Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:11 - ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ನಾನು, “ನನ್ನಂಥಾ ಮನುಷ್ಯನು ಓಡಿ ಹೋಗುವನೋ? ನನ್ನಂಥವನು ಬದುಕಬೇಕೆಂದು ದೇವರ ಆಲಯದೊಳಗೆ ಹೋಗಬಹುದೇ? ನಾನು ಒಳಗೆ ಹೋಗುವುದಿಲ್ಲ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು, “ನನ್ನಂಥ ಪುರುಷನು ಓಡಿಹೋಗುವುದು ಯೋಗ್ಯವೋ? ಇದಲ್ಲದೆ, ನನ್ನಂಥವನು ಪ್ರಾಣರಕ್ಷಣೆಗಾಗಿ ಗರ್ಭಗುಡಿ ಪ್ರವೇಶಿಸಬಹುದೇ? ನಾನು ಬರುವುದಿಲ್ಲ” ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ನಾನು, “ನನ್ನಂಥ ಗಂಡು ಓಡಿಹೋಗಿ ಅವಿತುಕೊಳ್ಳುವುದು ಸರಿಯೇ? ಇದಲ್ಲದೆ ಪ್ರಾಣರಕ್ಷಣೆಗಾಗಿ ಗರ್ಭಗುಡಿಯನ್ನು ನಾನು ಪ್ರವೇಶಿಸಬಹುದೇ? ಇಲ್ಲ, ನಾನು ಬರುವುದಿಲ್ಲ,” ಎಂದು ಉತ್ತರಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು - ನನ್ನಂಥ ಪುರುಷನು ಓಡಿಹೋಗುವದು ಯೋಗ್ಯವೋ? ಇದಲ್ಲದೆ ನನ್ನಂಥವನು ಪ್ರಾಣ ರಕ್ಷಣೆಗಾಗಿ ಪವಿತ್ರಸ್ಥಾನವನ್ನು ಪ್ರವೇಶಿಸುವನೇ? ನಾನು ಬರುವದಿಲ್ಲ ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ನಾನು ಶೆಮಾಯನಿಗೆ, “ನನ್ನಂಥ ಪುರುಷನು ಓಡಿಹೋಗಬೇಕೆ? ನನ್ನಂಥ ಸಾಮಾನ್ಯ ವ್ಯಕ್ತಿ ದೇವಾಲಯಕ್ಕೆ ಹೋಗಿ ಅವಿತುಕೊಳ್ಳಬಾರದು. ನಾನು ಬರುವುದಿಲ್ಲ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:11
20 ತಿಳಿವುಗಳ ಹೋಲಿಕೆ  

ಆಗ ಪೌಲನು, “ನೀವೇಕೆ ಅತ್ತು ನನ್ನ ಹೃದಯ ಒಡೆಯುತ್ತೀರಿ? ಬಂಧಿತನಾಗಲಷ್ಟೇ ಅಲ್ಲ, ನಮ್ಮ ಕರ್ತ ಯೇಸುವಿನ ಹೆಸರಿನ ನಿಮಿತ್ತ ಯೆರೂಸಲೇಮಿನಲ್ಲಿ ನಾನು ಸಾಯಲಿಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.


ನಿಮ್ಮ ವಿಶ್ವಾಸದಿಂದ ಬರುವ ಯಜ್ಞದ ಮೇಲೆಯೂ ಸೇವೆಯ ಮೇಲೆಯೂ ನಾನು ಪಾನಸಮರ್ಪಣೆಯಾದರೂ ಸಹ ಹರ್ಷದಿಂದ ನಿಮ್ಮೆಲ್ಲರೊಡನೆ ಆನಂದಿಸುವೆನು.


ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.


ಅವರ ಹೃದಯವು ಸುರಕ್ಷಿತವಾಗಿರುವುದು. ಅವರು ತಮ್ಮ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವರು, ಭಯಪಡರು.


ನಿಶ್ಚಯವಾಗಿ ನೀತಿವಂತರು ಎಂದೆಂದಿಗೂ ಕದಲರು; ನೀತಿವಂತರು ನಿತ್ಯವಾಗಿ ಜ್ಞಾಪಕದಲ್ಲಿ ಇರುವರು.


ನಂಬಿಕೆಯಿಂದಲೇ ಮೋಶೆ ಅರಸನ ಕೋಪಕ್ಕೆ ಭಯಪಡದೆ ಈಜಿಪ್ಟನ್ನು ಬಿಟ್ಟುಹೋದನು. ಏಕೆಂದರೆ ಅವನು ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿದ್ದನು.


ಅವನು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಹಾಗಿದ್ದನು. ನೀವು ನನಗೆ ಮಾಡಲು ಸಾಧ್ಯವಾಗದೆ ಹೋದ ಸಹಾಯವನ್ನು ತಾನೇ ಪೂರ್ತಿ ಮಾಡುವುದಕ್ಕಾಗಿ, ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಗುರಿಪಡಿಸಿಕೊಂಡನು.


ಸತ್ತ ನೊಣಗಳು ಸುಗಂಧ ತೈಲವನ್ನು ದುರ್ವಾಸನೆಗೆ ಒಳಪಡಿಸುತ್ತದೆ. ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮಾನಗಳನ್ನು ಕೆಡಿಸಿಬಿಡುತ್ತದೆ.


ಹೀಗೆ, “ಅವರ ಕೈಗಳು ಬಲಹೀನವಾಗುವುವು. ಕೆಲಸವು ಪೂರ್ತಿಯಾಗುವುದಿಲ್ಲ,” ಎಂದುಕೊಂಡು ಅವರೆಲ್ಲರು ನಮ್ಮನ್ನು ಭಯಪಡಿಸಿದರು. ನಾನಾದರೋ, “ದೇವರೇ, ನನ್ನ ಕೈಗಳನ್ನು ಬಲಪಡಿಸಿರಿ,” ಎಂದು ಪ್ರಾರ್ಥಿಸಿದೆನು.


ಆದಕಾರಣ ನಾನು ಅವರ ಬಳಿಗೆ ದೂತರನ್ನು ಕಳುಹಿಸಿ, “ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ, ಬರಲಾರೆನು. ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಕೆಲಸವು ನಿಂತುಹೋಗುವುದು,” ಎಂದು ಹೇಳಿದೆನು.


ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಫಿಲಿಷ್ಟಿಯನನ್ನು ಹೊಡೆದನು. ಯೆಹೋವ ದೇವರು ಸಮಸ್ತ ಇಸ್ರಾಯೇಲರಿಗೋಸ್ಕರ ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ನೀನೂ ಕಂಡು ಸಂತೋಷಪಟ್ಟೆ. ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರ್ದೋಷಿಯ ರಕ್ತಕ್ಕೆ ವಿರೋಧವಾಗಿ ಅಪರಾಧವನ್ನು ಮಾಡುವುದೇಕೆ?” ಎಂದನು.


ಸೌಲನು ಸ್ತೆಫನನ ಕೊಲೆಗೆ ಸಮ್ಮತಿಸಿದ್ದನು. ಆ ದಿನವೇ ಯೆರೂಸಲೇಮಿನ ಸಭೆಗೆ ವಿರೋಧವಾಗಿ ಮಹಾಹಿಂಸೆ ಪ್ರಾರಂಭವಾಯಿತು, ಅಪೊಸ್ತಲರನ್ನು ಬಿಟ್ಟು ಉಳಿದವರೆಲ್ಲರೂ ಯೂದಾಯ ಮತ್ತು ಸಮಾರ್ಯ ಪ್ರಾಂತಗಳಿಗೆ ಚದರಿಹೋದರು.


ದೇಹಾತ್ಮದಂಥ ಅದರ ಉದ್ಯಾನವನವನ್ನೂ, ಫಲಭರಿತ ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು.


ಆಗ ದೇವರು ಅವನನ್ನು ಕಳುಹಿಸಲಿಲ್ಲ. ಟೋಬೀಯನೂ, ಸನ್ಬಲ್ಲಟನೂ ಶೆಮಾಯನಿಗೆ ಲಂಚಕೊಟ್ಟು, ನನಗೆ ವಿರೋಧವಾಗಿ ಈ ಪ್ರವಾದನೆ ಹೇಳಿಸಿದರೆಂದು ನನಗೆ ಗೊತ್ತಾಯಿತು.


ಇದಲ್ಲದೆ ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನೂ ಅವನ ಪುತ್ರರನ್ನೂ ನೇಮಿಸಬೇಕು. ಪರಕೀಯನು ಸಮೀಪಿಸಿದರೆ ಸಾಯಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು