Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:14 - ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ನಾನು ಯೆಹೂದ ದೇಶದಲ್ಲಿ ಅವರ ರಾಜ್ಯಪಾಲನಾದ ಕಾಲ ಮೊದಲ್ಗೊಂಡು ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರ್ಷ ಮೊದಲ್ಗೊಂಡು ಮೂವತ್ತೆರಡನೆಯ ವರ್ಷದವರೆಗೆ ಹನ್ನೆರಡು ವರ್ಷವಾಗಿ ನಾನೂ, ನನ್ನ ಸಹೋದರರೂ ರಾಜ್ಯಪಾಲನಿಗೆ ಸಲ್ಲತಕ್ಕ ಆಹಾರವನ್ನು ತಿನ್ನಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅರಸನಾದ ಅರ್ತಷಸ್ತನು ನನ್ನನ್ನು ಯೆಹೂದ ದೇಶದ ಅಧಿಪತಿಯನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳ ವರೆಗೆ ಅಂದರೆ ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ ನಾನಾಗಲಿ ನನ್ನ ಸಹೋದರರಾಗಲಿ ದೇಶಾಧಿಪತಿಗೆ ಸಲ್ಲತಕ್ಕ ಭತ್ಯದಿಂದ ಜೀವನಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅರಸ ಅರ್ತಷಸ್ತನು ನನ್ನನ್ನು ಜುದೇಯ ನಾಡಿನ ರಾಜ್ಯಪಾಲನನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳವರೆಗೆ ಅಂದರೆ, ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ, ನಾನಾಗಲಿ, ನನ್ನ ಸಹೋದರರಾಗಲಿ ರಾಜ್ಯಪಾಲನೆಗೆ ಸಲ್ಲ ತಕ್ಕ ಭತ್ಯದಿಂದ ಜೀವನ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅರಸನಾದ ಅರ್ತಷಸ್ತನು ನನ್ನನ್ನು ಯೆಹೂದ ದೇಶದ ಅಧಿಪತಿಯನ್ನಾಗಿ ನೇವಿುಸಿದಂದಿನಿಂದ ಹನ್ನೆರಡು ವರುಷಗಳವರೆಗೆ ಅಂದರೆ ಅವನ ಆಳಿಕೆಯ ಇಪ್ಪತ್ತನೆಯ ವರುಷದಿಂದ ಮೂವತ್ತೆರಡನೆಯ ವರುಷದವರೆಗೆ ನಾನಾಗಲಿ ನನ್ನ ಸಹೋದರರಾಗಲಿ ದೇಶಾಧಿಪತಿಗೆ ಸಲ್ಲತಕ್ಕ ಆಯದಿಂದ ಜೀವನಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೂದ ಪ್ರಾಂತ್ಯಕ್ಕೆ ನನ್ನನ್ನು ರಾಜ್ಯಪಾಲನಾಗಿ ನೇಮಿಸಿದಂದಿನಿಂದ, ನಾನಾಗಲಿ ನನ್ನ ಸಹೋದರರಾಗಲಿ ರಾಜ್ಯಪಾಲರಿಗಾಗಿ ಪ್ರತ್ಯೇಕಿಸಿದ ಆಹಾರವನ್ನು ತಿನ್ನಲಿಲ್ಲ; ನನಗಾಗಿ ಆಹಾರವನ್ನು ಕೊಂಡುಕೊಳ್ಳಲು ಜನರಿಂದ ತೆರಿಗೆ ವಸೂಲಿಮಾಡಲಿಲ್ಲ. ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆ ವರ್ಷದ ತನಕ ನಾನು ರಾಜ್ಯಪಾಲನಾಗಿದ್ದೆನು. ಹೀಗೆ ಹನ್ನೆರಡು ವರ್ಷ ಯೆಹೂದದ ರಾಜ್ಯಪಾಲನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:14
9 ತಿಳಿವುಗಳ ಹೋಲಿಕೆ  

ಆದರೆ ಇವೆಲ್ಲಾ ಸಂಭವಿಸುವಾಗ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ. ಬಾಬಿಲೋನಿನ ಅರಸನಾದ ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅರಸನ ಬಳಿಗೆ ಹೋಗಿದ್ದೆ. ತರುವಾಯ ನಾನು ಅರಸನಿಂದ ಅಪ್ಪಣೆ ಪಡೆದುಕೊಂಡು,


ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರ್ಷದ, ನಿಸಾನ ತಿಂಗಳಲ್ಲಿ, ಅವನ ಮುಂದೆ ದ್ರಾಕ್ಷಾರಸವನ್ನು ತೆಗೆದುಕೊಂಡು ಅರಸನಿಗೆ ಕೊಟ್ಟೆನು. ನಾನು ಅವನ ಸಮ್ಮುಖದಲ್ಲಿ ಹಿಂದೆ ಎಂದೂ ದುಃಖಿತನಾಗಿದ್ದಿಲ್ಲ.


ಹಾಗಾದರೆ ನನಗೆ ದೊರೆಯುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ, ಅದನ್ನು ಉಚಿತವಾಗಿ ಸಾರುತ್ತಾ, ಸುವಾರ್ತೆಯ ಪ್ರಸಂಗಿಯಾಗಿ ನನ್ನ ಪೂರ್ಣ ಹಕ್ಕನ್ನು ಉಪಯೋಗಿಸದಿರುವುದೇ ನನ್ನ ಬಹುಮಾನ.


ಹಕಲ್ಯನ ಮಗ ನೆಹೆಮೀಯನ ಮಾತುಗಳು: ಇಪ್ಪತ್ತನೆಯ ವರ್ಷದ, ಕಿಸ್ಲೇವ್ ಎಂಬ ಮಾರ್ಗಶಿರ ತಿಂಗಳಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದೆನು.


ಐದು ಚಿನ್ನದ ನಾಣ್ಯಗಳನ್ನು ಹೊಂದಿದವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು