Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:15 - ಕನ್ನಡ ಸಮಕಾಲಿಕ ಅನುವಾದ

15 ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು, ನಾಲ್ವತ್ತು ಬೆಳ್ಳಿನಾಣ್ಯ ಮೌಲ್ಯದ ರೊಟ್ಟಿಯನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು. ಅವರ ಸೇವಕರು ಸಹ ಜನರ ಮೇಲೆ ದೊರೆತನ ನಡೆಸುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹಾಗೆ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನನಗಿಂತ ಮುಂಚೆಯಿದ್ದ ರಾಜ್ಯಪಾಲರು ಜನರ ಮೇಲೆ ಬಹಳ ತೆರಿಗೆ ಹೊರಿಸಿ, ಅವರಿಂದ ದಿನಕ್ಕೆ ನಾಲ್ವತ್ತು ಬೆಳ್ಳಿ ನಾಣ್ಯದ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು; ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸುತ್ತ ಇದ್ದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಹಾಗೆ ಮಾಡದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನಗಿಂತ ಮುಂಚೆಯಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ [ದಿನಕ್ಕೆ] ನಾಲ್ವತ್ತು ರೂಪಾಯಿಯ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡಿಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವದರಿಂದ ಹಾಗೆ ಮಾಡದೆ ಆ ಗೋಡೆ ಕಟ್ಟುವದರಲ್ಲಿ ನಿರತನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನಗಿಂತ ಮೊದಲು ರಾಜ್ಯಪಾಲರಾಗಿದ್ದವರು ಜನರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದರು. ಪ್ರತಿಯೊಬ್ಬರು ಒಂದು ಪೌಂಡ್ ಬೆಳ್ಳಿಯನ್ನೂ ಆಹಾರವನ್ನೂ ದ್ರಾಕ್ಷಾರಸವನ್ನೂ ಕೊಡಬೇಕಿತ್ತು. ಆ ರಾಜ್ಯಪಾಲರ ಅಧಿಕಾರಿಗಳು ಸಹ ಜನರ ಮೇಲೆ ದೊರೆತನ ನಡೆಸಿ ಅವರ ಜೀವನವನ್ನು ಮತ್ತಷ್ಟು ಕಠಿಣಗೊಳಿಸಿದರು. ಆದರೆ ದೇವರಲ್ಲಿ ಭಯಭಕ್ತಿ ಇದ್ದುದರಿಂದ ನಾನು ಆ ರೀತಿ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:15
19 ತಿಳಿವುಗಳ ಹೋಲಿಕೆ  

ನಾನು ಅವರಿಗೆ, “ನೀವು ಮಾಡುವುದು ಒಳ್ಳೆಯದಲ್ಲ. ಇತರ ದೇಶದವರಾದ ನಮ್ಮ ಶತ್ರುಗಳ ನಿಂದೆಗೆ ಗುರಿಯಾಗದಂತೆ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲವೇ.


ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ.


ಪ್ರೀತಿ ಮತ್ತು ಸತ್ಯತೆಗಳಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುತ್ತದೆ. ಯೆಹೋವ ದೇವರ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.


ನಾನು ನಿಮ್ಮಲ್ಲಿದ್ದಾಗ, ನನಗೆ ಕೊರತೆಯಾದಾಗ, ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಏಕೆಂದರೆ, ಮಕೆದೋನ್ಯದಿಂದ ಬಂದಿದ್ದ ಸಹೋದರರು ನನ್ನ ಅವಶ್ಯಕತೆಯನ್ನು ಪೂರೈಸಿದರು. ಹೀಗೆ ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಇನ್ನು ಮುಂದೆಯೂ ಭಾರವಾಗಿರುವುದಿಲ್ಲ.


ನಿಮ್ಮ ಸ್ವಂತದವರನ್ನು ಮಾತ್ರ ವಂದಿಸಿದರೆ ಹೆಚ್ಚೇನು ಮಾಡಿದ ಹಾಗಾಯಿತು? ಯೆಹೂದ್ಯರಲ್ಲದವರು ಸಹ ಹಾಗೆಯೇ ಮಾಡುತ್ತಾರಲ್ಲವೇ?


ಏಕೆಂದರೆ ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗೆ ಹೆದರಿಕೆಯಾಯಿತು; ದೇವರ ಪ್ರಭಾವದ ಭಯದ ನಿಮಿತ್ತ ನಾನು ಇಂಥ ಕೃತ್ಯವನ್ನು ಮಾಡುವುದಕ್ಕೆ ಸಾಧ್ಯವಾಗಲಿಲ್ಲ.


ನಾನು ನಿಮಗೆ ಎಂದೂ ಭಾರವಾಗಿರಲಿಲ್ಲ ಎಂಬ ಒಂದೇ ವಿಷಯದಲ್ಲಿ ಹೊರತು, ಬೇರೆ ಯಾವ ವಿಷಯದಲ್ಲಿಯೂ ನಿಮ್ಮನ್ನು ಉಳಿದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲ. ಈ ನನ್ನ ತಪ್ಪನ್ನು ಕ್ಷಮಿಸಿರಿ.


ಒಬ್ಬ ಅಧಿಕಾರಿಯು ಸುಳ್ಳಿಗೆ ಕಿವಿಗೊಟ್ಟರೆ, ಅವನ ಸೇವಕರೆಲ್ಲರೂ ದುಷ್ಟರಾಗುತ್ತಾರೆ.


ಯೆಹೋವ ದೇವರು ತಮಗೆ ಭಯಪಡುವವರಲ್ಲಿ ಆನಂದಿಸುತ್ತಾರೆ, ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರಲ್ಲಿ ಹರ್ಷಿಸುತ್ತಾರೆ.


ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಭಯಪಟ್ಟು ಅವರ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವವರು ಧನ್ಯರು.


ನಿಮ್ಮ ಧಾನ್ಯಗಳಲ್ಲಿಯೂ, ನಿಮ್ಮ ದ್ರಾಕ್ಷಿ ಫಲಗಳಲ್ಲಿಯೂ ಹತ್ತರಲ್ಲಿ ಒಂದು ಪಾಲನ್ನು ತೆಗೆದುಕೊಂಡು, ತನ್ನ ಅಧಿಕಾರಿಗಳಿಗೂ, ತನ್ನ ಸೇವಕರಿಗೂ ಕೊಡುವನು.


ಅದಕ್ಕೆ ಅಬ್ರಹಾಮನು, “ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ನೆನಸಿದೆನು.


ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನಾಗಿದ್ದೇನೆ.


ಆ ಗೋಡೆ ಕಟ್ಟುವುದರಲ್ಲೇ ನಿರತನಾಗಿದ್ದೆ ಮತ್ತು ನನ್ನ ಎಲ್ಲಾ ಸೇವಕರು ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆ. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ.


ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು, ಅವನಿಗೆ ಹದಿನೇಳು ಬೆಳ್ಳಿನಾಣ್ಯ ತೂಕಮಾಡಿ ಕ್ರಯಕೊಟ್ಟೆನು.


ಆಳುಗಳು ನಮ್ಮ ಮೇಲೆ ಆಳಿದ್ದಾರೆ. ಯಾರೂ ಅವರ ಕೈಯಿಂದ ನಮ್ಮನ್ನು ತಪ್ಪಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು