Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:4 - ಕನ್ನಡ ಸಮಕಾಲಿಕ ಅನುವಾದ

4 ಪಟ್ಟಣವು ವಿಸ್ತಾರವಾಗಿಯೂ, ದೊಡ್ಡದಾಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚವಾಗಿದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪಟ್ಟಣವು ವಿಸ್ತಾರವಾಗಿದ್ದರೂ ಅದರೊಳಗೆ ಬಹಳ ಸ್ವಲ್ಪ ಜನರು ಮಾತ್ರ ಇದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪಟ್ಟಣವೇನೊ ಸವಿಸ್ತಾರವಾಗಿತ್ತು. ಆದರೆ ಅದರೊಳಗಿದ್ದ ಜನ ಬಹಳ ಸ್ವಲ್ಪಮಂದಿ. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪಟ್ಟಣವು ಎಲ್ಲಾ ಕಡೆಗಳಲ್ಲಿ ವಿಸ್ತಾರವಾಗಿದ್ದರೂ ಅದರೊಳಗೆ ಬಹು ಸ್ವಲ್ಪಜನರಿದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜೆರುಸಲೇಮ್ ಪಟ್ಟಣವು ವಿಸ್ತಾರವಾಗಿದ್ದರೂ ಅದರಲ್ಲಿ ವಾಸಿಸುವ ಜನರು ಸ್ವಲ್ಪವೇ ಆಗಿದ್ದರು. ಕೆಡವಲ್ಪಟ್ಟಿದ್ದ ಮನೆಗಳು ತಿರುಗಿ ಕಟ್ಟಲ್ಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:4
7 ತಿಳಿವುಗಳ ಹೋಲಿಕೆ  

ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು. ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳನ್ನು ನೀನು ಎಬ್ಬಿಸುವೆ. ಬಿದ್ದ ಗೋಡೆಯನ್ನು ಎಬ್ಬಿಸುವ ದೇಶ ಎಂದೂ, ನಿವಾಸಿಗಳಿಗಾಗಿ ನಡೆದಾಡಲು ಹಾದಿಗಳನ್ನು ಉಂಟುಮಾಡುವ ದೇಶ ಎಂದೂ ನಿನಗೆ ಬಿರುದು ಬರುವುದು.


ಆಗ ನಾನು ಅವರಿಗೆ, “ಬಿಸಿಲು ಏರುವುದಕ್ಕಿಂತ ಮೊದಲೇ ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು. ಇದಲ್ಲದೆ ನೀವು ಸಮೀಪದಲ್ಲಿ ನಿಂತಿರುವಾಗ, ಕದಗಳನ್ನು ಮುಚ್ಚಿ ಅಗುಳಿಗಳನ್ನು ಹಾಕಿರಿ. ಯೆರೂಸಲೇಮಿನ ನಿವಾಸಿಗಳಲ್ಲಿ ಪ್ರತಿ ಮನುಷ್ಯನು ತನ್ನ ಮನೆಗೆ ಎದುರಾಗಿ ಕಾವಲಾಗಿರಲು ನೇಮಿಸಿರಿ,” ಎಂದು ಹೇಳಿದೆನು.


ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸುವ ಹಾಗೆ ಶ್ರೇಷ್ಠರನ್ನೂ, ಅಧಿಕಾರಸ್ಥರನ್ನೂ, ಸಾಮಾನ್ಯ ಜನರನ್ನೂ ಸಭೆಯಾಗಿಸೇರಲು, ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿಸಿದರು. ಆಗ ನಾನು ಮೊದಲು ಬಂದವರ ವಂಶಾವಳಿಯ ಪಟ್ಟಿಯನ್ನು ಕಂಡೆನು. ಅದರಲ್ಲಿ ಬರೆದದ್ದೇನೆಂದರೆ:


ಈಗ ಜನರ ನಾಯಕರು ಯೆರೂಸಲೇಮಿನಲ್ಲಿ ನೆಲೆಸಿದರು. ಉಳಿದ ಜನರೊಳಗೆ ಹತ್ತು ಮಂದಿಯಲ್ಲಿ ಒಂಬತ್ತು ಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಹತ್ತರಲ್ಲೊಬ್ಬರು ಪವಿತ್ರ ನಗರವಾದ ಯೆರೂಸಲೇಮಿನಲ್ಲಿ ಬಂದು ವಾಸಿಸಲು ಚೀಟುಹಾಕಿದರು.


ಆಗ ಜನರು ಯೆರೂಸಲೇಮಿನಲ್ಲಿ ವಾಸವಾಗಿರಲು, ಸಮ್ಮತಿಪಟ್ಟವರೆಲ್ಲರನ್ನು ಆಶೀರ್ವದಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು