Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:20 - ಕನ್ನಡ ಸಮಕಾಲಿಕ ಅನುವಾದ

20 ನಿಮಗೆ ಕೊಂಬಿನ ಧ್ವನಿಯು ಯಾವ ಸ್ಥಳದಿಂದ ಕೇಳಿಬರುವುದೋ, ಆ ಸ್ಥಳಕ್ಕೆ ನಮ್ಮ ಹತ್ತಿರ ಕೂಡಿಬನ್ನಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವರು,” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಿಮಗೆ ಕೊಂಬಿನ ಧ್ವನಿಯು ಯಾವ ಸ್ಥಳದಿಂದ ಕೇಳಿಬರುವುದೋ ಆ ಸ್ಥಳಕ್ಕೆ ನಮ್ಮ ಹತ್ತಿರ ಕೂಡಿಬನ್ನಿರಿ. ನಮ್ಮ ದೇವರು ನಮಗೋಸ್ಕರ ಯುದ್ಧ ಮಾಡುವನು” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಿಮಗೆ ಕಹಳೆಯ ಧ್ವನಿ ಕೇಳಿದಕೂಡಲೆ, ನಮ್ಮ ಬಳಿಗೆ ಕೂಡಿಬನ್ನಿರಿ. ನಮ್ಮ ದೇವರು ನಮ್ಮ ಪರವಾಗಿ ಯುದ್ಧಮಾಡುವರು,” ಎಂದು ಹೇಳಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಿಮಗೆ ಕೊಂಬಿನ ಧ್ವನಿಯು ಯಾವ ಸ್ಥಳದಿಂದ ಕೇಳಬರುವದೋ ಆ ಸ್ಥಳಕ್ಕೆ ನಮ್ಮ ಹತ್ತಿರ ಕೂಡಿಬನ್ನಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವನು ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ತುತ್ತೂರಿಯ ಶಬ್ದ ಕೇಳಿದ ಕೂಡಲೇ ನೀವು ಅಲ್ಲಿಗೆ ಹೋಗಬೇಕು. ನಾವೆಲ್ಲಾ ಆ ಸ್ಥಳದಲ್ಲಿ ಒಟ್ಟಾಗಿ ಸೇರಬೇಕು. ನಮ್ಮ ದೇವರು ನಮಗಾಗಿ ಯುದ್ಧ ಮಾಡುವನು” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:20
10 ತಿಳಿವುಗಳ ಹೋಲಿಕೆ  

ಯೆಹೋವ ದೇವರು ನಿಮಗೋಸ್ಕರ ಯುದ್ಧಮಾಡುವರು, ಆದರೆ ನೀವು ವಿಶ್ರಾಂತಿಯಿಂದಿರಿ,” ಎಂದನು.


ಏಕೆಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ, ನಿಮ್ಮನ್ನು ರಕ್ಷಿಸುವುದಕ್ಕೆ ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಸಂಗಡ ಬರುತ್ತಾರೆ,” ಎಂದು ಹೇಳಬೇಕು.


ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಿಮ್ಮ ಕಣ್ಣು ಮುಂದೆ, ಯುದ್ಧಮಾಡಿದಂತೆಯೇ ಈಗಲೂ ನಿಮಗೋಸ್ಕರ ಯುದ್ಧಮಾಡುವರು.


ನಿಮ್ಮ ದೇವರಾದ ಯೆಹೋವ ದೇವರು ತಮ್ಮ ವಾಗ್ದಾನದಂತೆಯೇ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.


ನೀವು ಅವುಗಳಿಗೆ ಭಯಪಡಬೇಡಿರಿ, ನಿಮ್ಮ ದೇವರಾದ ಯೆಹೋವ ದೇವರೇ ನಿಮಗೋಸ್ಕರ ಯುದ್ಧಮಾಡುವರು,” ಎಂದೆನು.


ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟು ಕಷ್ಟದಿಂದ ಅವರು ಹೋಗುವಂತೆ ಮಾಡಿದರು. ಆಗ ಈಜಿಪ್ಟಿನವರು, “ಇಸ್ರಾಯೇಲರ ಎದುರಿನಿಂದ ಓಡಿಹೋಗೋಣ. ಏಕೆಂದರೆ ಯೆಹೋವ ದೇವರು ಈಜಿಪ್ಟಿನವರಿಗೆ ವಿರೋಧವಾಗಿ ಯುದ್ಧಮಾಡುತ್ತಾರೆ,” ಎಂದು ಹೇಳಿಕೊಂಡರು.


ಆಗ ಯೆಹೋವ ದೇವರು ಹೊರಟು, ಯುದ್ಧದ ದಿವಸದಲ್ಲಿ ಹೋರಾಟ ಮಾಡಿದ ಪ್ರಕಾರವೇ, ಆ ಜನಾಂಗಗಳ ಸಂಗಡ ಅವರು ಹೋರಾಟ ಮಾಡುವರು.


ಆಗ ನಾನು ಶ್ರೇಷ್ಠರಿಗೂ, ಅಧಿಕಾರಿಗಳಿಗೂ, ಇತರ ಜನರಿಗೂ, “ಕೆಲಸವು ದೊಡ್ಡದೂ, ವಿಸ್ತಾರವೂ ಆದದ್ದು. ನಾವು ಗೋಡೆಯ ಮೇಲೆ ಚದರಿ, ಒಬ್ಬರಿಗೊಬ್ಬರು ದೂರವಾಗಿದ್ದೇವೆ.


ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸ ಮಾಡುತ್ತಿದ್ದೆವು. ನನ್ನ ಸೇವಕರಲ್ಲಿ ಅರ್ಧಮಂದಿ ಭರ್ಜಿ ಹಿಡಿದುಕೊಂಡಿದ್ದರು.


ಅವನಿಗೆ ಯೋವಾಬನು, “ಅರಾಮ್ಯರು ನನಗಿಂತ ಬಲವುಳ್ಳವರಾದರೆ, ನೀನು ನನಗೆ ಸಹಾಯಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳವರಾದರೆ, ನಾನು ಬಂದು ನಿನಗೆ ಸಹಾಯ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು