Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:22 - ಕನ್ನಡ ಸಮಕಾಲಿಕ ಅನುವಾದ

22 ಇದಲ್ಲದೆ ನಾನು ಆ ಸಮಯದಲ್ಲಿ ಜನರಿಗೆ, “ನಿಮ್ಮ ಆಳುಗಳು ರಾತ್ರಿಯಲ್ಲಿ ನಮಗೆ ಕಾವಲಾಗಿರುವಂತೆಯೂ, ಹಗಲಿನಲ್ಲಿ ಕೆಲಸ ನಡೆಸುವಂತೆಯೂ ನೀವು ನಿಮ್ಮ ನಿಮ್ಮ ಆಳುಗಳೊಡನೆ ಯೆರೂಸಲೇಮಿನಲ್ಲೇ ವಾಸಮಾಡಬೇಕು,” ಎಂದು ಅಪ್ಪಣೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇದಲ್ಲದೆ, ನಾನು ಆ ಸಮಯದಲ್ಲಿ ಜನರಿಗೆ, “ನಿಮ್ಮ ಆಳುಗಳು ರಾತ್ರಿಯಲ್ಲಿ ನಮಗೆ ಕಾವಲಾಗಿರುವಂತೆಯು ಹಾಗೂ ಹಗಲಿನಲ್ಲಿ ಕೆಲಸ ನಡಿಸುವಂತೆಯು ನೀವು ನಿಮ್ಮ ನಿಮ್ಮ ಆಳುಗಳೊಡನೆ ಯೆರೂಸಲೇಮಿನಲ್ಲಿಯೇ ವಾಸಮಾಡಬೇಕು” ಎಂದು ಅಪ್ಪಣೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದಲ್ಲದೆ, ನಾನು ಮೇಸ್ತ್ರಿಗಳಿಗೆ, “ನಿಮ್ಮ ಆಳುಗಳು ರಾತ್ರಿಯಲ್ಲಿ ನಮಗೆ ಕಾವಲಾಗಿರಲು ಹಾಗು ಹಗಲಿನಲ್ಲಿ ಕೆಲಸಮಾಡಲು ಸಾಧ್ಯವಾಗುವಂತೆ, ನೀವು ನಿಮ್ಮ ನಿಮ್ಮ ಆಳುಗಳೊಡನೆ ಜೆರುಸಲೇಮಿನಲ್ಲೇ ವಾಸಮಾಡಬೇಕು,” ಎಂದು ಅಪ್ಪಣೆಮಾಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇದಲ್ಲದೆ ನಾನು ಆ ಸಮಯದಲ್ಲಿ ಜನರಿಗೆ - ನಿಮ್ಮ ಆಳುಗಳು ರಾತ್ರಿಯಲ್ಲಿ ನಮಗೆ ಕಾವಲಾಗಿರುವ ಹಾಗೂ ಹಗಲಿನಲ್ಲಿ ಕೆಲಸ ನಡಿಸುವ ಹಾಗೂ ನೀವು ನಿಮ್ಮ ನಿಮ್ಮ ಆಳುಗಳೊಡನೆ ಯೆರೂಸಲೇವಿುನಲ್ಲೇ ವಾಸಮಾಡಬೇಕು ಎಂದು ಅಪ್ಪಣೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಪ್ರತಿಯೊಬ್ಬ ಕೆಲಸಗಾರನೂ ಅವನ ಸಹಾಯಕನೂ ಜೆರುಸಲೇಮಿನೊಳಗೇ ರಾತ್ರಿಯನ್ನು ಕಳೆಯಬೇಕು. ರಾತ್ರಿ ಕಾಲದಲ್ಲಿ ಅವರು ಪಹರೆಯವರಾಗಿಯೂ ಹಗಲಲ್ಲಿ ಗೋಡೆ ಕಟ್ಟುವವರಾಗಿಯೂ ಇರಬೇಕು” ಎಂದು ನಾನು ಜನರಿಗೆ ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:22
3 ತಿಳಿವುಗಳ ಹೋಲಿಕೆ  

ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸ ಮಾಡುತ್ತಿದ್ದೆವು. ನನ್ನ ಸೇವಕರಲ್ಲಿ ಅರ್ಧಮಂದಿ ಭರ್ಜಿ ಹಿಡಿದುಕೊಂಡಿದ್ದರು.


ನಾನೂ, ನನ್ನ ಸಹೋದರರೂ, ಸೇವಕರೂ, ಮೈಗಾವಲಿನವರೂ ಸ್ನಾನದ ಸಮಯದಲ್ಲಿ ಹೊರತು, ಬೇರೆ ಸಮಯದಲ್ಲಿ ನಮ್ಮ ವಸ್ತ್ರಗಳನ್ನು ತೆಗೆದುಹಾಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು