Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಯೆಹೂದದವರು, “ಹೊರೆ ಹೊರುವವರ ಬಲವು ಕುಂದಿಹೋಯಿತು; ಕಲ್ಲುಮಣ್ಣಿನ ರಾಶಿ ಬಹಳವಾಗಿದೆ; ಈ ಗೋಡೆಯನ್ನು ಪುನಃ ಕಟ್ಟುವುದು ನಮ್ಮಿಂದಾಗದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇತ್ತ ಯೆಹೂದ್ಯರು, “ಹೊರೆ ಹೊರುವವರ ಬಲವು ಕುಂದಿಹೋಯಿತು, ಧೂಳಿನ ರಾಶಿಯು ವಿಪರೀತವಾಗಿದೆ; ಈ ಗೋಡೆಯನ್ನು ಕಟ್ಟುವುದು ನಮ್ಮಿಂದ ಆಗುವುದಿಲ್ಲ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇತ್ತ ಯೆಹೂದ್ಯರೇ, “ಹೊರೆಹೊರುವವರ ಬಲ ಕುಂದಿಹೋಯಿತು. ಧೂಳಿನ ರಾಶಿ ವಿಪರೀತ ಆಗಿದೆ; ಈ ಗೋಡೆಯನ್ನು ಕಟ್ಟುವುದು ನಮ್ಮಿಂದಾಗದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇತ್ತ ಯೆಹೂದ್ಯರು - ಹೊರೆಹೊರುವವರ ಬಲವು ಕುಂದಿ ಹೋಯಿತು, ಧೂಳಿನರಾಶಿಯು ವಿಪರೀತವಾಗಿದೆ; ಈ ಗೋಡೆಯನ್ನು ಕಟ್ಟುವದು ನಮ್ಮಿಂದಾಗದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಸಮಯದಲ್ಲಿ ಯೆಹೂದದ ಜನರು, “ಕೆಲಸಗಾರರು ಆಯಾಸಗೊಳ್ಳುತ್ತಿದ್ದಾರೆ; ದಾರಿಯಲ್ಲೆಲ್ಲಾ ತುಂಬಾ ಧೂಳು ಮತ್ತು ಕಸ ಇರುವುದರಿಂದ ನಾವು ಗೋಡೆಕಟ್ಟಡ ಕೆಲಸವನ್ನು ಮುಂದುವರಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:10
10 ತಿಳಿವುಗಳ ಹೋಲಿಕೆ  

“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಯೆಹೋವ ದೇವರ ಆಲಯವನ್ನು ಕಟ್ಟುವ ಕಾಲವು ಇನ್ನೂ ಬಂದಿಲ್ಲ,’ ಎಂದು ಈ ಜನರು ಅಂದುಕೊಳ್ಳುತ್ತಾರೆ.”


“ಮನುಷ್ಯಪುತ್ರನೇ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಟೈರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ಟೈರನಿಂದ ಪ್ರತಿಫಲವೇನೂ ದೊರೆಯಲಿಲ್ಲ.


ಆಗ ಅವರಲ್ಲಿ 70,000 ಮಂದಿಯನ್ನು ಹೊರೆ ಹೊರುವುದಕ್ಕೂ, 80,000 ಮಂದಿಯನ್ನು ಬೆಟ್ಟದಲ್ಲಿ ಕಲ್ಲು ಕಡಿಯುವುದಕ್ಕೂ, 3,600 ಮಂದಿಯನ್ನು ಕೆಲಸದವರ ಮೇಲೆ ಕಾವಲಾಗಿರುವುದಕ್ಕೂ ಇರಿಸಿದನು.


ಹೇಗೆಂದರೆ ಅವರು ಎಷ್ಕೋಲೆಂಬ ಹಳ್ಳದವರೆಗೆ ಬಂದು, ದೇಶವನ್ನು ನೋಡಿದಾಗ, ಇಸ್ರಾಯೇಲರ ಹೃದಯವನ್ನು ಯೆಹೋವ ದೇವರು ಅವರಿಗೆ ಕೊಟ್ಟ ದೇಶದ ಒಳಗೆ ಹೋಗದ ಹಾಗೆ ಅಧೈರ್ಯಪಡಿಸಿದನು.


ಆದರೆ ಅವನ ಸಂಗಡ ಹೋದ ಜನರು, “ಆ ಜನರ ಬಳಿಗೆ ಹೋಗುವುದಕ್ಕೆ ನಮ್ಮಿಂದಾಗುವುದಿಲ್ಲ, ಅವರು ನಮಗಿಂತ ಬಲಿಷ್ಠರಾಗಿದ್ದಾರೆ,” ಎಂದರು.


ಇದಲ್ಲದೆ ಕಾರ್ಮಿಕರ ಮೇಲೆಯೂ, ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ಮೇಲ್ವಿಚಾರಕರಾಗಿದ್ದರು. ಲೇವಿಯರಲ್ಲಿ ಕೆಲವರು ಕಾರ್ಯದರ್ಶಿಗಳೂ, ಬರಹಗಾರರೂ, ದ್ವಾರಪಾಲಕರೂ ಆಗಿದ್ದರು.


ತಮ್ಮ ಜೊತೆ ಕೆಲಸ ಮಾಡುವವರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ, “ಈ ಬಲಹೀನರಾದ ಯೆಹೂದ್ಯರು ಮಾಡುವುದೇನು? ಅವರು ತಮ್ಮ ಗೋಡೆಯನ್ನು ಪುನಃ ಕಟ್ಟುತ್ತಾರೆಯೇ? ಬಲಿಯನ್ನು ಅರ್ಪಿಸುವರೋ? ಪಟ್ಟಣವು ಬೆಂಕಿಯಲ್ಲಿ ಸುಟ್ಟುಹೋದಾಗ, ಕಲ್ಲಿನ ತುಂಡುಗಳ ರಾಶಿಯಿಂದ ಕಟ್ಟಡಕ್ಕೆ ಸೂಕ್ತವಾದ ಕಲ್ಲುಗಳನ್ನು ಹೊರತೆಗೆಯಲು ಅವರಿಗೆ ಸಾಧ್ಯವಾಗುತ್ತದೆಯೇ?” ಎಂದು ಹೇಳಿದನು.


ಆದರೆ ನಾವು ನಮ್ಮ ದೇವರಿಗೆ ಪ್ರಾರ್ಥನೆಮಾಡಿ, ಅವರಿಗೆ ಎದುರಾಗಿ ರಾತ್ರಿ ಹಗಲು ಕಾವಲು ಇಟ್ಟೆವು.


ನಮ್ಮ ವೈರಿಗಳು, “ಅವರು ತಿಳಿಯದ ಹಾಗೆಯೂ, ನೋಡದ ಹಾಗೆಯೂ ನಾವು ಅವರ ನಡುವೆ ಬಂದು, ಅವರನ್ನು ಕೊಂದುಹಾಕಿ, ಕೆಲಸವನ್ನು ನಿಲ್ಲಿಸಿಬಿಡೋಣ,” ಎಂದುಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು