Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:4 - ಕನ್ನಡ ಸಮಕಾಲಿಕ ಅನುವಾದ

4 ಇನ್ನು ಕೆಲವರು, “ಅರಸನಿಗೆ ತೆರಿಗೆಯನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ, ನಮ್ಮ ದ್ರಾಕ್ಷಿತೋಟಗಳ ಮೇಲೆಯೂ ಸಾಲವನ್ನು ತೆಗೆದುಕೊಳ್ಳಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮತ್ತು ಕೆಲವರು, “ಅರಸನ ಸರ್ಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಾವು ನಮ್ಮ ಹೊಲ ದ್ರಾಕ್ಷಿತೋಟಗಳ ಮೇಲೆ ಹಣವನ್ನು ಸಾಲವಾಗಿ ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮತ್ತೆ ಕೆಲವರು “ಸರಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಮ್ಮ ಹೊಲ, ತೋಟಗಳ ಮೇಲೆ ಸಾಲ ತೆಗೆದುಕೊಳ್ಳಬೇಕಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮತ್ತು ಕೆಲವರು - ಸರಕಾರಕ್ಕೆ ಕಂದಾಯಕೊಡುವದಕ್ಕಾಗಿ ನಾವು ನಮ್ಮ ಹೊಲ ತೋಟಗಳ ಮೇಲೆ ಸಾಲ ತೆಗೆದುಕೊಳ್ಳಬೇಕಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇನ್ನೂ ಕೆಲವರು, “ನಮ್ಮ ಹೊಲಗದ್ದೆಗಳ ಮೇಲೆ ಅರಸನಿಗೆ ತೆರಿಗೆ ಕೊಡಬೇಕಾಗಿದೆ. ಆದರೆ ಕೊಡಲು ನಮ್ಮಲ್ಲಿ ಏನೂ ಇಲ್ಲ. ಬೇರೆಯವರಿಂದ ಎರವಲು ಪಡೆದುಕೊಂಡು ಕೊಡಬೇಕಾಗಿದೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:4
9 ತಿಳಿವುಗಳ ಹೋಲಿಕೆ  

ಆ ಪಟ್ಟಣವನ್ನೂ, ಅದರ ಗೋಡೆಗಳನ್ನೂ ಕಟ್ಟುವುದು ಮುಗಿದರೆ, ಅವರು ಕಪ್ಪ, ತೆರಿಗೆ, ಸುಂಕಗಳನ್ನು ಕೊಡುವುದಿಲ್ಲ. ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.


ಇದಲ್ಲದೆ ಯೆರೂಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ಯೂಫ್ರೇಟೀಸ್ ನದಿಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.


ನಮ್ಮ ಪಾಪಗಳ ನಿಮಿತ್ತ ನೀವು ನಮ್ಮ ಮೇಲೆ ಇಟ್ಟ ಅರಸರಿಗೆ ಅದರ ಹುಟ್ಟುವಳಿ ಬಹಳವಾಗಿ ಹೋಗುತ್ತಿದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಮೇಲೆಯೂ, ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ. ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.


ಇದಲ್ಲದೆ, ಆ ದೇವಾಲಯದ ಯಾಜಕ, ಲೇವಿಯ, ಗಾಯಕ, ದ್ವಾರಪಾಲಕ, ಚಾಕರ ಮುಂತಾದ ಸೇವಕರಲ್ಲಿ ಯಾವನಿಂದಲೂ ಶುಲ್ಕ, ತೆರಿಗೆ, ಸುಂಕ, ಇವುಗಳನ್ನು ವಸೂಲಿ ಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.”


ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು.


ಅವರು ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ, ಎಫ್ರಾಯೀಮ್ಯರ ಮಧ್ಯದಲ್ಲಿ ಕಾನಾನ್ಯರು ಈವರೆಗೂ ಅವರಲ್ಲಿ ದಾಸತ್ವದಲ್ಲಿದ್ದುಕೊಂಡು ಕೆಲಸಮಾಡುವವರಾಗಿದ್ದಾರೆ.


ಕೆಲವರು, “ಈ ಬರಗಾಲದಲ್ಲಿ ನಾವು ಧಾನ್ಯ ಕೊಂಡುಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ, ಮನೆಗಳನ್ನೂ ಒತ್ತೆ ಇಟ್ಟೆವು,” ಎಂದರು.


ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ; ಸಾಲಗಾರನು ಸಾಲಕೊಟ್ಟವನಿಗೆ ಗುಲಾಮನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು