Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:7 - ಕನ್ನಡ ಸಮಕಾಲಿಕ ಅನುವಾದ

7 ಯೆರೂಸಲೇಮಿನ ಗೋಡೆಯ ದುರಸ್ತಿಕಾರ್ಯ ಮುಂದುವರಿದಿದೆ ಹಾಗು ಅದರ ಸಂದುಗಳು ಮತ್ತೆ ಮುಚ್ಚಿಕೊಳ್ಳುತ್ತಿವೆ ಎಂದು ಸನ್ಬಲ್ಲಟನೂ ಟೋಬೀಯನೂ ಅರಬಿಯರೂ ಅಮ್ಮೋನ್ಯರೂ ಅಷ್ಡೋದ್ಯರೂ ಕೇಳಿದಾಗ ಬಹು ಕೋಪಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸನ್ಬಲ್ಲಟನೂ, ಟೋಬೀಯನೂ, ಅರಬಿಯರೂ, ಅಮ್ಮೋನಿಯರೂ, ಅಷ್ಡೋದಿನವರೂ ಯೆರೂಸಲೇಮಿನ ಗೋಡೆಯ ಜೀರ್ಣೋದ್ಧಾರ ಕಾರ್ಯವು ಮುಂದುವರಿದು, ಅದರ ಸಂದುಗಳು ತಿರುಗಿ ಸರಿಯಾಗುತ್ತಾ ಬರುವುದನ್ನು ಕೇಳಿ ಬಹುಕೋಪಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸನ್ಬಲ್ಲಟನು, ಟೋಬೀಯನು, ಅರೇಬಿಯರು, ಅಮ್ಮೋನಿಯರು ಹಾಗು ಅಷ್ಡೋದಿನವರು ಜೆರುಸಲೇಮಿನ ಗೋಡೆಯ ದುರಸ್ತಿಕಾರ್ಯ ಮುಂದುವರಿದಿದೆ ಹಾಗು ಅದರ ಸಂದುಗಳು ಮತ್ತೆ ಮುಚ್ಚಿಕೊಳ್ಳುತ್ತಿವೆ ಎಂಬುದನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸನ್ಬಲ್ಲಟನೂ ಟೋಬೀಯನೂ ಅರಬಿಯರೂ ಅಮ್ಮೋನಿಯರೂ ಅಷ್ಡೋದಿನವರೂ ಯೆರೂಸಲೇವಿುನ ಗೋಡೆಯ ಜೀರ್ಣೋದ್ಧಾರಕಾರ್ಯವು ಮುಂದರಿದು ಅದರ ಸಂದುಗಳು ತಿರಿಗಿ ಕೂಡುತ್ತಾ ಬರುವದನ್ನು ಕೇಳಿ ಬಹುಕೋಪವುಳ್ಳವರಾಗಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸನ್ಬಲ್ಲಟನು, ಟೋಬೀಯನು, ಅರಬಿಯರು, ಅಮ್ಮೋನಿಯರು ಮತ್ತು ಅಷ್ಡೋದಿನವರು ತುಂಬಾ ಕೋಪಗೊಂಡಿದ್ದರು. ಯಾಕೆಂದರೆ ಜೆರುಸಲೇಮಿನ ಗೋಡೆಯ ಕೆಲಸ ಮುಂದುವರಿಯುತ್ತಿದೆಯೆಂದೂ ಮತ್ತು ಗೋಡೆಗಳ ಕಿಂಡಿಗಳನ್ನು ರಿಪೇರಿ ಮಾಡಲಾಗುತ್ತಿದೆಯೆಂದೂ ಅವರು ಕೇಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:7
29 ತಿಳಿವುಗಳ ಹೋಲಿಕೆ  

ನಾವು ಗೋಡೆಯನ್ನು ಪುನಃ ಕಟ್ಟುವ ವರ್ತಮಾನವನ್ನು ಸನ್ಬಲ್ಲಟನು ಕೇಳಿದಾಗ, ಅವನು ಕೋಪಗೊಂಡು, ಯೆಹೂದ್ಯರಿಗೆ ಗೇಲಿಮಾಡಿ,


ಇಸ್ರಾಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬಾ ವಿಚಲಿತರಾದರು.


ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹುಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಎಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು, ಯೇಸುವಿನ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟನು.


ಅವರು ಇದನ್ನು ಕೇಳಿದಾಗ ಬಹುಕೋಪಗೊಂಡು ಅವರನ್ನು ಕೊಲ್ಲಬೇಕೆಂದಿದ್ದರು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅಮ್ಮೋನಿನ ಮಕ್ಕಳು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ತಮ್ಮ ಮೇರೆಯನ್ನು ವಿಸ್ತಾರ ಮಾಡುವುದಕ್ಕಾಗಿ, ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿಬಿಟ್ಟಿದ್ದಾರೆ.


ವಿದೇಶೀಯ ಜನರೆಲ್ಲರಿಗೂ, ಊಚ್ ದೇಶದ ಅರಸರೆಲ್ಲರಿಗೂ, ಫಿಲಿಷ್ಟಿಯ ದೇಶದ ಅರಸರಾದ, ಅಷ್ಕೆಲೋನಿಗೂ, ಗಾಜಕ್ಕೂ, ಎಕ್ರೋನಿಗೂ, ಅಷ್ಡೋದಿನ ಉಳಿದವರಿಗೂ,


ಅಷ್ಡೋದಿನಿಂದ ನಿವಾಸಿಯನ್ನು ಮತ್ತು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು. ಫಿಲಿಷ್ಟಿಯರಲ್ಲಿ ಕೊನೆಯವರು ಸಾಯುವವರೆಗೂ ನಾನು ಎಕ್ರೋನಿನ ವಿರುದ್ಧ ನನ್ನ ಕೈಯನ್ನು ತಿರುಗಿಸುವೆನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಆದರೆ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ಯ ದಾಸನಾದ ಟೋಬೀಯನೂ, ಅರಬಿಯನಾದ ಗೆಷೆಮನೂ ಇದನ್ನು ಕೇಳಿದಾಗ, ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ, “ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರುಗಿಬೀಳುವಿರೋ?” ಎಂದರು.


ಅರಸನಿಗೆ ತಿಳಿಯಬೇಕಾದದ್ದೇನೆಂದರೆ, ನಾವು ಯೆಹೂದರ ದೇಶದಲ್ಲಿರುವ ಮಹಾ ದೇವರ ಆಲಯಕ್ಕೆ ಹೋದೆವು. ಅದನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಿದ್ದಾರೆ. ಗೋಡೆಗಳ ಮೇಲೆ ತೊಲೆಗಳನ್ನು ಇಡುತ್ತಿದ್ದಾರೆ. ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಿಂದ ವೇಗವಾಗಿ ವೃದ್ಧಿಯಾಗುತ್ತದೆ.


ಇದರ ತರುವಾಯ ಮೋವಾಬ್ಯರೂ, ಅಮ್ಮೋನಿಯರೂ, ಮೆಗೂನ್ಯರೂ ಯೆಹೋಷಾಫಾಟನ ಮೇಲೆ ಯುದ್ಧಮಾಡಲು ಬಂದರು.


ಯೆಹೋವ ದೇವರು ಬಾಬಿಲೋನಿಯರನ್ನೂ, ಅರಾಮ್ಯರನ್ನೂ, ಮೋವಾಬ್ಯರನ್ನೂ, ಅಮ್ಮೋನಿಯರನ್ನೂ ಅವನ ಮೇಲೆ ಕಳುಹಿಸಿದನು. ಯೆಹೋವ ದೇವರು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ, ಯೆಹೂದವನ್ನು ನಾಶಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.


ಅಮ್ಮೋನ್ಯನಾದ ನಾಹಾಷನು ಅವರಿಗೆ, “ಇಸ್ರಾಯೇಲರಿಗೆ ಅವಮಾನಪಡಿಸುವುದಕ್ಕಾಗಿ ನಿಮ್ಮೆಲ್ಲರ ಬಲಗಣ್ಣುಗಳನ್ನು ಕಿತ್ತು ಹಾಕುವ ಒಂದೇ ನಿಬಂಧನೆಯಿಂದ, ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ,” ಎಂದನು.


ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”


ಅಷ್ಡೋದಿನ ಕೋಟೆಗಳಲ್ಲಿ ಮತ್ತು ಈಜಿಪ್ಟ್ ದೇಶದ ಕೋಟೆಗಳಲ್ಲಿ ಹೀಗೆ ಸಾರಿ ಹೇಳಿರಿ: “ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು, ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರೊಳಗಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.”


ಹೀಗೆ ನಾವು ಪುನಃ ಗೋಡೆ ಕಟ್ಟುವುದನ್ನು ಮುಂದುವರಿಸಿದೆವು. ಗೋಡೆ ಅರ್ಧ ಎತ್ತರದವರೆಗೂ ಆಯಿತು. ಏಕೆಂದರೆ ಜನರು ಕೆಲಸ ಮಾಡುವುದಕ್ಕೆ ಮನಸ್ಸುಳ್ಳವರಾಗಿದ್ದರು.


ಅವರು ಯೆರೂಸಲೇಮಿಗೆ ವಿರೋಧವಾಗಿ ಯುದ್ಧ ಮಾಡುವುದಕ್ಕೂ, ಅಭ್ಯಂತರಿಸುವುದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು.


ಈ ಸುದ್ದಿ ಸುತ್ತಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.


ಇಷ್ಮಾಯೇಲನು ಮಿಚ್ಪದಲ್ಲಿದ್ದ ಜನರ ಉಳಿದವರನ್ನೆಲ್ಲಾ ಅರಸನ ಪುತ್ರಿಯರನ್ನೂ, ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟು, ಉಳಿದ ಜನರೆಲ್ಲರನ್ನು ಸೆರೆಯಾಗಿ ಒಯ್ದನು. ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು, ಅಮ್ಮೋನ್ಯರ ಬಳಿಗೆ ದಾಟಿಹೋಗುವುದಕ್ಕೆ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು