Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:13 - ಕನ್ನಡ ಸಮಕಾಲಿಕ ಅನುವಾದ

13 ನಾನು ಭಯಪಟ್ಟು ಹೀಗೆ ಮಾಡಿ ಪಾಪಮಾಡುವಂತೆಯೂ ಅವರು ನನ್ನನ್ನು ನಿಂದಿಸುವುದಕ್ಕೆ ಅಪಕೀರ್ತಿಯ ಕಾರಣವು ಅವರಿಗೆ ಸಿಕ್ಕುವಂತೆಯೂ ಶೆಮಾಯನಿಗೆ ಲಂಚಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಅಂಜಿಕೊಂಡು ಇವನ ಮಾತಿನಂತೆ ನಡೆದು ದೋಷಿಯಾಗಿ ತಮ್ಮ ನಿಂದೆಗೂ, ಕೆಟ್ಟ ಹೆಸರಿಗೂ ಒಳಗಾಗಲಿ ಎಂದು ಅವರು ಇವನಿಗೆ ಲಂಚ ಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ಅಂಜಿಕೊಂಡು, ಇವನ ಮಾತಿನಂತೆ ನಡೆದು ದೋಷಿಯಾಗಿ, ತಮ್ಮ ನಿಂದೆಗೂ ಕೆಟ್ಟ ಹೆಸರಿಗೂ ಗುರಿಯಾಗಲಿ ಎಂದು ಅವರು ಈ ಶೆಮಾಯನಿಗೆ ಲಂಚಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಅಂಜಿಕೊಂಡು ಇವನ ಮಾತಿನಂತೆ ನಡೆದು ದೋಷಿಯಾಗಿ ತಮ್ಮ ನಿಂದೆಗೂ ಕೆಟ್ಟ ಹೆಸರಿಗೂ ಒಳಗಾಗಲಿ ಎಂದು ಅವರು ಇವನಿಗೆ ಲಂಚಕೊಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ಭಯಗೊಂಡು ದೇವಾಲಯದೊಳಗೆ ಓಡಿಹೋಗಿ ದೋಷಿಯಾಗುವಂತೆಯೂ ನನ್ನ ಮೇಲೆ ಹಾಗೆ ಅಪರಾಧ ಹೊರಿಸಲು ತಮಗೆ ಕಾರಣ ದೊರೆಯುವಂತೆಯೂ ಅವರು ಶೆಮಾಯನನ್ನು ಉಪಯೋಗಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:13
24 ತಿಳಿವುಗಳ ಹೋಲಿಕೆ  

ಏಕೆಂದರೆ ಅನೇಕರ ಚಾಡಿಯನ್ನು ಕೇಳಿದೆನು. “ಸುತ್ತಲೂ ಭಯವಿದೆ. ಅವನನ್ನು ಖಂಡಿಸಿರಿ! ಅವನನ್ನು ಖಂಡಿಸೋಣ!” ನನ್ನ ಆಪ್ತರೆಲ್ಲರೂ ನಾನು ಕುಂಟುವುದನ್ನು ನೋಡಿಕೊಳ್ಳುತ್ತಾ ಒಂದು ವೇಳೆ ಅವನು ಮೋಸಗೊಂಡಾನು. “ಆಗ ನಾವು ಅವನನ್ನು ಗೆದ್ದು, ಅವನಲ್ಲಿ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.”


ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.


ದೇವರು ನಮಗೆ ಕೊಟ್ಟಿರುವ ಆತ್ಮವು ಶಕ್ತಿ, ಪ್ರೀತಿ ಹಾಗೂ ಸ್ವಶಿಸ್ತು ಆತ್ಮವೇ ಹೊರತು ಭಯದ ಆತ್ಮವಲ್ಲ.


ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.


ತನ್ನ ನೆರೆಯವನನ್ನು ಸುಮ್ಮನೇ ಹೊಗಳುತ್ತಿರುವವನು, ನೆರೆಯವನ ಕಾಲಿಗೆ ಬಲೆಯನ್ನು ಒಡ್ಡುತ್ತಾನೆ.


ಅದರಲ್ಲಿ ಹೀಗೆ ಬರೆದಿತ್ತು: “ಗೆಷೆಮ್ ಎಂಬವನು ನನಗೆ ತಿಳಿಸಿದ ಪ್ರಕಾರ ನೀನೂ, ಯೆಹೂದ್ಯರೂ ತಿರುಗಿಬೀಳಲು ಯೋಚಿಸುತ್ತೀರಿ. ಆದಕಾರಣ ಈ ಮಾತುಗಳ ಪ್ರಕಾರ ನೀನು ಅವರಿಗೆ ಅರಸನಾಗಿರುವ ಹಾಗೆ ಗೋಡೆಯನ್ನು ಪುನಃ ಕಟ್ಟಿಸುತ್ತಿದ್ದೀ.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ನಿಂದೆಗೆ ಹೊರತಾದ ಸ್ವಸ್ಥ ಮಾತುಗಳನ್ನಾಡುವವನಾಗಿರು. ಇದರಿಂದ ವಿರೋಧಿಸುವವನು ನಿನ್ನ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕಾಗದೆ ನಾಚಿಕೆ ಪಡುವನು.


ಆದ್ದರಿಂದ ಯೌವನಸ್ಥ ವಿಧವೆಯರು ಮದುವೆಮಾಡಿಕೊಂಡು, ಮಕ್ಕಳನ್ನು ಹೆತ್ತು, ಮನೆಯ ಕೆಲಸಮಾಡಿ, ವಿರೋಧಿಯ ನಿಂದೆಗೆ ಆಸ್ಪದ ಕೊಡಬಾರದೆಂಬುದೇ ನನ್ನ ಅಪೇಕ್ಷೆ.


ತಾವು ಮಾಡುವ ಕಾರ್ಯಗಳ ಬಗ್ಗೆ ನಮ್ಮೊಂದಿಗೆ ಸರಿಸಮಾನವೆಂದು ಹೊಗಳಿಕೊಳ್ಳಲು ಅವಕಾಶವನ್ನು ಹುಡುಕುವವರಿಗೆ, ಯಾವ ಆಸ್ಪದವೂ ಸಿಗದಂತೆ ನಾನು ಮಾಡುತ್ತಿರುವುದನ್ನು ನಿಲ್ಲಿಸದೆ, ಇನ್ನು ಮುಂದೆಯೂ ಮಾಡುತ್ತಿರುವೆನು.


ಸುಳ್ಳುಸಾಕ್ಷಿಗಳನ್ನು ಹಾಜರುಪಡಿಸಿ, “ಈ ಮನುಷ್ಯನು ಈ ಪವಿತ್ರಸ್ಥಳಕ್ಕೂ ಮೋಶೆಯ ನಿಯಮಕ್ಕೂ ವಿರೋಧವಾಗಿ ಮಾತನಾಡುತ್ತಲೇ ಇದ್ದಾನೆ.


ಆಗ ಮುಖ್ಯಯಾಜಕರೂ ಆಲೋಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಯೇಸುವನ್ನು ಕೊಲ್ಲಿಸಬೇಕೆಂದು ಸುಳ್ಳುಸಾಕ್ಷಿಗಾಗಿ ಹುಡುಕಿದರು.


ಆಗ ಫರಿಸಾಯರು ಹೊರಟುಹೋಗಿ ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.


ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.


ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ.


“ಆದ್ದರಿಂದ ಈಗ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು, ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಅವರ ಸಂಗಡ ಮಾತನಾಡು. ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಗೆ ಭಯಪಡಬೇಡ.


“ನೀನು ಯಾರಿಗೆ ಹೆದರಿ, ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸ ಮಾಡಿರುವೆ. ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ, ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?


ನೀತಿಯನ್ನು ಅರಿತು, ನನ್ನ ನಿಯಮವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ, ನನಗೆ ಕಿವಿಗೊಡಿರಿ. ಮನುಷ್ಯರ ನಿಂದೆಗೆ ಭಯಪಡಬೇಡಿರಿ, ಅವರ ದೂಷಣೆಗೆ ಹೆದರಬೇಡಿರಿ.


ಅಮೂಲ್ಯವಾದ ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ. ಒಬ್ಬನ ಜನ್ಮ ದಿನಕ್ಕಿಂತ ಮರಣದ ದಿನವೇ ಮೇಲು.


ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ; ಬೆಳ್ಳಿಬಂಗಾರಕ್ಕಿಂತಲೂ ಗೌರವದಿಂದಿರುವುದು ಉತ್ತಮ.


ಆಗ ದೇವರು ಅವನನ್ನು ಕಳುಹಿಸಲಿಲ್ಲ. ಟೋಬೀಯನೂ, ಸನ್ಬಲ್ಲಟನೂ ಶೆಮಾಯನಿಗೆ ಲಂಚಕೊಟ್ಟು, ನನಗೆ ವಿರೋಧವಾಗಿ ಈ ಪ್ರವಾದನೆ ಹೇಳಿಸಿದರೆಂದು ನನಗೆ ಗೊತ್ತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು