Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:1 - ಕನ್ನಡ ಸಮಕಾಲಿಕ ಅನುವಾದ

1 ತರುವಾಯ ಜನರೂ, ಅವರ ಹೆಂಡತಿಯರೂ ತಮ್ಮ ಸಹೋದರರಾದ ಯೆಹೂದ್ಯರ ವಿರುದ್ಧ ಬಹಳ ಗೋಳಾಡ ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗೋಳಾಡ ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೆಲವು ದಿನಗಳ ನಂತರ ಜನಸಾಮಾನ್ಯರು ಹಾಗು ಅವರ ಹೆಂಡತಿಯರು ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧ ಕಟುವಾಗಿ ಗುಣುಗುಟ್ಟತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಸಾಧಾರಣಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗುಣುಗುಟ್ಟತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೂದ್ಯರಲ್ಲಿ ಎಷ್ಟೋ ಬಡಜನರು ತಮ್ಮ ಬಂಧುಗಳ ವಿಷಯದಲ್ಲಿ ದೂರು ಹೇಳಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:1
15 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವ ದೇವರ ದ್ರಾಕ್ಷಿತೋಟವು ಇಸ್ರಾಯೇಲಿನ ಮನೆತನವು. ಯೆಹೂದದ ಜನವೋ ದೇವರ ಇಷ್ಟದ ಗಿಡವು. ಅವರು ನ್ಯಾಯವನ್ನು ನಿರೀಕ್ಷಿಸಲು, ಹಿಂಸೆಯೂ, ನೀತಿಯನ್ನು ನಿರೀಕ್ಷಿಸಲು ಗೋಳಾಟವು ಸಿಕ್ಕಿತು.


ಇಗೋ ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ. ಕೊಯಿದವರ ಕೂಗು ಸೈನ್ಯಗಳ ಅಧಿಪತಿ ಆಗಿರುವ ಕರ್ತದೇವರ ಕಿವಿಗಳಲ್ಲಿ ಬಿದ್ದಿದೆ.


ಮರುದಿನ ಇಬ್ಬರು ಇಸ್ರಾಯೇಲರು ಜಗಳವಾಡುತ್ತಿರುವುದನ್ನು ಮೋಶೆ ಕಂಡು, ‘ಗೆಳೆಯರೇ, ನೀವು ಸಹೋದರರಲ್ಲವೇ; ಒಬ್ಬರಿಗೊಬ್ಬರು ಏಕೆ ಜಗಳಮಾಡುತ್ತಿದ್ದೀರಿ?’ ಎಂದು ಹೇಳಿ ಅವರನ್ನು ಸಮಾಧಾನಪಡಿಸಲು ಯತ್ನಿಸಿದನು.


ದೇವರಾದುಕೊಂಡವರು ದೇವರಿಗೆ ಹಗಲುರಾತ್ರಿ ಮೊರೆಯಿಡುವಾಗ, ದೇವರು ಅವರ ವಿಷಯದಲ್ಲಿ ಅವರಿಗೆ ನ್ಯಾಯವನ್ನು ಕೊಡದೆ ಇರುವರೋ? ದೇವರು ನ್ಯಾಯ ಕೊಡಲು ತಡಮಾಡುವರೋ?


ಹೀಗೆ ದುಷ್ಟರು ಬಡವರ ಕೂಗನ್ನು ದೇವರ ಬಳಿಗೆ ಬರುವಂತೆ ಮಾಡಿದ್ದರು ದೇವರು ದಿಕ್ಕಿಲ್ಲದವರ ಕೂಗನ್ನು ಆಲೈಸಿದ್ದರು.


ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.


ನಾನೂ, ನನ್ನ ಸಹೋದರರೂ, ಸೇವಕರೂ, ಮೈಗಾವಲಿನವರೂ ಸ್ನಾನದ ಸಮಯದಲ್ಲಿ ಹೊರತು, ಬೇರೆ ಸಮಯದಲ್ಲಿ ನಮ್ಮ ವಸ್ತ್ರಗಳನ್ನು ತೆಗೆದುಹಾಕಲಿಲ್ಲ.


ಗುಲಾಮರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಅರಸನಾದ ಚಿದ್ಕೀಯನು ಯೆರೂಸಲೇಮಿನ ಎಲ್ಲಾ ಜನರೊಂದಿಗೆ ಒಡಂಬಡಿಕೆಯನ್ನು ಮಾಡಿದ ನಂತರ ಯೆಹೋವ ದೇವರಿಂದ ಯೆರೆಮೀಯನಿಗೆ ಈ ಮಾತು ಬಂದಿತು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನೂ ಸುಲಿಗೆಯನ್ನೂ ಬಿಡಿರಿ. ನ್ಯಾಯವನ್ನೂ ನೀತಿಯನ್ನೂ ನಡೆಸಿರಿ. ನನ್ನ ಜನರನ್ನು ಓಡಿಸಬೇಡಿರಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನೀವು ಇನ್ನೊಂದನ್ನು ಮಾಡಿದ್ದೀರಿ. ಯೆಹೋವ ದೇವರ ಬಲಿಪೀಠಗಳನ್ನು ಕಣ್ಣೀರಿನಿಂದ ತುಂಬಿಸಿದ್ದೀರಿ. ಆದ್ದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷಿಸದೆ, ಅದನ್ನು ನಿಮ್ಮ ಕೈಯಿಂದ ಮೆಚ್ಚಿಕೆಯಾಗಿ ಅಂಗೀಕರಿಸುವುದಿಲ್ಲವಾದ್ದರಿಂದ ನೀವು ಅಳುತ್ತೀರಿ, ಗೋಳಾಡುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು