗಲಿಗೂ ಮಧ್ಯದಲ್ಲಿದ್ದ ಗೋಡೆಯನ್ನು ಜೀರ್ಣೋದ್ಧಾರಮಾಡಿದವರು ಅಕ್ಕಸಾಲಿಗರು, ವರ್ತಕರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅಕ್ಕಸಾಲಿಗರು ಮತ್ತು ವರ್ತಕರು ಸೇರಿ ಗೋಡೆ ಮೇಲಿರುವ ಕೋಣಿಯಿಂದ ಹಿಡಿದು, “ಕುರಿ” ಎಂಬ ಬಾಗಿಲಿನ ತನಕದ ಗೋಡೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:32
5 ತಿಳಿವುಗಳ ಹೋಲಿಕೆ  

ಆಗ ಮಹಾಯಾಜಕನಾದ ಎಲ್ಯಾಷೀಬನೂ, ಅವನ ಕುಟುಂಬದ ಯಾಜಕರೂ ಕುರಿ ಬಾಗಿಲನ್ನು ಕಟ್ಟಿ, ಅದನ್ನು ಪ್ರತಿಷ್ಠಿಸಿ, ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಶತ ಗೋಪುರದವರೆಗೆ ಗೋಡೆ ಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು.


ಯೆರೂಸಲೇಮಿನಲ್ಲಿ “ಕುರಿಬಾಗಿಲು” ಎಂಬ ಸ್ಥಳದ ಬಳಿ ಒಂದು ಕೊಳವಿದೆ. ಇದನ್ನು ಹೀಬ್ರೂ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ. ಅದಕ್ಕೆ ಐದು ಮಂಟಪಗಳಿದ್ದವು.


ಎಫ್ರಾಯೀಮ್ ಬಾಗಿಲ ಮೇಲೆಯೂ, ಯೆಷಾನಾ ಬಾಗಿಲ ಮೇಲೆಯೂ, ಮೀನು ಬಾಗಿಲ ಮೇಲೆಯೂ ಹಾದು, ಹನನೇಲ್ ಗೋಪುರವನ್ನೂ, ಶತ ಗೋಪುರವನ್ನೂ ದಾಟಿ, ಕುರಿ ಬಾಗಿಲವರೆಗೆ ಬಂದು ಸೆರೆಮನೆಯ ಬಾಗಿಲ ಬಳಿಯಲ್ಲಿ ನಿಂತರು.


ಇನ್ನೂ ಮುಂದಕ್ಕೆ ಅಕ್ಕಸಾಲಿಗರ ಮಲ್ಕೀಯ, ಇವನು ದಂಡು ಕೊಡುವ ಬಾಗಿಲಿನೆದುರಿನಲ್ಲಿರುವ ದೇವಾಲಯದ ಸೇವಕರ ಮತ್ತು ವರ್ತಕರ ಕೇರಿಯವರೆಗೂ ಮೂಲೆಯುಪ್ಪರಿಗೆಯವರೆಗೂ ಜೀರ್ಣೋದ್ಧಾರ ಮಾಡಿದನು.


ಇದರ ಆಚೆಗೆ ಹರ್ಹಯನ ಮಗನಾದ ಅಕ್ಕಸಾಲಿಗರ ಉಜ್ಜೀಯೇಲ್, ಆಮೇಲೆ ಗಾಣಿಗನಾದ ಹನನ್ಯ, ಇವರು ಅಗಲವಾದ ಗೋಡೆಯವರೆಗೂ ಯೆರೂಸಲೇಮನ್ನು ಕಟ್ಟಿ ಭದ್ರಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು