ನೆಹೆಮೀಯ 6:18 - ಕನ್ನಡ ಸಮಕಾಲಿಕ ಅನುವಾದ18 ಏಕೆಂದರೆ ಅವನು ಆರಹನ ಮಗ ಶೆಕನ್ಯನ ಅಳಿಯನಾದುದರಿಂದ ಅವನ ಮಗ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ತೆಗೆದುಕೊಂಡಿದ್ದರಿಂದಲೂ ಯೆಹೂದದಲ್ಲಿ ಅನೇಕರು ಅವನಿಗೆ ನಂಬಿಗಸ್ತರಾಗಿರುವುದಾಗಿ ಪ್ರಮಾಣ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಏಕೆಂದರೆ ಅವನು ಆರಹನ ಮಗನಾದ ಶೆಕನ್ಯನ ಅಳಿಯನಾಗಿದ್ದ ಹಾಗೂ ಅವನ ಮಗನಾದ ಯೆಹೋಹಾನಾನನೆಂಬ ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ಮದುವೆ ಮಾಡಿಕೊಂಡಿದ್ದನು. ಆದುದರಿಂದ ಯೆಹೂದ್ಯರಲ್ಲಿ ಅನೇಕರು ಅವನೊಂದಿಗೆ ಪ್ರಮಾಣ ಮಾಡಿ ಅವರಿಗೆ ವಶವಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಏಕೆಂದರೆ ಅವನು ಆರಹನ ಮಗ ಶೆಕನ್ಯನ ಅಳಿಯನಾಗಿದ್ದ ಹಾಗು ಯೆಹೋಹಾನಾನನೆಂಬ ಅವನ ಮಗ ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ಮದುವೆಮಾಡಿಕೊಂಡಿದ್ದ. ಆದ್ದರಿಂದ ಯೆಹೂದ್ಯರಲ್ಲಿ ಅನೇಕರು ಅವನಿಗೆ ಪ್ರಮಾಣಮಾಡಿ ಅವನ ಪಕ್ಷದವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯಾಕಂದರೆ ಅವನು ಆರಹನ ಮಗನಾದ ಶೆಕನ್ಯನ ಅಳಿಯನೂ ಯೆಹೋಹಾನಾನನೆಂಬ ಅವನ ಮಗನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ಮದುವೆಮಾಡಿಕೊಂಡವನೂ ಆಗಿದ್ದದರಿಂದ ಯೆಹೂದ್ಯರಲ್ಲಿ ಅನೇಕರು ಅವನಿಗೆ ಪ್ರಮಾಣಮಾಡಿ ವಶರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಟೋಬೀಯನೂ ಅವರಿಗೆ ಉತ್ತರಿಸುತ್ತಿದ್ದನು. ಅವರು ಆ ಪತ್ರಗಳನ್ನು ಕಳುಹಿಸಲು ಕಾರಣವೇನೆಂದರೆ ಯೆಹೂದ್ಯರಲ್ಲಿ ಅನೇಕ ಜನರು ಅವನಿಗೆ ನಂಬಿಗಸ್ತರಾಗಿರುವುದಾಗಿ ವಾಗ್ದಾನ ಮಾಡಿದ್ದರು. ಟೋಬೀಯನು ಆರಹನ ಮಗನಾದ ಶೆಕನ್ಯನ ಅಳಿಯನಾಗಿದ್ದುದೇ ಇದಕ್ಕೆ ಕಾರಣ. ಟೋಬೀಯನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳೊಂದಿಗೆ ಲಗ್ನವಾಗಿದ್ದನು. ಅಧ್ಯಾಯವನ್ನು ನೋಡಿ |