Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:3 - ಕನ್ನಡ ಸಮಕಾಲಿಕ ಅನುವಾದ

3 ಅವನ ಬಳಿಯಲ್ಲೇ ನಿಂತಿದ್ದ ಅಮ್ಮೋನಿಯನಾದ ಟೋಬೀಯನು, “ಅವರು ಕಟ್ಟುವ ಕಲ್ಲು ಗೋಡೆಯ ಮೇಲೆ ನರಿ ಹಾರಿದರೆ, ಅದು ಬಿದ್ದುಹೋಗುವುದು!” ಎಂದು ಅಣಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನ ಬಳಿಯಲ್ಲಿ ನಿಂತಿದ್ದ ಅಮ್ಮೋನಿಯಾದ ಟೋಬೀಯನು, “ಅವರು ಹೇಗೆ ಕಟ್ಟಿದ್ದರೂ ಅವರು ಕಟ್ಟುವ ಕಲ್ಲುಗೋಡೆಯ ಮೇಲೆ ನರಿ ಹಾರಿದರೆ ಅದು ಉರುಳಿ ಬಿದ್ದು ಹೋಗುವುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನ ಬಳಿಯಲ್ಲೇ ನಿಂತಿದ್ದ ಅಮ್ಮೋನಿಯನಾದ ಟೋಬೀಯನು, “ಅವರು ಕಟ್ಟುವ ಕಲ್ಲು ಗೋಡೆಯ ಮೇಲೆ ನರಿ ಹಾರಿದರೆ ಅದು ಬಿದ್ದುಹೋಗುವುದು!” ಎಂದು ಅಣಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನ ಬಳಿಯಲ್ಲಿ ನಿಂತಿದ್ದ ಅಮ್ಮೋನಿಯನಾದ ಟೋಬೀಯನು - ಅವರು ಕಟ್ಟುವ ಕಲ್ಲುಗೋಡೆಯ ಮೇಲೆ ನರಿ ಹಾರಿದರೆ ಅದು ಬಿದ್ದುಹೋಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವನ ಜೊತೆಯಲ್ಲಿದ್ದ ಅಮ್ಮೋನಿಯನಾದ ಟೋಬೀಯನು, “ಈ ಯೆಹೂದ್ಯರು ಕಟ್ಟುತ್ತಿರುವುದೇನು? ಆ ಗೋಡೆಯ ಮೇಲೆ ಒಂದು ನರಿ ಹಾರಿದರೂ ಗೋಡೆಯು ಕುಸಿದುಬೀಳುವುದು” ಎಂದು ವ್ಯಂಗ್ಯವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:3
8 ತಿಳಿವುಗಳ ಹೋಲಿಕೆ  

ಆದರೆ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ಯ ದಾಸನಾದ ಟೋಬೀಯನೂ, ಅರಬಿಯನಾದ ಗೆಷೆಮನೂ ಇದನ್ನು ಕೇಳಿದಾಗ, ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ, “ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರುಗಿಬೀಳುವಿರೋ?” ಎಂದರು.


ಇಸ್ರಾಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬಾ ವಿಚಲಿತರಾದರು.


“ ‘ಹಾಗಾದರೆ ಈಗ ನೀನು ಅಸ್ಸೀರಿಯದ ಅರಸನಾದ ನನ್ನ ಯಜಮಾನನೊಂದಿಗೆ ಒಪ್ಪಂದ ಮಾಡಿಕೋ, ಆಗ ನಿನಗೆ ಎರಡು ಸಾವಿರ ಕುದುರೆಸವಾರರನ್ನು ಬಳಸಲು ಸಾಮರ್ಥ್ಯವಿದ್ದರೆ ನಾನು ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.


ಆಗ ಅವರು, “ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ, ಅವರನ್ನು ಜೀವಿತರಾಗಿ ಹಿಡಿಯಿರಿ. ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ, ಅವರನ್ನು ಜೀವಿತರಾಗಿ ಹಿಡಿಯಿರಿ,” ಎಂದನು.


ಆಗ ಬೆನ್ಹದದನು ದೂತರನ್ನು ಕಳುಹಿಸಿ ಅಹಾಬನಿಗೆ, “ನನ್ನ ಸೈನಿಕರು ಸಮಾರ್ಯದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಬಿಟ್ಟರೆ ದೇವರುಗಳು ನನಗೆ ಇದಕ್ಕಿಂತ ಹೆಚ್ಚಾಗಿ ನನಗೆ ಕೆಟ್ಟದ್ದನ್ನು ಮಾಡಲಿ,” ಎಂದು ಅವನಿಗೆ ಇನ್ನೊಂದು ಸುದ್ದಿಯನ್ನು ಹೇಳಿ ಕಳುಹಿಸಿದನು.


ಏಕೆಂದರೆ ಚೀಯೋನ್ ಪರ್ವತವು ಹಾಳಾಗಿರುವುದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡುವುವು.


ನಾನು ಹೆಬ್ಬಾಗಿಲುಗಳಲ್ಲಿ ಬಾಗಿಲುಗಳನ್ನು ಇಡುವುದಕ್ಕಿಂತ ಮುಂಚೆ ನಾನು ಗೋಡೆಯಲ್ಲಿ ಒಂದು ಸಂದನ್ನೂ ಬಿಡದೆ ಪುನಃ ಕಟ್ಟಿದೆನೆಂದು ಸನ್ಬಲ್ಲಟನೂ, ಟೋಬೀಯನೂ, ಅರಬಿಯನಾದ ಗೆಷೆಮನೂ, ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ,


ಅಮ್ಮೋನಿಯರು ಇಲ್ಲವೆ ಮೋವಾಬ್ಯರು ಯೆಹೋವ ದೇವರ ಸಭೆಗೆ ಸೇರಬಾರದು; ಹತ್ತನೆಯ ತಲಾಂತರವರೆಗೆ ಅವರು ಯೆಹೋವ ದೇವರ ಸಭೆಯಲ್ಲಿ ಸೇರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು