Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:7 - ಕನ್ನಡ ಸಮಕಾಲಿಕ ಅನುವಾದ

7 ಜೆರುಬ್ಬಾಬೆಲನ ಸಂಗಡ ಹಿಂದಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ. ಇಸ್ರಾಯೇಲ್ ಜನಾಂಗದ ಪುರುಷರ ಸಂಖ್ಯೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ. ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ ಎಂಬ ನಾಯಕರೊಡನೆ ತಿರುಗಿ ಬಂದ ಇಸ್ರಾಯೇಲರು ಯಾರೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರತ್, ಬಿಗ್ವೈ, ನೆಹೂಮ್ ಹಾಗು ಬಾಣ ಎಂಬವರು: ಆ ಅವರ ಜನಸಾಮಾನ್ಯರಲ್ಲಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ವಿುಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ ಎಂಬ ನಾಯಕರೊಡನೆ ತಿರಿಗಿ ಬಂದವರು ಯಾರಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇವರು ಜೆರುಬ್ಬಾಬೆಲ್‌ನೊಂದಿಗೆ ಹಿಂತಿರುಗಿದರು. ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್ ಮತ್ತು ಬಾಣ. ಇಸ್ರೇಲಿನ ಜನರಲ್ಲಿ ಹಿಂದೆ ಬಂದವರ ವಿವರ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:7
15 ತಿಳಿವುಗಳ ಹೋಲಿಕೆ  

ಜೆರುಬ್ಬಾಬೆಲನ ಸಂಗಡ ಹಿಂದಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಹಾಗೂ ಬಾಣ. ಇಸ್ರಾಯೇಲ್ ಜನಾಂಗದ ಪುರುಷರ ಸಂಖ್ಯೆ:


ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು:


ಅವುಗಳ ಮುಖಗಳು ಹೀಗಿದ್ದವು. ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಿಕೊಂಡಿದ್ದವು. ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು, ಒಂದಕ್ಕೊಂದು ಅಂಟಿಕೊಂಡಿದ್ದವು. ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.


ಇದಲ್ಲದೆ ಯೇಷೂವನು ಯೋಯಾಕೀಮನ ತಂದೆ, ಯೋಯಾಕೀಮನು ಎಲ್ಯಷೀಬನನ್ನು ಪಡೆದನು; ಎಲ್ಯಾಷೀಬನು ಯೋಯಾದನನ್ನು ಪಡೆದನು;


ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ. ಇವರು ಯೇಷೂವನ ದಿವಸಗಳಲ್ಲಿ ಯಾಜಕರಲ್ಲಿಯೂ, ಅವರ ಸಂಗಡಿಗರಲ್ಲಿಯೂ ಮುಖ್ಯಸ್ಥರಾಗಿದ್ದರು.


ಶೆಕನ್ಯ, ರೆಹೂಮ್, ಮೆರೇಮೋತ್,


ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನ ಮತ್ತು ಯೇಷೂವನ ಸಂಗಡ ಹೋದ ಯಾಜಕರೂ ಲೇವಿಯರೂ ಯಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,


ಆದಕಾರಣ ಅರಸನು ನನಗೆ, “ನಿನಗೆ ಕಾಯಿಲೆ ಇಲ್ಲದೆ ಇರುವಾಗ, ನಿನ್ನ ಮುಖವು ದುಃಖದಿಂದಿರುವುದೇನು? ನಿನಗೆ ರೋಗ ಏನೂ ಇಲ್ಲವಲ್ಲ? ಇದು ಮನೋವೇದನೆಯೇ ಹೊರತು ಬೇರೇನೂ ಅಲ್ಲ,” ಎಂದನು. ಆಗ ನಾನು ಬಹು ಭಯಪಟ್ಟು ಅರಸನಿಗೆ,


ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಿಸಲು ಪ್ರಾರಂಭಿಸಿದರು. ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಸೆರೆಯಾಗಿ ಹೋಗಿ, ಅನಂತರ ಬಂಧನದಿಂದ ಬಿಡುಗಡೆಯಾಗಿ ಯೆರೂಸಲೇಮಿಗೂ, ಯೆಹೂದಕ್ಕೂ, ತಮ್ಮ ತಮ್ಮ ಪಟ್ಟಣಗಳಿಗೂ


ಪರೋಷನ ವಂಶಜರು 2,172 ಮಂದಿ ಇದ್ದರು.


ಯೆರೂಸಲೇಮಿನಲ್ಲಿ ವಾಸವಾಗಿದ್ದ ಸಂಸ್ಥಾನಪ್ರಧಾನರು ಯಾರೆಂದರೆ: ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರೂ, ಸೊಲೊಮೋನನ ಸೇವಕರ ಮಕ್ಕಳೂ, ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು