ನೆಹೆಮೀಯ 6:3 - ಕನ್ನಡ ಸಮಕಾಲಿಕ ಅನುವಾದ3 ಆದಕಾರಣ ನಾನು ಅವರ ಬಳಿಗೆ ದೂತರನ್ನು ಕಳುಹಿಸಿ, “ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ, ಬರಲಾರೆನು. ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಕೆಲಸವು ನಿಂತುಹೋಗುವುದು,” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ನಾನು ದೂತರ ಮುಖಾಂತರವಾಗಿ ಅವರಿಗೆ, “ನನಗೆ ಒಂದು ದೊಡ್ಡ ಕೆಲಸವುಂಟು; ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಆ ಕೆಲಸವು ನಿಂತು ಹೋಗುವುದು; ನಾನು ಬರಲು ಸಾಧ್ಯವಿಲ್ಲ” ಎಂದು ಹೇಳಿ ಕಳುಹಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಾನು ದೂತರ ಮುಖಾಂತರ ಅವರಿಗೆ, “ನನಗೆ ಮುಖ್ಯವಾದ ಕಾರ್ಯವಿದೆ; ಅದನ್ನು ಬಿಟ್ಟು ಬಂದರೆ ಕೆಲಸ ನಿಂತುಹೋಗುತ್ತದೆ; ನಾನು ಬರಲಾಗದು,” ಎಂದು ಹೇಳಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರು ನನಗೆ ಕೇಡು ಬಗೆಯುವವರು ಎಂದು ತಿಳಿದು ನಾನು ದೂತರ ಮುಖಾಂತರವಾಗಿ ಅವರಿಗೆ - ನನಗೆ ದೊಡ್ಡ ಜಂಬರವುಂಟು; ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಕೆಲಸವು ನಿಂತುಹೋಗುವದು; ನಾನು ಬರಲಾರೆನು ಎಂದು ಹೇಳಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ಅವರಿಗೆ ಸೇವಕರ ಮುಖಾಂತರ ಈ ಉತ್ತರವನ್ನು ಕಳುಹಿಸಿದೆನು: “ನಾನು ಬಹಳ ವಿಶೇಷವಾದ ಕೆಲಸ ಮಾಡಿಸುತ್ತಿದ್ದೇನೆ. ಆದ್ದರಿಂದ ನನಗೆ ಬರಲು ಸಾಧ್ಯವಿಲ್ಲ. ನನ್ನ ಬರುವಿಕೆಯಿಂದಾಗಿ ಈ ಕೆಲಸವು ನಿಂತು ಹೋಗಬಾರದು.” ಅಧ್ಯಾಯವನ್ನು ನೋಡಿ |