Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:14 - ಕನ್ನಡ ಸಮಕಾಲಿಕ ಅನುವಾದ

14 ನಾನು ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು ಶ್ರೇಷ್ಠರಿಗೂ, ಅಧಿಕಾರಸ್ಥರಿಗೂ, ಇತರ ಜನರಿಗೂ ಸಂಬೋಧಿಸಿ, “ನೀವು ಅವರಿಗೋಸ್ಕರ ಭಯಪಡಬೇಡಿರಿ. ದೊಡ್ಡವನಾಗಿಯೂ, ಭಯಂಕರನಾಗಿಯೂ ಇರುವ ಯೆಹೋವ ದೇವರನ್ನು ಜ್ಞಾಪಕಮಾಡಿಕೊಂಡು, ನಿಮ್ಮ ಪುತ್ರರಿಗೋಸ್ಕರ, ಪುತ್ರಿಯರಿಗೋಸ್ಕರ, ನಿಮ್ಮ ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ನಾನು ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಉಳಿದ ಜನರನ್ನೂ ಉದ್ದೇಶಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ, ಭಯಂಕರನೂ ಆಗಿರುವ ಕರ್ತನನ್ನು ನೆನಪುಮಾಡಿಕೊಂಡು ನಿಮ್ಮ ಸಹೋದರರಿಗಾಗಿಯೂ, ಗಂಡು ಹೆಣ್ಣು ಮಕ್ಕಳಿಗಾಗಿಯೂ, ಹೆಂಡತಿಯರಿಗಾಗಿಯೂ, ನಿಮ್ಮ ಮನೆಗಳಿಗೋಸ್ಕರವೂ ಹೋರಾಡಿರಿ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು, ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿ; ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ಸರ್ವೇಶ್ವರಸ್ವಾಮಿಯನ್ನು ಸ್ಮರಿಸಿಕೊಂಡು, ನಿಮ್ಮ ಸಹೋದರರಿಗಾಗಿ, ಮಡದಿಮಕ್ಕಳಿಗಾಗಿ ಹಾಗು ನಿಮ್ಮ ಮನೆಮಠಗಳಿಗಾಗಿ ಕಾದಾಡಿರಿ,” ಎಂದು ಹುರಿದುಂಬಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ - ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ ಭಯಂಕರನೂ ಆಗಿರುವ ಕರ್ತನನ್ನು ನೆನಪು ಮಾಡಿಕೊಂಡು ನಿಮ್ಮ ಸಹೋದರರಿಗೋಸ್ಕರವೂ ಗಂಡು ಹೆಣ್ಣು ಮಕ್ಕಳಿಗೋಸ್ಕರವೂ ಹೆಂಡತಿಯರಿಗೋಸ್ಕರವೂ ನಿಮ್ಮ ಮನೆಗಳಿಗೋಸ್ಕರವೂ ಕಾದಾಡಿರಿ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಮಗೆದುರಾಗಿ ಬಂದಿದ್ದ ಪರಿಸ್ಥಿತಿಯನ್ನು ನಾನು ಚೆನ್ನಾಗಿ ಅವಲೋಕಿಸಿ ನಮ್ಮ ಜನರೊಂದಿಗೆ ಕುಟುಂಬ ಕುಟುಂಬವಾಗಿ, ಅಧಿಕಾರಿಗಳಿಗೆ ಮತ್ತು ಉಳಿದ ಜನರಿಗೆ ಹೀಗೆ ಹೇಳಿದೆನು: “ನಮ್ಮ ವೈರಿಗಳ ಬಗ್ಗೆ ನೀವು ಏನೂ ಹೆದರಬೇಡಿರಿ. ನಮ್ಮ ದೇವರನ್ನು ನೆನಪುಮಾಡಿರಿ. ಯೆಹೋವನು ಬಲಶಾಲಿಯೂ ಸರ್ವಶಕ್ತನೂ ಆಗಿದ್ದಾನೆ. ನೀವು ನಿಮ್ಮ ಸಹೋದರರಿಗಾಗಿ, ನಿಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ನಿಮ್ಮನಿಮ್ಮ ಹೆಂಡತಿಯರಿಗಾಗಿ ಮತ್ತು ಮನೆಗಳಿಗಾಗಿ ಹೋರಾಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:14
34 ತಿಳಿವುಗಳ ಹೋಲಿಕೆ  

ದೃಢವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಧೈರ್ಯವಾಗಿ ಹೋರಾಡೋಣ, ಯೆಹೋವ ದೇವರು ತಮ್ಮ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ,” ಎಂದನು.


ಆದ್ದರಿಂದ ನೀವಾದರೋ ಯೆಹೋವ ದೇವರಿಗೆ ತಿರುಗಿ ಬೀಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ನುಂಗಿಬಿಡುವೆವು. ಅವರ ಆಶ್ರಯವು ಅವರ ಬಳಿಯಿಂದ ಹೋಯಿತು. ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ, ಅವರಿಗೆ ಭಯಪಡಬೇಡಿರಿ,” ಎಂದರು.


ಆದ್ದರಿಂದ, “ಕರ್ತದೇವರು ನನ್ನ ಸಹಾಯಕರು, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು?” ಎಂದು ನಾವು ಧೈರ್ಯವಾಗಿ ಹೇಳುವೆವು.


ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.


ನೀವು ದೇವರಿಗೆ, “ನಿಮ್ಮ ಕೃತ್ಯಗಳು ಅತಿಶಯವಾದವುಗಳಾಗಿವೆ. ನಿಮ್ಮ ಶತ್ರುಗಳು ನಿಮ್ಮೆದುರಿನಲ್ಲಿ ಮುದುರಿ ಬೀಳುವಷ್ಟು ನಿಮ್ಮ ಶಕ್ತಿ ದೊಡ್ಡದಾಗಿದೆ.


ಅತಿಶಯ ಹಾಗು ನೀತಿಯ ಕೃತ್ಯಗಳನ್ನು ನಡೆಸಿ, ನೀವು ನಮಗೆ ಉತ್ತರ ಕೊಡುವಿರಿ. ನಮ್ಮ ರಕ್ಷಣೆಯ ದೇವರೇ, ಭೂಮಿಯಲ್ಲಿರುವವರಿಗೂ, ಸಮುದ್ರದ ಆಚೆ ದೂರವಾಗಿರುವವರಿಗೂ ನೀವು ಭರವಸೆಯಾಗಿದ್ದೀರಿ.


ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳಲ್ಲಿಯೂ ಭರವಸೆಯಿಡುತ್ತಾರೆ; ನಾವಾದರೋ ನಮ್ಮ ಯೆಹೋವ ದೇವರ ಹೆಸರಿನಲ್ಲಿ ಭರವಸೆಯನ್ನಿಡುತ್ತೇವೆ.


ನಾನು ನನ್ನ ಪ್ರಾರ್ಥನೆಯಲ್ಲಿ: “ಪರಲೋಕ ದೇವರಾದ ಯೆಹೋವ ದೇವರೇ, ನೀವು ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿದ್ದೀರಿ. ನಿಮ್ಮನ್ನು ಪ್ರೀತಿಸಿ ನಿಮ್ಮ ಆಜ್ಞೆಗಳಿಗೆ ವಿಧೇಯರಾಗಿರುವವರೊಂದಿಗೆ, ನಿಮ್ಮ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವವರೇ, ಭಯಭಕ್ತಿಗೆ ಪಾತ್ರರಾದ ದೇವರೇ,


“ಬಲಗೊಳ್ಳಿರಿ, ಧೈರ್ಯವಾಗಿರಿ, ಅಸ್ಸೀರಿಯದ ಅರಸನ ನಿಮಿತ್ತವೂ, ಅವನ ಸಂಗಡ ಕೂಡಿರುವ ಮಹಾ ಗುಂಪಿನ ನಿಮಿತ್ತವೂ ಭಯಪಡಬೇಡಿರಿ, ನಿರಾಶರಾಗಬೇಡಿರಿ. ಏಕೆಂದರೆ ಅವನ ಸಂಗಡ ಇರುವವರಿಗಿಂತ ಮಿಗಿಲಾದದ್ದು ನಮ್ಮ ಸಂಗಡ ಇದೆ.


ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದು ಹೇಳಿದರು.


ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ದೇವರುಗಳ ದೇವರು, ಕರ್ತರ ಕರ್ತರು, ದೇವಾಧಿದೇವರು, ಪರಾಕ್ರಮಿಯೂ, ಭಯಭಕ್ತಿಗೆ ಪಾತ್ರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವುದಿಲ್ಲ. ಲಂಚ ತೆಗೆದುಕೊಳ್ಳುವುದಿಲ್ಲ.


ನಿಮ್ಮ ದೇವರಾದ ಯೆಹೋವ ದೇವರು ದೇಶವನ್ನು ನಿಮಗೆ ಕೊಟ್ಟಿದ್ದಾರೆ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಪ್ರಕಾರ ಅದನ್ನು ಏರಿ ಸ್ವಾಧೀನಮಾಡಿಕೊಳ್ಳಿರಿ. ಭಯಪಡಬೇಡಿರಿ, ಧೈರ್ಯವಾಗಿರಿ,” ಎಂದೆನು.


ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು, ನಿಮ್ಮ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿಮ್ಮ ಕೈಕೆಲಸವನ್ನು ಆಲೋಚಿಸುತ್ತೇನೆ.


ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ. ಮಾನವರ ಪರವಾಗಿ ಮಾಡಿರುವ ದೇವರ ಕಾರ್ಯಗಳು ಅತಿಶಯವಾಗಿವೆ.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ. ನಾನು ಯಾರಿಗೂ ಭಯಪಡೆನು? ಯೆಹೋವ ದೇವರು ನನ್ನ ಜೀವದ ಭದ್ರಾಶ್ರಯವಾಗಿದ್ದಾರೆ. ನಾನು ಯಾರಿಗೂ ಹೆದರೆನು?


ಉತ್ತರದಿಂದ ಹೊನ್ನಿನ ಹೊಳಪು ಬರುತ್ತದೆ; ಅದರಂತೆಯೇ ದೇವರ ವಿಸ್ಮಯ ತೇಜಸ್ಸಿನಿಂದ ಬರುತ್ತಾರೆ.


ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ,” ಎಂದು ನೀನು ಹೇಳುವ ವರ್ಷಗಳು ಸಮೀಪಿಸುವುದಕ್ಕೆ ಮೊದಲು, ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ದೇವರನ್ನು ಸ್ಮರಿಸು.


ಯೆಹೋವ ದೇವರು ನಿಮಗೋಸ್ಕರ ಯುದ್ಧಮಾಡುವರು, ಆದರೆ ನೀವು ವಿಶ್ರಾಂತಿಯಿಂದಿರಿ,” ಎಂದನು.


ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟು ಕಷ್ಟದಿಂದ ಅವರು ಹೋಗುವಂತೆ ಮಾಡಿದರು. ಆಗ ಈಜಿಪ್ಟಿನವರು, “ಇಸ್ರಾಯೇಲರ ಎದುರಿನಿಂದ ಓಡಿಹೋಗೋಣ. ಏಕೆಂದರೆ ಯೆಹೋವ ದೇವರು ಈಜಿಪ್ಟಿನವರಿಗೆ ವಿರೋಧವಾಗಿ ಯುದ್ಧಮಾಡುತ್ತಾರೆ,” ಎಂದು ಹೇಳಿಕೊಂಡರು.


ಅವನು ಅಲ್ಲಿ ಬಂದಾಗ, ಎಫ್ರಾಯೀಮನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲರು ಅವನ ಸಂಗಡ ಬೆಟ್ಟದಿಂದ ಇಳಿದರು. ಅವನು ಇವರ ಮುಂದೆ ನಡೆದರು.


ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆಯುವವರನ್ನು ನಯವಾದ ಮಾತುಗಳಿಂದ ಕೆಡಿಸುವನು, ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಎದುರಿಸುವರು.


ಆಗ ಯೆಹೋವ ದೇವರು ಹೊರಟು, ಯುದ್ಧದ ದಿವಸದಲ್ಲಿ ಹೋರಾಟ ಮಾಡಿದ ಪ್ರಕಾರವೇ, ಆ ಜನಾಂಗಗಳ ಸಂಗಡ ಅವರು ಹೋರಾಟ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು