Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:5 - ಕನ್ನಡ ಸಮಕಾಲಿಕ ಅನುವಾದ

5 ನಾವು ನಮ್ಮ ಸಹೋದರರ ಹಾಗೆಯೇ ಒಂದೇ ರಕ್ತಮಾಂಸದವರಾಗಿದ್ದೇವೆ; ನಮ್ಮ ಮಕ್ಕಳು ಅವರ ಮಕ್ಕಳ ಹಾಗೆಯೇ ಕ್ಷೇಮವಾಗಿದ್ದಾರೆ; ಆದರೂ ನಮ್ಮ ಪುತ್ರಪುತ್ರಿಯರನ್ನೂ ಗುಲಾಮರಾಗುವುದಕ್ಕೆ ತಂದಿದ್ದೇವೆ. ನಮ್ಮ ಪುತ್ರಿಯರಲ್ಲಿ ಕೆಲವರು ಆಗಲೇ ಗುಲಾಮರಾಗಿದ್ದಾರೆ. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಏಕೆಂದರೆ ನಮ್ಮ ಹೊಲಗಳೂ, ದ್ರಾಕ್ಷಿ ತೋಟಗಳೂ ಪರರ ಪಾಲಾಗಿವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದರೂ ನಮ್ಮ ಸಹೋದರರ ಕುಲವೂ ನಮ್ಮ ಕುಲವೂ, ಅವರ ಮಕ್ಕಳೂ, ನಮ್ಮ ಮಕ್ಕಳೂ ಒಂದೇ ಆಗಿದ್ದೇವೆ. ಆದರೆ ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು. ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಅಪಹರಿಸಿದ್ದಾರೆ. ನಮ್ಮ ಪ್ರಯತ್ನವೆಲ್ಲ ವ್ಯರ್ಥವಾಯಿತು. ನಮ್ಮ ಹೊಲ ದ್ರಾಕ್ಷಿತೋಟಗಳು ಪರರಿಗೆ ಅಧೀನವಾದವು ಎಂದು ಗೊಣಗಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ನಮ್ಮ ಸಹೋದರರ ಕುಲಕ್ಕೂ ನಮ್ಮ ಕುಲಕ್ಕೂ ಅವರ ಮಕ್ಕಳಿಗೂ ನಮ್ಮ ಮಕ್ಕಳಿಗೂ ಏನು ಹೆಚ್ಚುಕಡಿಮೆ? ನೋಡಿ, ನಾವು ನಮ್ಮ ಗಂಡುಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು; ನಮ್ಮ ಹೆಣ್ಣುಮಕ್ಕಳಲ್ಲಿ ಕೆಲವರನ್ನು ಈಗಾಗಲೇ ಅಪಹರಿಸಿದ್ದಾರೆ; ನಮ್ಮ ಪ್ರಯತ್ನವೇನೂ ಸಾಗುವುದಿಲ್ಲ; ನಮ್ಮ ಹೊಲತೋಟಗಳು ಪರಾಧೀನವಾಗಿವೆ,” ಎಂದು ಎಲ್ಲಾ ಗೊಣಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ನಮ್ಮ ಸಹೋದರರ ಕುಲಕ್ಕೂ ನಮ್ಮ ಕುಲಕ್ಕೂ ಅವರ ಮಕ್ಕಳಿಗೂ ನಮ್ಮ ಮಕ್ಕಳಿಗೂ ಏನು ಹೆಚ್ಚುಕಡಿಮೆ? ನೋಡಿರಿ, ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು; ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಇಷ್ಟರಲ್ಲೇ ಅಪಹರಿಸಿದರು; ನಮ್ಮ ಯತ್ನವೇನೂ ಸಾಗುವದಿಲ್ಲ. ನಮ್ಮ ಹೊಲತೋಟಗಳು ಪರಾಧೀನವಾದವು ಎಂದು ಗುಣುಗುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಆ ಧನಿಕರನ್ನು ನೋಡಿರಿ. ನಾವೂ ಅವರಂತೆಯೇ ಇದ್ದೇವೆ. ನಮ್ಮ ಮಕ್ಕಳು ಅವರ ಮಕ್ಕಳಂತೆಯೇ ಇದ್ದಾರೆ. ಆದರೆ ನಾವು ಮಾತ್ರ ನಮ್ಮ ಗಂಡುಹೆಣ್ಣು ಮಕ್ಕಳನ್ನು ಗುಲಾಮರಾಗಿ ಮಾರುವ ಸ್ಥಿತಿಯಲ್ಲಿದ್ದೇವೆ. ನಮ್ಮಲ್ಲಿ ಕೆಲವರು ಆಗಲೇ ತಮ್ಮ ಹೆಣ್ಣುಮಕ್ಕಳನ್ನು ಗುಲಾಮರನ್ನಾಗಿ ಮಾರಿದ್ದಾರೆ. ನಮಗೆ ಬೇರೆ ಮಾರ್ಗವೇ ಇಲ್ಲ. ನಮ್ಮ ಹೊಲಗದ್ದೆಗಳನ್ನು ಯಾವಾಗಲೋ ಕಳೆದುಕೊಂಡಿದ್ದೇವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:5
10 ತಿಳಿವುಗಳ ಹೋಲಿಕೆ  

ಪ್ರವಾದಿಗಳ ಗುಂಪಿನಲ್ಲಿದ್ದ ಒಬ್ಬ ಪ್ರವಾದಿಯ ಹೆಂಡತಿ ಎಲೀಷನಿಗೆ ಕೂಗಿ, “ನಿನ್ನ ದಾಸನಾದ ನನ್ನ ಗಂಡನು ಮರಣಹೊಂದಿದನು. ನಿನ್ನ ದಾಸನು ಯೆಹೋವ ದೇವರಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ. ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸರಾಗಿ ತೆಗೆದುಕೊಳ್ಳಲು ಬಂದಿದ್ದಾನೆ,” ಎಂದಳು.


ಹಸಿದವರಿಗೆ ಅನ್ನ ಕೊಡುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬಟ್ಟೆಯಿಲ್ಲದವರನ್ನು ಕಂಡಾಗ ಅವರಿಗೆ ಬಟ್ಟೆ ಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೇ ನನಗೆ ಇಷ್ಟಕರವಾದ ಉಪವಾಸ ವ್ರತ?


ಬನ್ನಿರಿ, ಇಷ್ಮಾಯೇಲರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಏಕೆಂದರೆ ಅವನು ನಮ್ಮ ಸಹೋದರನೂ ನಮ್ಮ ದೇಹವೂ ರಕ್ತವೂ ಆಗಿದ್ದಾನೆ,” ಎಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.


ಆದರೆ ಕೊಡುವುದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅರಸನು ಅಪ್ಪಣೆಕೊಟ್ಟನು.


ಆಗ ಲಾಬಾನನು ಅವನಿಗೆ, “ನಿಶ್ಚಯವಾಗಿ ನೀನು ನನ್ನ ರಕ್ತಸಂಬಂಧಿಯಾಗಿದ್ದೀ,” ಎಂದನು. ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.


ಯೆಹೋವ ದೇವರು ಹೇಳುವುದೇನೆಂದರೆ, “ನಾನು ಬಿಟ್ಟುಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೆನು? ನಿಮ್ಮ ಪಾಪಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ. ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.


ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ; ಸಾಲಗಾರನು ಸಾಲಕೊಟ್ಟವನಿಗೆ ಗುಲಾಮನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು