Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:2 - ಕನ್ನಡ ಸಮಕಾಲಿಕ ಅನುವಾದ

2 ತಮ್ಮ ಜೊತೆ ಕೆಲಸ ಮಾಡುವವರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ, “ಈ ಬಲಹೀನರಾದ ಯೆಹೂದ್ಯರು ಮಾಡುವುದೇನು? ಅವರು ತಮ್ಮ ಗೋಡೆಯನ್ನು ಪುನಃ ಕಟ್ಟುತ್ತಾರೆಯೇ? ಬಲಿಯನ್ನು ಅರ್ಪಿಸುವರೋ? ಪಟ್ಟಣವು ಬೆಂಕಿಯಲ್ಲಿ ಸುಟ್ಟುಹೋದಾಗ, ಕಲ್ಲಿನ ತುಂಡುಗಳ ರಾಶಿಯಿಂದ ಕಟ್ಟಡಕ್ಕೆ ಸೂಕ್ತವಾದ ಕಲ್ಲುಗಳನ್ನು ಹೊರತೆಗೆಯಲು ಅವರಿಗೆ ಸಾಧ್ಯವಾಗುತ್ತದೆಯೇ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತನ್ನ ಸಹೋದರರ ಮತ್ತು ಸಮಾರ್ಯದ ಸೈನ್ಯದವರ ಮುಂದೆಯೂ, “ಬಲಹೀನರಾದ ಈ ಯೆಹೂದ್ಯರು ಮಾಡುವುದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮುಗಿಸುವರೇನು? ಸುಟ್ಟುಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸಲೂ ಸಾಧ್ಯವೇ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನನ್ನ ಸಹೋದರರ ಮುಂದೆ ಹಾಗು ಸಮಾರಿಯದ ದಂಡಿನವರ ಮುಂದೆ ಅಶಕ್ತರಾದ ಈ ಯೆಹೂದ್ಯರು ಮಾಡುವುದಾದರೂ ಏನು? ಇವರು ತಮ್ಮನ್ನೇ ಬಲಪಡಿಸಿಕೊಳ್ಳಬೇಕೆಂದು ಇರುವರೋ? ಬಲಿಯರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮಾಡಿಮುಗಿಸುವರೋ? ಸುಟ್ಟುಹೋದ ಪಟ್ಟಣದ ಬೂದಿಯ ರಾಶಿಯೊಳಗೆ ಹುದುಗಿಹೋದ ಕಲ್ಲುಗಳನ್ನು ಬದುಕಿಸುವರೋ?’ ಎಂದು ಹೇಳಿ ಯೆಹೂದ್ಯರನ್ನು ಪರಿಹಾಸ್ಯ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತನ್ನ ಸಹೋದರರ ಮುಂದೆಯೂ ಸಮಾರ್ಯದ ದಂಡಿನವರ ಮುಂದೆಯೂ - ನಿತ್ರಾಣಿಗಳಾದ ಈ ಯೆಹೂದ್ಯರು ಮಾಡುವದೇನು? ಇವರು ತಮ್ಮನ್ನು ಬಲಪಡಿಸಿಕೊಳ್ಳಬೇಕೆಂದಿರುವರೋ? ಯಜ್ಞವನ್ನರ್ಪಿಸುವರೋ? ಈ ಹೊತ್ತೇ ಈ ಕೆಲಸವನ್ನು ತೀರಿಸುವರೇನು? ಸುಟ್ಟು ಹೋದ ಪಟ್ಟಣದ ಧೂಳಿನ ರಾಶಿಯೊಳಗೆ ಹುಗಿದುಹೋದ ಕಲ್ಲುಗಳನ್ನು ಬದುಕಿಸುವರೇನೋ ಎಂದು ಹೇಳಿ ಯೆಹೂದ್ಯರನ್ನು ಗೇಲಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸಮಾರ್ಯದಲ್ಲಿರುವ ಅವನ ಸ್ನೇಹಿತರೊಡನೆ ಮತ್ತು ಸಮಾರ್ಯದ ಸೈನ್ಯದವರೊಡನೆ ಮಾತನಾಡಿ, “ಈ ಬಲಹೀನ ಯೆಹೂದ್ಯರು ಮಾಡುತ್ತಿರುವುದೇನು? ನಾವು ಇವರನ್ನು ಹೀಗೇಯೇ ಬಿಟ್ಟುಬಿಡುತ್ತೇವೆಂದು ತಿಳಿದುಕೊಂಡಿದ್ದಾರೆಯೇ? ತಾವು ಯಜ್ಞಗಳನ್ನು ಅರ್ಪಿಸುವುದಾಗಿ ತಿಳಿದುಕೊಂಡಿರುವರೇ? ಒಂದೇ ದಿನದಲ್ಲಿ ಕಟ್ಟಿಮುಗಿಸುವುದಾಗಿ ಅವರು ತಿಳಿದುಕೊಂಡಿರಬಹುದು. ಆ ತಿಪ್ಪೆಗುಂಡಿಯೊಳಗಿನ ಕಲ್ಲುಗಳ ರಾಶಿಗೆ ಜೀವಕೊಡಲು ಅವರಿಗೆ ಸಾಧ್ಯವಿಲ್ಲ. ಅವು ಕೇವಲ ಬೂದಿ ಮತ್ತು ಹೊಲಸುಗಳ ಗುಡ್ಡೆಗಳಾಗಿವೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:2
17 ತಿಳಿವುಗಳ ಹೋಲಿಕೆ  

ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವಂತೆ, ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾರೆ. ದೇವರು ಬಲಿಷ್ಠರನ್ನು ನಾಚಿಕೆಪಡಿಸುವಂತೆ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾರೆ.


ಆ ದಿನದಲ್ಲಿ ಯೆಹೋವ ದೇವರು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವರು. ಆ ದಿವಸಗಳಲ್ಲಿ ಅವರಲ್ಲಿ ಅತ್ಯಂತ ಬಲಹೀನನು ದಾವೀದನಂತೆ ಬಲಾಢ್ಯನಾಗುವನು. ದಾವೀದನ ವಂಶವು ದೇವರ ಹಾಗೆಯೂ, ಮುಂದಾಳಾಗಿ ಯೆಹೋವ ದೇವರ ದೂತನ ಹಾಗೆಯೂ ಇರುವುದು.


ಯೆಹೋವ ದೇವರೇ, ನಿಮ್ಮ ಕೀರ್ತಿಯನ್ನು ನಾನು ಕೇಳಿದ್ದೇನೆ, ಯೆಹೋವ ದೇವರೇ, ನಿಮ್ಮ ಕಾರ್ಯಗಳಿಗಾಗಿ ನಿಮ್ಮ ಮುಂದೆ ಭಯಭಕ್ತಿಯಿಂದ ನಿಲ್ಲುತ್ತೇನೆ. ನಮ್ಮ ದಿನಗಳಲ್ಲಿ ಅವುಗಳನ್ನು ಪುನಃ ಮಾಡಿರಿ. ನಮ್ಮ ವರ್ಷಗಳ ಮಧ್ಯದಲ್ಲಿ ಅವುಗಳನ್ನು ತಿಳಿಸಿರಿ, ನೀನು ರೋಷಗೊಂಡಿದ್ದರೂ ಕರುಣೆಯನ್ನು ಜ್ಞಾಪಕಮಾಡಿಕೊಳ್ಳಿರಿ.


ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ, ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಅವರು ತಮ್ಮ ಮಡದಿಮಕ್ಕಳೂಡನೆ ಮಹೋತ್ಸವ ಮಾಡಿದರು. ಆದ್ದರಿಂದ ಯೆರೂಸಲೇಮಿನ ಸಂತೋಷ ಧ್ವನಿಯು ಬಹು ದೂರಕ್ಕೆ ಕೇಳಿಸಿತು.


ಆಗ ಯೆಹೂದದವರು, “ಹೊರೆ ಹೊರುವವರ ಬಲವು ಕುಂದಿಹೋಯಿತು; ಕಲ್ಲುಮಣ್ಣಿನ ರಾಶಿ ಬಹಳವಾಗಿದೆ; ಈ ಗೋಡೆಯನ್ನು ಪುನಃ ಕಟ್ಟುವುದು ನಮ್ಮಿಂದಾಗದು,” ಎಂದರು.


ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ, ಹಾಡುವುದರಿಂದಲೂ, ತಾಳಗಳಿಂದಲೂ, ವೀಣೆಗಳಿಂದಲೂ, ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವುದಕ್ಕೆ ಲೇವಿಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.


ಹೀಗೆ ಗೋಡೆಯು ಐವತ್ತೆರಡು ದಿವಸಗಳಲ್ಲಿ ಏಲುಲ್ ತಿಂಗಳದ ಇಪ್ಪತ್ತೈದನೆಯ ದಿವಸದಲ್ಲಿ ಮುಗಿಯಿತು.


“ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’


“ ‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ?


“ಆ ಏಳು ದೀಪಗಳು ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಯೆಹೋವ ದೇವರ ಕಣ್ಣುಗಳು. ಜನರು ನೂಲುಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುವರು. ಹೀಗಿರುವುದರಿಂದ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?”


ಆಗ ಸುತ್ತಲಿದ್ದ ಜನಾಂಗಗಳವರು ಯೆಹೂದದ ಜನರನ್ನು ನಿರಾಶರನ್ನಾಗಿ ಮಾಡಲು ಮತ್ತು ಕಟ್ಟುವುದನ್ನು ಮುಂದುವರಿಸುವ ವಿಷಯದಲ್ಲಿ ಭಯಪಡಿಸಲು ಮುಂದಿದ್ದರು.


ಅವರು, “ಬನ್ನಿರಿ, ರಾಷ್ಟ್ರವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲರ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ,” ಎನ್ನುತ್ತಾರೆ.


“ಆದ್ದರಿಂದ ನೀನು ಅರಿತು ತಿಳಿಯಬೇಕಾದದ್ದು ಏನೆಂದರೆ, ಯೆರೂಸಲೇಮನ್ನು ತಿರುಗಿ ಕಟ್ಟಲು ಆಜ್ಞೆ ಹೊರಡುವ ದಿನದಿಂದ, ಆಳುವ ಒಬ್ಬ ಅಭಿಷಿಕ್ತರು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಿದ ಮೇಲೆ, ಅರವತ್ತೆರಡು ವಾರಗಳು ಇರುವುದು. ಕಷ್ಟಕಾಲದಲ್ಲಿ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಅದು ಕಟ್ಟಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು