Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:12 - ಕನ್ನಡ ಸಮಕಾಲಿಕ ಅನುವಾದ

12 ಆಗ ದೇವರು ಅವನನ್ನು ಕಳುಹಿಸಲಿಲ್ಲ. ಟೋಬೀಯನೂ, ಸನ್ಬಲ್ಲಟನೂ ಶೆಮಾಯನಿಗೆ ಲಂಚಕೊಟ್ಟು, ನನಗೆ ವಿರೋಧವಾಗಿ ಈ ಪ್ರವಾದನೆ ಹೇಳಿಸಿದರೆಂದು ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ಸೂಕ್ಷ್ಮವಾಗಿ ವಿಚಾರ ಮಾಡಿದಾಗ ನನ್ನ ವಿಷಯವಾಗಿ ಆ ಕಾಲ, ಜ್ಞಾನ, ವಚನವನ್ನು ಉಚ್ಚರಿಸುವುದಕ್ಕೂ ಪ್ರವಾದನೆ ನುಡಿಯುವುದಕ್ಕೂ ಇವನನ್ನು ಪ್ರೇರೇಪಿಸಿದವನು ದೇವರಲ್ಲ, ಟೋಬೀಯನೂ, ಸನ್ಬಲ್ಲಟನೂ ಇವನಿಗೆ ಲಂಚ ಕೊಟ್ಟು ಹಾಗೆ ಹೇಳಿದ್ದಾರೆ ಎಂದು ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾನು ಸೂಕ್ಷ್ಮವಾಗಿ ವಿಚಾರಮಾಡಿದಾಗ, ನನ್ನ ಬಗ್ಗೆ ಆ ಕಾಲಜ್ಞಾನ ವಚನವನ್ನು ಉಚ್ಚರಿಸುವುದಕ್ಕೆ ಇವನನ್ನು ಪ್ರೇರಿಸಿದವನು ದೇವರಲ್ಲ; ಟೋಬೀಯನೂ ಸನ್ಬಲ್ಲಟನೂ ಇವನಿಗೆ ಲಂಚಕೊಟ್ಟು ಹಾಗೆ ಹೇಳಿಸಿದರೆಂದು ನನಗೆ ಗೊತ್ತು ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ಸೂಕ್ಷ್ಮವಾಗಿ ವಿಚಾರಮಾಡಿದಾಗ ನನ್ನ ವಿಷಯವಾಗಿ ಆ ಕಾಲಜ್ಞಾನವಚನವನ್ನು ಉಚ್ಚರಿಸುವದಕ್ಕೆ ಇವನನ್ನು ಪ್ರೇರಿಸಿದವನು ದೇವರಲ್ಲ, ಟೋಬೀಯನೂ ಸನ್ಬಲ್ಲಟನೂ ಇವನಿಗೆ ಲಂಚಕೊಟ್ಟು ಹಾಗೆ ಹೇಳಿಸಿದರು ಎಂದು ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಶೆಮಾಯನನ್ನು ದೇವರು ಕಳುಹಿಸಿಲ್ಲವೆಂದು ನನಗೆ ಚೆನ್ನಾಗಿ ಗೊತ್ತಿತ್ತು. ಟೋಬೀಯ ಮತ್ತು ಸನ್ಬಲ್ಲಟ್ ಅವನಿಗೆ ಲಂಚಕೊಟ್ಟು ಹಾಗೆ ಹೇಳಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:12
20 ತಿಳಿವುಗಳ ಹೋಲಿಕೆ  

ಏಕೆಂದರೆ ನಾನು ಯಾವನನ್ನು ದುಃಖಪಡಿಸಲಿಲ್ಲವೋ, ಆ ನೀತಿವಂತರ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು, ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವರನ್ನು ಪ್ರೋತ್ಸಾಹಿಸಿದ್ದೀರಿ.


ಸರಕುಗಳಾದ ದಾಲ್ಚಿನ್ನಿ ಮತ್ತು ಮಸಾಲೆ, ಧೂಪ, ಸುಗಂಧ ತೈಲ, ರಕ್ತಬೋಳ, ದ್ರಾಕ್ಷಾರಸ ಮತ್ತು ಓಲಿವ್ ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು ಮತ್ತು ಕುರಿಗಳು, ಕುದುರೆಗಳು, ವಾಹನಗಳು, ಗುಲಾಮರು ಹಾಗೂ ಮನುಷ್ಯರು ಇವುಗಳನ್ನೆಲ್ಲಾ ಆ ವರ್ತಕರು ಅವಳಿಗೆ ಮಾರುತ್ತಿದ್ದರು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ, ಆದರೆ ದೇವರ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆ ಮಾಡಿರಿ.


ಏಕೆಂದರೆ ಸಭಾಧ್ಯಕ್ಷನು ದೇವರ ಕಾರ್ಯಭಾರವನ್ನು ಉಳ್ಳವನಾಗಿರುವುದರಿಂದ ನಿಂದಾರಹಿತನಾಗಿರಬೇಕು; ಅವನು ಗರ್ವಿಷ್ಠನೂ ಮುಂಗೋಪಿಯೂ ಮದ್ಯಪಾನ ಮಾಡುವವನೂ ಹೊಡೆದಾಡುವವನೂ ನೀಚಲಾಭವನ್ನು ಆಶಿಸುವವನೂ ಆಗಿರಬಾರದು.


ಅವನು ಮದ್ಯಪಾನ ಮಾಡುವವನಾಗಿರಬಾರದು, ಹೊಡೆದಾಡುವವನಾಗಿರಬಾರದು. ಆದರೆ ಸಾತ್ವಿಕನೂ ಕುತರ್ಕ ಮಾಡದವನೂ ಹಣದಾಶೆಯಿಲ್ಲದವನೂ ಆಗಿರಬೇಕು.


ಒಬ್ಬನಿಗೆ ಅದ್ಭುತಕಾರ್ಯಗಳ ಶಕ್ತಿಯೂ ಒಬ್ಬನಿಗೆ ಪ್ರವಾದನೆಯೂ ಒಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವೂ ಒಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಶಕ್ತಿಯೂ ಮತ್ತೊಬ್ಬನಿಗೆ ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವೂ ಕೊಡಲಾಗುತ್ತದೆ.


ಆದರೆ ಆತ್ಮಿಕ ಮನುಷ್ಯನು ಎಲ್ಲವನ್ನೂ ವಿವೇಚಿಸಿಕೊಳ್ಳುತ್ತಾನೆ. ಆದರೆ ಅವನಿಗೆ ಬೇರೆ ಯಾರೂ ತೀರ್ಪುಮಾಡಲಾಗದು.


ನಾನು ಯಾರ ಬೆಳ್ಳಿ ಬಂಗಾರಕ್ಕಾಗಲಿ, ಬಟ್ಟೆಗಾಗಲಿ ಆಶೆಪಡಲಿಲ್ಲ.


ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.


ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಜವೆಗೋಧಿಗೂ, ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಗೊಳಿಸುವಿರೋ?


ನಾನು ಮಾತಾಡದೇ ಇದ್ದರೂ, “ಯೆಹೋವ ದೇವರು ಇಂತೆನ್ನುತ್ತಾರೆ,” ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನ ಮಿಥ್ಯ, ನೀವು ಹೇಳಿದ ಕಣಿಯು ಸುಳ್ಳು.


ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನೆಂದರೆ, “ಹನನೀಯನೇ, ಕೇಳು. ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ. ಆದರೆ ನೀನು ಈ ಜನರನ್ನು ಸುಳ್ಳಿನಲ್ಲಿ ಭರವಸೆ ಇಡುವಂತೆ ಮಾಡುತ್ತೀ.


“ ‘ನನಗೆ ಕನಸು ಬಿತ್ತು, ಕನಸು ಬಿತ್ತು,’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿಗೊಡಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ. ಯೆಹೋವ ದೇವರ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನವನ್ನು ಹೇಳುತ್ತಾರೆ.


ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳುಗಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಆಜ್ಞೆಕೊಡಲಿಲ್ಲ. ಅವರ ಸಂಗಡ ಮಾತಾಡಲಿಲ್ಲ. ಸುಳ್ಳಿನ ದರ್ಶನವನ್ನೂ, ಶಕುನವನ್ನೂ, ಮಾಯ ಮಂತ್ರವನ್ನೂ, ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.


ಹೌದು, ಎಂದಿಗೂ ಸಾಕೆನ್ನದ ಹೊಟ್ಟೆಬಾಕ ನಾಯಿಗಳು ಮತ್ತು ಅವರು ಗ್ರಹಿಕೆ ಇಲ್ಲದ ಕುರುಬರು, ಅವರೆಲ್ಲರೂ ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ, ಪ್ರತಿಯೊಬ್ಬನೂ ತನ್ನ ಲಾಭ ಸಿಕ್ಕುವ ಕಡೆಗೂ ತಿರುಗಿಕೊಳ್ಳುವನು.


ಪ್ರಿಯ ಸ್ನೇಹಿತರೇ, ಅನೇಕ ಸುಳ್ಳು ಪ್ರವಾದಿಗಳು ಲೋಕದೊಳಗೆ ಹೋಗಿರುವುದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ಅದಕ್ಕೆ ನಾನು, “ನನ್ನಂಥಾ ಮನುಷ್ಯನು ಓಡಿ ಹೋಗುವನೋ? ನನ್ನಂಥವನು ಬದುಕಬೇಕೆಂದು ದೇವರ ಆಲಯದೊಳಗೆ ಹೋಗಬಹುದೇ? ನಾನು ಒಳಗೆ ಹೋಗುವುದಿಲ್ಲ,” ಎಂದೆನು.


ನಾನು ಭಯಪಟ್ಟು ಹೀಗೆ ಮಾಡಿ ಪಾಪಮಾಡುವಂತೆಯೂ ಅವರು ನನ್ನನ್ನು ನಿಂದಿಸುವುದಕ್ಕೆ ಅಪಕೀರ್ತಿಯ ಕಾರಣವು ಅವರಿಗೆ ಸಿಕ್ಕುವಂತೆಯೂ ಶೆಮಾಯನಿಗೆ ಲಂಚಕೊಟ್ಟಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು